Homeಅಂತರಾಷ್ಟ್ರೀಯಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

- Advertisement -
- Advertisement -

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ (ಆಗಸ್ಟ್ 7) ತಮ್ಮ ಕಚೇರಿಯ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಸಂದರ್ಶನವೊಂದರಲ್ಲಿ ಪೆಝೇಷ್ಕಿಯಾನ್ ಈ ಹೇಳಿಕೆ ನೀಡಿದ್ದಾರೆ. ಅಮೆರಿಕದೊಂದಿಗೆ ಮಾತುಕತೆ ನಡೆಸಿ ಯುದ್ಧ ಕೊನೆಗೊಳಿಸುವ ತಿಳಿವಳಿಕೆ ಒಪ್ಪಂದಕ್ಕೆ (MoU) ಸಹಿ ಹಾಕುವ ಇರಾನ್ ಸರ್ಕಾರದ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡಿದ್ದಾರೆ.

ಈ ಒಪ್ಪಂದದಡಿ ಅಮೆರಿಕ ತನ್ನ ಭರವಸೆಗಳನ್ನು ಈಡೇರಿಸುವವರೆಗೆ ಮಾತ್ರ ಇರಾನ್ ಕೂಡ ತನ್ನ ಬದ್ಧತೆಯನ್ನು ಕಾಯ್ದುಕೊಳ್ಳಲಿದೆ ಎಂದು ಹೇಳಿದ ಅವರು, “ಅಮೆರಿಕ ಎಲ್ಲೆಲ್ಲಿ ತಮ್ಮ ಭರವಸೆಗಳನ್ನು ಈಡೇರಿಸಲು ವಿಫಲರಾಗುತ್ತಾರೋ, ಅಲ್ಲೆಲ್ಲಾ ನಾವೂ ಈ ಪ್ರಕ್ರಿಯೆಯನ್ನು ಮುಂದುವರಿಸಲು ಯಾವುದೇ ಬಾಧ್ಯತೆ ಹೊಂದಿರುವುದಿಲ್ಲ” ಎಂದಿದ್ದಾರೆ.

ಇದಕ್ಕೂ ಮುನ್ನ, ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ವರದಿಗಳನ್ನು ಪೆಝೇಷ್ಕಿಯಾನ್ ತಳ್ಳಿಹಾಕಿದ್ದು, “ದೃಢನಿಶ್ಚಯದಿಂದ ತಮ್ಮ ಕೆಲಸವನ್ನು ಮುಂದುವರಿಸುವುದಾಗಿ” ತಿಳಿಸಿದ್ದರು. ಅಮೆರಿಕದೊಂದಿಗಿನ ಒಪ್ಪಂದದ ವಿಚಾರವಾಗಿ ಇರಾನ್ ನಾಯಕತ್ವದಲ್ಲಿ ಭಿನ್ನಾಭಿಪ್ರಾಯ ಮೂಡಿದೆ ಎಂಬ ವದಂತಿಗಳ ನಡುವೆ ಅವರು ಈ ಸ್ಪಷ್ಟನೆ ನೀಡಿದ್ದಾರೆ.

ಕಳೆದ ಜೂನ್‌ನಲ್ಲಿ ಇರಾನ್ ಮತ್ತು ಅಮೆರಿಕ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಅದರಂತೆ, ಅಂತಿಮ ಒಪ್ಪಂದಕ್ಕೆ ಬರಲು ಎರಡೂ ದೇಶಗಳು 60 ದಿನಗಳ ಅವಧಿಯಲ್ಲಿ ಮಾತುಕತೆ ನಡೆಸಬೇಕಿತ್ತು. ಆದರೆ, ಇತ್ತೀಚೆಗೆ ಮತ್ತೆ ಹೆಚ್ಚಿರುವ ಉದ್ವಿಗ್ನತೆಯಿಂದಾಗಿ ಮಾತುಕತೆಯ ಭವಿಷ್ಯ ಅನಿಶ್ಚಿತಗೊಂಡಿದೆ.

