Homeಮುಖಪುಟಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

- Advertisement -
- Advertisement -

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ ದಾಳಿ ನಡೆಸಿದೆ. ಇದಕ್ಕೆ ಪ್ರತಿಕಾರವಾಗಿ ಇರಾನ್ ಬಹ್ರೇನ್, ಕತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ ಎಂದು newindianexpress.com ವರದಿ ಮಾಡಿದೆ.

ಫೆಬ್ರವರಿ 28ರಂದು ಆರಂಭವಾದ ಯುದ್ಧಕ್ಕೆ ಶಾಶ್ವತ ಅಂತ್ಯವನ್ನು ಕಂಡುಕೊಳ್ಳಲು ಇರಾನ್ ಮತ್ತು ಅಮೆರಿಕ ನಡುವೆ ಮುಂದಿನ ಯಾವುದೇ ಮಾತುಕತೆಗಳು ನಡೆಯಬೇಕಾದರೂ ಹಾರ್ಮುಝ್ ಜಲಸಂಧಿಯೇ ಪ್ರಮುಖ ವಿವಾದಾತ್ಮಕ ಅಂಶವಾಗಿದೆ (ಅಡ್ಡಿಯಾಗಿದೆ). ಯುದ್ಧ ಆರಂಭವಾಗುವ ಮೊದಲು ಜಾಗತಿಕವಾಗಿ ವಹಿವಾಟು ನಡೆಸಲಾಗುತ್ತಿದ್ದ ಒಟ್ಟು ತೈಲ ಮತ್ತು ನೈಸರ್ಗಿಕ ಅನಿಲದ ಸುಮಾರು ಐದನೇ ಒಂದು ಭಾಗದಷ್ಟು ಈ ಜಲಸಂಧಿಯ ಮೂಲಕವೇ ಹಾದುಹೋಗುತ್ತಿತ್ತು. ಯುದ್ಧದ ಸಮಯದಲ್ಲಿ ಇದರ ಮೇಲೆ ಇರಾನ್ ಸಾಧಿಸಿದ ನಿಯಂತ್ರಣವು ಜಾಗತಿಕ ಇಂಧನ ಬಿಕ್ಕಟ್ಟಿಗೆ ಕಾರಣವಾಗಿತ್ತು. ಆದಾಗ್ಯೂ, ತೈಲ ಬೆಲೆಗಳು ಯುದ್ಧದ ಸಮಯದಲ್ಲಿದ್ದ ಗರಿಷ್ಠ ಮಟ್ಟವಾದ ಪ್ರತಿ ಬ್ಯಾರೆಲ್‌ಗೆ 120 ಡಾಲರ್‌ನಿಂದ ಈಗ ಗಣನೀಯವಾಗಿ ಕುಸಿದಿವೆ.

ಅಮೆರಿಕದ ಸೇನೆಯ ಸೆಂಟ್ರಲ್ ಕಮಾಂಡ್ ನೀಡಿರುವ ಮಾಹಿತಿ ಪ್ರಕಾರ, ಈ ಹಿಂದಿನ ಎರಡು ಹಂತದ ದಾಳಿಗಳಿಗೆ ಹೋಲಿಸಿದರೆ ಈ ಬಾರಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ, ಅಂದರೆ ಸುಮಾರು 140 ಸ್ಥಳಗಳ ಮೇಲೆ ದಾಳಿ ಮಾಡಲಾಗಿದೆ. ಪ್ರಮುಖವಾಗಿ ಕ್ಷಿಪಣಿ ಮತ್ತು ಡ್ರೋನ್ ಉಡಾವಣಾ ನೆಲೆಗಳು, ಯುದ್ಧಸಾಮಗ್ರಿ ಸಂಗ್ರಹಾಗಾರಗಳು, ಸಂಪರ್ಕ ಸಾಧನಗಳು ಹಾಗೂ ಇತರೆ ಆಯಕಟ್ಟಿನ ಸ್ಥಳಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ.

“ಹಾರ್ಮುಝ್ ಜಲಸಂಧಿಯ ಮೂಲಕ ಮುಕ್ತವಾಗಿ ಸಂಚರಿಸುವ ಹಡಗುಗಳ ಮೇಲೆ ಇರಾನ್ ಇಷ್ಟಬಂದಂತೆ ದಾಳಿ ಮಾಡುವ ಸಾಮರ್ಥ್ಯವನ್ನು ಈ ವೈಮಾನಿಕ ದಾಳಿಗಳು ಕುಂಠಿತಗೊಳಿಸುತ್ತವೆ” ಎಂದು ಅಮೆರಿಕ ಹೇಳಿಕೊಂಡಿದೆ.

