Homeಮುಖಪುಟವಿಡಿಯೋದಲ್ಲಿ 'ಅಸ್ಸಲಾಮು ಅಲೈಕುಮ್' - 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

- Advertisement -
- Advertisement -

‘ಅಸ್ಸಲಾಮು ಅಲೈಕುಮ್’ ಮತ್ತು ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆ ಆದೇಶವನ್ನು ಸೋಮವಾರ, ಸೆಪ್ಟೆಂಬರ್ 14 ರಂದು ರಾಜ್ಯ ಸರ್ಕಾರ ಹೊರಡಿಸಿದೆ. ಖರಗ್‌ಪುರದ ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದ ಬಾನೋ ಅವರನ್ನು ರಾಜ್ಯ ಸಶಸ್ತ್ರ ಪಡೆಯ 4ನೇ ಬಟಾಲಿಯನ್‌ನ ಡೆಪ್ಯುಟಿ ಕಮಾಂಡೆಂಟ್ ಆಗಿ ವರ್ಗಾಯಿಸಲಾಗಿದೆ.

ಅವರ ಜಾಗಕ್ಕೆ ಚಂದನ್ನಗರ್ ಪೊಲೀಸ್ ಕಮಿಷನರೇಟ್‌ನ ಹೆಚ್ಚುವರಿ ಉಪ ಪೊಲೀಸ್ ಕಮಿಷನರ್ ಆಗಿದ್ದ ಪಾರ್ಥ ಘೋಷ್ ಅವರನ್ನು ನೇಮಿಸಲಾಗಿದೆ.

ಬುಷ್ರಾ ಬಾನೋ ಅವರು ನಾಗರಿಕ ಸೇವೆಗೆ ಸೇರಿದ ತಮ್ಮ ಪ್ರಯಾಣವನ್ನು ಹಂಚಿಕೊಳ್ಳುವ ವಿಡಿಯೋವೊಂದನ್ನು ಪೋಸ್ಟ್ ಮಾಡಿದ ನಂತರ ಈ ವರ್ಗಾವಣೆ ನಡೆದಿದೆ. ವಿಡಿಯೋದಲ್ಲಿ ಅವರು “ಅಸ್ಸಲಾಮು ಅಲೈಕುಮ್”, “ಇನ್ಶಾ ಅಲ್ಲಾ” ಎಂದು ಶುಭಕೋರಿ, ಕೊನೆಯಲ್ಲಿ “ಜಜಾಕಲ್ಲಾ” ಎಂದು ಹೇಳಿ ಮಾತು ಮುಗಿಸಿದ್ದರು.

ಅಧಿಕಾರಿಯು ವಂದೇ ಮಾತರಂ ಅಥವಾ ಜೈ ಹಿಂದ್ ಎಂದು ಹೇಳಿಲ್ಲ ಎಂದು ಆರೋಪಿಸಿ ‘ಹಿಂದೂ ಲೀಗಲ್ ಫಂಡ್’ ಸರ್ಕಾರಕ್ಕೆ ದೂರು ನೀಡಿತ್ತು.

“ಭಾರತೀಯ ರಾಜ್ಯವನ್ನು ಪ್ರತಿನಿಧಿಸುವ ಸೇವೆಯಲ್ಲಿರುವ ಅಧಿಕಾರಿಯು ತಟಸ್ಥತೆಯನ್ನು ಕಾಯ್ದುಕೊಳ್ಳಬೇಕು. ಸಾರ್ವಜನಿಕ ಸಂವಹನದಲ್ಲಿ ರಾಷ್ಟ್ರೀಯ ಅಭಿವ್ಯಕ್ತಿಗಳನ್ನು ಬಳಸಬೇಕು” ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದ ಸಂಸ್ಥೆಯು, ಐಪಿಎಸ್‌ ಅಧಿಕಾರಿ ವಿರುದ್ಧ ತನಿಖೆಗೆ ಆಗ್ರಹಿಸಿತ್ತು.

ತಮ್ಮ ಪ್ರಯಾಣದ ಅನುಭವ ಹಂಚಿಕೊಂಡ ಐಪಿಎಸ್ ಬುಷ್ರಾ ಬಾನೋ

ಐಪಿಎಸ್ ಬುಷ್ರಾ ಬಾನೋ ಅವರ ವಿಡಿಯೋ ಮುಖ್ಯವಾಗಿ ಸೌದಿ ಅರೇಬಿಯಾದ ಸಹಾಯಕ ಪ್ರಾಧ್ಯಾಪಕ ಹುದ್ದೆಯಿಂದ ಭಾರತದ ಅತ್ಯಂತ ಗೌರವಾನ್ವಿತ ಸರ್ಕಾರಿ ಹುದ್ದೆಗೆ ತಲುಪಿದ ಅವರ ಪ್ರಯಾಣದ ಕುರಿತಾಗಿತ್ತು. ಅಧ್ಯಯನ ಸಾಮಗ್ರಿಗಳು, ಟೆಸ್ಟ್ ಸರಣಿಗಳು ಮತ್ತು ಗ್ರಂಥಾಲಯದ ಸೌಲಭ್ಯವನ್ನು ಒದಗಿಸಿ ನೆರವಾದ ಎಎಂಯು ವಸತಿ ತರಬೇತಿ ಅಕಾಡೆಮಿಗೆ ಅವರು ಶ್ರೇಯಸ್ಸು ಸಲ್ಲಿಸಿದ್ದರು.

ಅವರು ಪಶ್ಚಿಮ ಬಂಗಾಳ ಕೆಡರ್‌ನ 2021 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಅವರ ಮೊದಲ ಪೋಸ್ಟಿಂಗ್ ಹೂಗ್ಲಿ ಗ್ರಾಮಾಂತರ ಪ್ರದೇಶದಲ್ಲಿ ಸಹಾಯಕ ಪೊಲೀಸ್ ಸೂಪರಿಂಟೆಂಡೆಂಟ್ (ಎಎಸ್‌ಪಿ) ಆಗಿತ್ತು. ಈ ವರ್ಷದ ಜೂನ್‌ನಲ್ಲಿ ಅವರಿಗೆ ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ ಆಗಿ ಬಡ್ತಿ ನೀಡಲಾಗಿತ್ತು. ಪ್ರಸ್ತುತ ಖರಗ್‌ಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...