Homeಅಂತರಾಷ್ಟ್ರೀಯಇರಾನ್‌ ದಂಗೆ | ಹತ್ಯೆಗಳು ನಿಂತಿವೆ ಎಂದ ಟ್ರಂಪ್ : ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವ ವರದಿ ತಳ್ಳಿಹಾಕಿದ...

ಇರಾನ್‌ ದಂಗೆ | ಹತ್ಯೆಗಳು ನಿಂತಿವೆ ಎಂದ ಟ್ರಂಪ್ : ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವ ವರದಿ ತಳ್ಳಿಹಾಕಿದ ವಿದೇಶಾಂಗ ಸಚಿವ

- Advertisement -
- Advertisement -

ಇರಾನ್‌ನಲ್ಲಿ ಆಡಳಿತ ವಿರೋಧಿ ಪ್ರತಿಭಟನಾಕಾರರ ‘ಹತ್ಯೆಗಳು ನಿಂತಿವೆ’ ಎಂದು ಬುಧವಾರ (ಜ.14) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಕೂಡ ಪ್ರತಿಭಟನಾಕಾರರನ್ನು ಸರ್ಕಾರ ಗಲ್ಲಿಗೇರಿಸಲು ಯೋಜಿಸಿದೆ ಎಂಬುವುದನ್ನು ತಳ್ಳಿ ಹಾಕಿದ್ದಾರೆ.

ಆಡಳಿತ ವಿರೋಧಿ ಪ್ರತಿಭಟನಾಕಾರರು ವಿದೇಶಿ ಶಕ್ತಿಗಳ (ವಿಶೇಷವಾಗಿ ಅಮೆರಿಕ ಮತ್ತು ಇಸ್ರೇಲ್) ಬೆಂಬಲಿಗರು ಎಂದು ಆರಂಭದಲ್ಲಿ ಇರಾನ್ ಸರ್ಕಾರ ಹೇಳಿತ್ತು. ಕಠಿಣ ಕ್ರಮದ ಎಚ್ಚರಿಕೆ ನೀಡಿತ್ತು. ಅದಾಗ್ಯೂ ಪ್ರತಿಭಟನೆಗಳು ತೀವ್ರಗೊಂಡಾಗ ಪ್ರತಿಭಟನಾಕಾರರು ದೇವರ ಶತ್ರುಗಳು ಎಂದಿತ್ತು. ಅವರನ್ನು ಗಲ್ಲಿಗೇರಿಸುವ ಘೋಷಣೆ ಮಾಡಿತ್ತು.

ಈ ಹಿಂದಿನಿಂದಲೂ ಹಲವು ನೆಪ ಹೇಳಿ ಇರಾನ್‌ ಮೇಲೆ ದಾಳಿ ನಡೆಸುವ ಹಪಹಪಿಯಲ್ಲಿದ್ದ ಟ್ರಂಪ್‌ಗೆ ಈ ಘೋಷಣೆ ದೊಡ್ಡ ಬಲ ನೀಡಿತ್ತು. ಇರಾನ್‌ ಪ್ರತಿಭಟನಾಕಾರರನ್ನು ಕ್ರೂರವಾಗಿ ಧಮನಿಸಲು ಮುಂದಾದರೆ, ಅಥವಾ ಹತ್ಯೆಗಳು ಮುಂದುವರಿದರೆ ಅಮೆರಿಕ ಮಧ್ಯ ಪ್ರವೇಶಿಸಲಿದೆ ಎಂದಿದ್ದರು. ಈ ಮೂಲಕ ಇರಾನ್‌ನ ಆಂತರಿಕ ದಂಗೆಗೆ ಪರೋಕ್ಷ ಬೆಂಬಲ ನೀಡಿದ್ದರು.