ಪರ್ಷಿಯನ್ ಕೊಲ್ಲಿಯಲ್ಲಿ ನಡೆದಿರುವ ಈ ಹೊಸ ಪರಸ್ಪರ ದಾಳಿಗಳು, ಕದನ ವಿರಾಮ “ಅಂತ್ಯಗೊಂಡಿದೆ” ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಕೆಲವೇ ದಿನಗಳಲ್ಲಿ ಸಂಭವಿಸಿವೆ. ಯುಎಸ್ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಅವರು ಇಂಟರ್‌ನೆಟ್‌ನಲ್ಲಿ, “ಇರಾನ್ ತಪ್ಪು ನಿರ್ಧಾರ ತೆಗೆದುಕೊಂಡಿದೆ. ಈಗ ಅವರು ಅದಕ್ಕೆ ತಕ್ಕ ಬೆಲೆ ತೆರುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಬಹ್ರೇನ್, ಕತಾರ್ ಮತ್ತು ಯುಎಇ ಮೇಲೆ ದಾಳಿ

ಇರಾನ್‌ನಿಂದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳು ನಡೆಯಲಿರುವ ಬಗ್ಗೆ ಯುಎಇ ಭಾನುವಾರ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಇದೇ ಸಮಯದಲ್ಲಿ ನೆರೆಯ ಕತಾರ್‌ನಲ್ಲಿ ಭಾರಿ ಸ್ಫೋಟದ ಶಬ್ದಗಳು ಕೇಳಿಬಂದಿವೆ. ಈ ಸ್ಫೋಟಗಳು ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ಕತಾರ್‌ನಲ್ಲೂ ಕ್ಷಿಪಣಿ ದಾಳಿಯ ಮುನ್ನೆಚ್ಚರಿಕೆ ಸೈರನ್ ಮೊಳಗಿದೆ. ಇರಾನ್ ಕಡೆಯಿಂದ ಬಂದಿರುವ ಕ್ಷಿಪಣಿಗಳನ್ನು ತಡೆದು ಹೊಡೆದುರುಳಿಸಲಾಗಿದೆ ಎಂದು ಕತಾರ್ ಸೇನೆಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದೇ ವೇಳೆ, ಪರ್ಷಿಯನ್ ಕೊಲ್ಲಿಯ ದ್ವೀಪ ರಾಷ್ಟ್ರ ಹಾಗೂ ಅಮೆರಿಕ ನೌಕಾಪಡೆಯ 5ನೇ ಫ್ಲೀಟ್‌ನ (ನೌಕಾಪಡೆಯ ಪ್ರಮುಖ ನೆಲೆ) ನೆಲೆಯಾಗಿರುವ ಬಹ್ರೇನ್‌ನಲ್ಲಿಯೂ ಕ್ಷಿಪಣಿ ದಾಳಿಯ ಮುನ್ನೆಚ್ಚರಿಕೆ ಸೈರನ್‌ಗಳು ಮೊಳಗಿವೆ.

ಇರಾನ್ ಯುಎಇಯ ಯಾವ ಪ್ರದೇಶಗಳ ಮೇಲೆ ದಾಳಿ ಮಾಡಿದೆ ಎಂಬುವುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಅಬುಧಾಬಿ ಮತ್ತು ದುಬೈ ನಗರಗಳನ್ನು ಒಳಗೊಂಡಿರುವ ಯುಎಇ ಮೇಲೆ ಕೊನೆಯ ಬಾರಿಗೆ ಕಳೆದ ಮೇ ತಿಂಗಳಿನಲ್ಲಿ ದಾಳಿ ನಡೆದಿತ್ತು. ಆಗ ಡ್ರೋನ್ ದಾಳಿಯೊಂದರಿಂದಾಗಿ ದೇಶದ ಏಕೈಕ ಪರಮಾಣು ವಿದ್ಯುತ್ ಸ್ಥಾವರದ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಹಾರ್ಮುಝ್ ಜಲಸಂಧಿಯಲ್ಲಿ ಸೈಪ್ರಸ್ ಧ್ವಜ ಹೊಂದಿದ್ದ ಸರಕು ಸಾಗಣೆ ಹಡಗಿನ ಮೇಲೆ ಇರಾನ್ ದಾಳಿ ನಡೆಸಿದ್ದು, ಇದರ ಪರಿಣಾಮವಾಗಿ ಹಡಗಿನ ಇಂಜಿನ್ ಕೋಣೆಗೆ ಗಂಭೀರ ಹಾನಿಯಾಗಿದೆ. ದಾಳಿ ಬಳಿಕ ಹಡಗಿನ ಸಿಬ್ಬಂದಿಯೊಬ್ಬರು ನಾಪತ್ತೆಯಾಗಿದ್ದಾರೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ ತಿಳಿಸಿದೆ.