ಹಾರ್ಮುಜ್ ಜಲಸಂಧಿಯಲ್ಲಿ ಸ್ಪೋಟದ ಸದ್ದು

ಇನ್ನೊಂದೆಡೆ, ಹಾರ್ಮುಜ್ ಜಲಸಂಧಿಯ ಪ್ರವೇಶದ್ವಾರದಲ್ಲಿ “ಶತ್ರು ಪಡೆಗಳ ಗುರಿ”ಗಳನ್ನು ಇರಾನ್ ಸಶಸ್ತ್ರ ಪಡೆಗಳು ಎದುರಿಸಿದ ಪರಿಣಾಮ, ದಕ್ಷಿಣ ಇರಾನ್‌ನ ಹೊರ್ಮೋಜ್ಗನ್ ಪ್ರಾಂತ್ಯದ ಖೇಷ್ಮ್ (Qeshm) ದ್ವೀಪದಲ್ಲಿ ಗುರುವಾರ ರಾತ್ರಿ ಎರಡು ಸ್ಫೋಟಗಳು ಸಂಭವಿಸಿವೆ ಎಂದು ‘ತಸ್ನಿಮ್’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸ್ಥಳೀಯ ಸಮಯ ರಾತ್ರಿ 9:40 ರ ಸುಮಾರಿಗೆ (ಜಿಎಂಟಿ 18:10) ಸ್ಫೋಟದ ಸದ್ದು ಕೇಳಿಬಂದಿದೆ ಎಂದು ತಸ್ನಿಮ್ ಮೂಲಗಳು ತಿಳಿಸಿದ್ದು, ಇರಾನ್ ನೌಕಾಪಡೆಗಳ ಕಾರ್ಯಾಚರಣೆಯ ವಿವರಗಳನ್ನು ಮುಂಬರುವ ಗಂಟೆಗಳಲ್ಲಿ ಪ್ರಕಟಿಸಲಾಗುವುದು ಎಂದು ವರದಿ ಮಾಡಿದೆ.

ಆದರೆ, ಹೊರ್ಮೋಜ್‌ ಪ್ರಾಂತ್ಯದ ಉಪ ರಾಜ್ಯಪಾಲ ಅಹ್ಮದ್ ನಫಿಸಿ ಮಾತನಾಡಿ, ಖೇಷ್ಮ್ ದ್ವೀಪದಲ್ಲಾಗಲಿ ಅಥವಾ ಪ್ರಾದೇಶಿಕ ರಾಜಧಾನಿ ಬಂದರ್ ಅಬ್ಬಾಸ್‌ನಲ್ಲಾಗಲಿ ಯಾವುದೇ ದಾಳಿ ಅಥವಾ ಅನಾಹುತ ನಡೆದ ಬಗ್ಗೆ ವರದಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸ್ಫೋಟಕ್ಕೆ ಕಾರಣವೇನೆಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ತನಿಖೆ ನಡೆಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು ದಲಿತ ದೌರ್ಜನ್ಯ: ಪ್ರಕರಣಗಳನ್ನು CIDಗೆ ಒಪ್ಪಿಸುವಂತೆ ಆಗ್ರಹಿಸಿ ಗೃಹ ಸಚಿವರನ್ನು ಭೇಟಿಯಾದ ನಿಯೋಗ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತರ ಮೇಲೆ ಸಾಲು ಸಾಲು ದೌರ್ಜನ್ಯ, ಕೊಲೆ ಹಾಗೂ ಅತ್ಯಾಚಾರದಂತಹ ಭೀಕರ ಕೃತ್ಯಗಳು ಹೆಚ್ಚಾಗುತ್ತಿರುವುದನ್ನು ತೀವ್ರವಾಗಿ ಖಂಡಿಸಿ, ದಲಿತ ಹಕ್ಕುಗಳ ಹೋರಾಟಗಾರರ ಹಾಗೂ ಪ್ರಮುಖ ಮುಖಂಡರ ನಿಯೋಗವು ಗೃಹ...