ಬ್ರಿಟಿಷ್ ಸೇನೆಯ ಮೇಲ್ವಿಚಾರಣೆಯಲ್ಲಿರುವ ಯುನೈಟೆಡ್ ಕಿಂಗ್ಡಮ್ ಮಾರಿಟೈಮ್ ಟ್ರೇಡ್ ಆಪರೇಷನ್ಸ್ (ಯುಕೆಎಂಟಿಒ) ಕೇಂದ್ರವು, ಆ ಹಡಗು ಒಮಾನ್‌ನ ಕರಾವಳಿ ತೀರಕ್ಕೆ ಹೊಂದಿಕೊಂಡಿರುವ ಮಾರ್ಗದಲ್ಲಿ ಚಲಿಸುತ್ತಿತ್ತು ಎಂದು ತಿಳಿಸಿದೆ. ಇರಾನ್‌ನ ಪ್ರಾದೇಶಿಕ ಜಲಪ್ರದೇಶವನ್ನು ತಪ್ಪಿಸಿ, ಪರ್ಷಿಯನ್ ಕೊಲ್ಲಿಯನ್ನು ಪ್ರವೇಶಿಸಲು ಮತ್ತು ಅಲ್ಲಿಂದ ಹೊರಹೋಗಲು ಹಡಗುಗಳು ಈ ಮಾರ್ಗವನ್ನೇ ಬಳಸುತ್ತಿದ್ದವು. ಹಡಗಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಕಾರಣ ಸಿಬ್ಬಂದಿ ಅದನ್ನು ಬಿಟ್ಟು ಹೊರಟಿದ್ದಾರೆ ಎಂದು ಈ ಕೇಂದ್ರವು ಹೇಳಿದೆ.

ಇರಾನ್‌ನ ಅರೆಸೇನಾ ಪಡೆಯಾದ ರೆವಲ್ಯೂಷನರಿ ಗಾರ್ಡ್, “ಹಲವಾರು ಹಡಗುಗಳು ತಮ್ಮ ಮಾರ್ಗವನ್ನು ಸರಿಪಡಿಸಿಕೊಂಡು ಅನುಮೋದಿತ ಮಾರ್ಗದಲ್ಲಿ ಮುಂದುವರಿಯುವಂತೆ ನಾವು ನೀಡಿದ ಎಚ್ಚರಿಕೆಗಳು ಮತ್ತು ಸೂಚನೆಗಳನ್ನು ನಿರ್ಲಕ್ಷಿಸಿವೆ. ಅವುಗಳಲ್ಲಿ ಒಂದಕ್ಕೆ ಎಚ್ಚರಿಕೆಯ ಗುಂಡು ಹಾರಿಸಿ (ವಾರ್ನಿಂಗ್ ಶಾಟ್) ಅದನ್ನು ತಡೆದು ನಿಲ್ಲಿಸಲಾಗಿದೆ” ಎಂದು ತಿಳಿಸಿದೆ.

ಇರಾನ್ ಮತ್ತಷ್ಟು ದಾಳಿಗಳನ್ನು ಎದುರಿಸಬೇಕಾಗಿ ಬಂದರೆ ಪ್ರಾದೇಶಿಕವಾಗಿ ಇರುವ “ಶತ್ರುಗಳ ಹೆಚ್ಚುವರಿ ನೆಲೆಗಳನ್ನು” ಗುರಿಯಾಗಿಸಿಕೊಳ್ಳುವುದಾಗಿ ಎಚ್ಚರಿಸಿದೆ, ಹಾಗೂ ಮುಂದಿನ ಆದೇಶದವರೆಗೆ ಹಾರ್ಮುಝ್ ಜಲಸಂಧಿಯು ಮುಚ್ಚಲ್ಪಟ್ಟಿರುತ್ತದೆ ಎಂದು ಹೇಳಿದೆ.

ಅಮೆರಿಕವು ಇರಾನ್‌ನ ಬಂದರ್ ಅಬ್ಬಾಸ್, ಸಿರಿಕ್ ಮತ್ತು ಜಲಸಂಧಿಯ ಕರಾವಳಿಯುದ್ದಕ್ಕೂ ಇರುವ ಇತರ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ. ಆದಾಗ್ಯೂ, ಈ ದಾಳಿಯಿಂದ ಸಂಭವಿಸಿದ ಸಾವುನೋವುಗಳು ಅಥವಾ ಹಾನಿಯ ಬಗ್ಗೆ ಇರಾನ್ ತಕ್ಷಣಕ್ಕೆ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...