ಶಾರ್ಜೀಲ್ ಇಮಾಮ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು

ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್‌ಗೆ ಅವರ ಸೋದರಸಂಬಂಧಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯವು ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಅಕ್ಟೋಬರ್ 4 ರಿಂದ ಅಕ್ಟೋಬರ್ 10 ರವರೆಗೆ ಇರಲಿದೆ...

ಎಬಿವಿಪಿ ಒತ್ತಡಕ್ಕೆ ಮುಸ್ಲಿಂ ಪ್ರಾಧ್ಯಾಪಕಿ ರಾಜೀನಾಮೆ; ಕಾಲೇಜು ಆವರಣ ‘ಶುದ್ಧೀಕರಣ’ ಮಾಡಿದ ಬಲಪಂಥೀಯ ಗುಂಪು

ಕೋಲ್ಕತ್ತಾದ ಸುರೇಂದ್ರನಾಥ ಕಾಲೇಜಿನ ಮುಸ್ಲಿಂ ಪ್ರಾಧ್ಯಾಪಕಿ ಮೊಹಮ್ಮದಿ ತರನ್ನುಮ್ ಅವರನ್ನು ಹಾಜರಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ. ಇದಾದ ಬಳಿಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು...

SIR ಪರಿಶೋಧ ಹಾಗೂ ಪ್ರತಿರೋಧ ಪ್ರವಾಸಕ್ಕೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಚಾಲನೆ: ಸಿಪಿಐ(ಎಂ) ಬೆಂಬಲ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ 'SIR ವಿರೋಧಿ ಕರ್ನಾಟಕ', ನಾಗರಿಕ ಮತಕಾವಲು ಸಮಿತಿ, ಜಾತ್ಯತೀತ ಪಕ್ಷಗಳು ಹಾಗೂ ವಿವಿಧ ನಾಗರಿಕ ಸಂಘಟನೆಗಳ...

ಪಶ್ಚಿಮ ಬಂಗಾಳ: ಸರ್ಕಾರದ ಜೊತೆ ಇರಬೇಕಾದರೆ ಎಲೆಕ್ಷನ್ ‘ಟೆಸ್ಟ್’ನಲ್ಲಿ ಗೆಲ್ಲಿ, ಮುಸ್ಲಿಮರಿಗೆ ಸುವೇಂದು ಅಧಿಕಾರಿ ಎಚ್ಚರಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಮುಂಬರುವ ಉಪಚುನಾವಣೆಯನ್ನು ಅಲ್ಪಸಂಖ್ಯಾತರಿಗೆ ಒಂದು ‘ಪರೀಕ್ಷೆ’ ಎಂದು ಕರೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ವಿವಾದ ಹಾಗೂ ಕಳವಳಕ್ಕೆ ಕಾರಣವಾಗಿದೆ....

ಮಹಿಳೆಯರ ಮೇಲಿನ ದಾಳಿಗಳು ಮತ್ತಷ್ಟು ಹಿಂಸಾತ್ಮಕವಾಗುತ್ತಿವೆ: ಪ್ರಿಯಾಂಕಾ ಗಾಂಧಿ

ದೆಹಲಿ ಮತ್ತು ಬಿಹಾರದಲ್ಲಿ ಮಹಿಳೆಯರ ಮೇಲೆ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಳವಳ ವ್ಯಕ್ತಪಡಿಸಿದ್ದು, ಇಂತಹ ದಾಳಿಗಳು ಹೆಚ್ಚಾಗುತ್ತಿರುವುದು ಮಾತ್ರವಲ್ಲದೆ ಇನ್ನಷ್ಟು ಹಿಂಸಾತ್ಮಕವಾಗುತ್ತಿವೆ...

ಜಮುಯಿ ಅಪ್ರಾಪ್ತರ ಮೇಲಿನ ದೌರ್ಜನ್ಯ ಪ್ರಕರಣ: ಎನ್‌ಕೌಂಟರ್ ಬಳಿಕ ಪ್ರಮುಖ ಆರೋಪಿ ನಂದನ್ ಯಾದವ್ ಬಂಧನ; 7 ಮಂದಿಯಲ್ಲಿ 5 ಮಂದಿ ವಶಕ್ಕೆ

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕೋಚಿಂಗ್‌ ತರಗತಿಯಿಂದ ಮನೆಗೆ ಮರಳುತ್ತಿದ್ದ ಅಪ್ರಾಪ್ತ ಬಾಲಕಿ ಮತ್ತು ಬಾಲಕನನ್ನು ತಡೆದು ಹಲ್ಲೆ ಮಾಡಿ, ಕಿರುಕುಳ ನೀಡಿದ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ....

ಬಿಹಾರ|ಸಭ್ಯ ರೀತಿಯಲ್ಲಿ ಅನೈತಿಕ ಪೊಲೀಸ್‌ಗಿರಿ ಮಾಡಿ: ಬಿಜೆಪಿ ಸಚಿವೆ ಶ್ರೇಯಸಿ ಸಿಂಗ್

ಬಿಹಾರದ ಜಮುಯಿ ಜಿಲ್ಲೆಯಲ್ಲಿ ಯುವಕ ಮತ್ತು ಯುವತಿಗೆ ಗುಂಪೊಂದು ಸಾರ್ವಜನಿಕವಾಗಿ ಕಿರುಕುಳ ನೀಡಿದ ಘಟನೆಯನ್ನು ಖಂಡಿಸುವ ಭರದಲ್ಲಿ, ‘ಅನೈತಿಕ ಪೊಲೀಸ್‌ಗಿರಿಯನ್ನು ಹೆಚ್ಚು ಸಭ್ಯ ಮತ್ತು ಘನತೆಯುತ ರೀತಿಯಲ್ಲಿ ಮಾಡಬಹುದು’ ಎಂದು ಬಿಹಾರದ ಬಿಜೆಪಿ...

ಭೋಪಾಲ್: ಮಕ್ಕಳ ಸಾವಿನ ಬಗ್ಗೆ ವರದಿ ಮಾಡುತ್ತಿದ್ದಾಗ ಪೊಲೀಸರು ಹೋಟೆಲ್‌ಗಳಿಂದ ಹೊರಹಾಕಿದರು ಎಂದು ಖ್ಯಾತ ಯೂಟ್ಯೂಬರ್ ಕಾವ್ಯ ಕರ್ನಾಟಕ್ ಆರೋಪ

ಭೋಪಾಲ್: ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಮಕ್ಕಳ ಸಾವಿನ ಕುರಿತು ವರದಿ ಮಾಡಲು ತೆರಳಿದ್ದ ತಮ್ಮ ತಂಡವನ್ನು ಎರಡು ಹೋಟೆಲ್‌ಗಳಿಂದ ಹೊರಹೋಗುವಂತೆ ಒತ್ತಾಯಿಸಲಾಯಿತು. ಪೊಲೀಸರು ಹೋಟೆಲ್‌ಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ದೆಹಲಿಯಿಂದ ಬಂದ ಪತ್ರಕರ್ತರನ್ನು ಅಲ್ಲಿಂದ...

DELHI SIR |’ನೋಟಿಸ್‌ಗಳನ್ನು ಯಾಂತ್ರಿಕವಾಗಿ ನೀಡಿದಂತಿದೆ, ಲಾಜಿಕಲ್ ಡಿಸ್ಕ್ರಿಪೆನ್ಸಿ ಬಗ್ಗೆ ಸ್ಪಷ್ಟನೆ ಅಗತ್ಯ : ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಮಯದಲ್ಲಿ ಮತದಾರರಿಗೆ ನೀಡಲಾದ ನೋಟಿಸ್‌ಗಳು 'ಬಹುತೇಕ ಯಾಂತ್ರಿಕವಾಗಿ' ಜಾರಿಯಾದಂತೆ ಕಂಡುಬರುತ್ತಿವೆ ಮತ್ತು 'ತಾರ್ಕಿಕ ವ್ಯತ್ಯಾಸ'ವನ್ನು ಗುರುತಿಸಲು ಬಳಸಲಾದ ಆಧಾರದ ಬಗ್ಗೆ ಸ್ಪಷ್ಟೀಕರಣದ ಅಗತ್ಯವಿದೆ...