ಆದರೆ, ಬುಧವಾರ ಇರಾನ್‌ ಮತ್ತು ಅಮೆರಿಕ ಎರಡೂ ಕಡೆಯ ವರಸೆ ಬದಲಾಗಿದೆ. ಅತ್ತ ಕಡೆಯಿಂದ ಟ್ರಂಪ್ ‘ಇರಾನ್‌ನಲ್ಲಿ ಹತ್ಯೆಗಳು ನಿಂತಿವೆ’ ಎಂದರೆ, ಇತ್ತ ಫಾಕ್ಸ್ ನ್ಯೂಸ್‌ ಜೊತೆ ಮಾತನಾಡಿರುವ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ‘ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವುದಿಲ್ಲ’ ಎಂದಿದ್ದಾರೆ.

ಈ ನಡುವೆ ಬುಧವಾರ-ಗುರುವಾರದ ಮಧ್ಯೆ ಎರಡು ಮಹತ್ವದ ಬೆಳವಣಿಗೆಳು ಆಗಿವೆ. ಅಮೆರಿಕ ಮತ್ತು ಯುಕೆ ಎರಡೂ ಕತಾರ್‌ನಲ್ಲಿರುವ ಅಲ್-ಉದೈದ್ ವಾಯುನೆಲೆಯಲ್ಲಿ ಸಿಬ್ಬಂದಿ ಸಂಖ್ಯೆಯನ್ನು ಕಡಿಮೆ ಮಾಡುತ್ತಿವೆ. ಅಂದರೆ, ಅಲ್ಲಿನ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳುತ್ತಿವೆ ಎಂದು ಬುಧವಾರ ಸಂಜೆ ವರದಿಯಾಗಿತ್ತು.

ಅಮೆರಿಕ ಇರಾನ್‌ ಮೇಲೆ ದಾಳಿ ನಡೆಸುವುದು ನಿಚ್ಚಳವಾಗಿದೆ. ಅದರ ಪೂರ್ವಭಾವಿಯಾಗಿ ತಮ್ಮ ಸೈನಿಕರನ್ನು ವಾಪಸ್‌ ಕರೆಸಿಕೊಳ್ಳುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಏನು ಬೇಕಾದರು ಆಗಬಹುದು ಎಂದು ಬುಧವಾರ ಸಂಜೆ ಜಗತ್ತು ಆತಂಕಗೊಂಡಿತ್ತು. ಆದರೆ, ಅಮೆರಿಕ ಮುನ್ನೆಚ್ಚರಿಕಾ ಕ್ರಮವಾಗಿ ಮಾತ್ರ ತಮ್ಮ ಸೈನಿಕರನ್ನು ವಾಪಸ್ ಕರೆಸಿಕೊಂಡಿದೆ ಎಂದು ವರದಿಗಳು ಹೇಳಿವೆ.

ಮತ್ತೊಂದೆಡೆ, ಅಮೆರಿಕದ ದಾಳಿ ಸಾಧ್ಯತೆ ಹಿನ್ನೆಲೆ ಬುಧವಾರ ಸಂಜೆಯಿಂದ ಇರಾನ್‌ ತನ್ನ ವಾಯು ಪ್ರದೇಶವನ್ನು ಮುಚ್ಚಿತ್ತು. ಅದರೆ, ಗುರುವಾರ ಮುಂಜಾನೆ ತೆರೆದಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ವರದಿಗಳ ಪ್ರಕಾರ, ಇರಾನ್‌ನಲ್ಲಿ ಹತ್ಯೆಗಳು ನಿಂತಿವೆ. ಆದರೆ, ನಾವು ಸೇನಾ ಕಾರ್ಯಾಚರಣೆಯ ಆಯ್ಕೆಯನ್ನು ವಾಪಸ್ ತೆಗೆದುಕೊಂಡಿಲ್ಲ. ಮುಂದಿನ ಬೆಳವಣಿಗೆಯನ್ನು ಕಾದು ನೋಡುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇತ್ತ ಇರಾನ್‌ನಲ್ಲಿ ಪ್ರತಿಭಟನೆಗಳು ಕೊಂಚ ತಣ್ಣಗಾಗಿವೆ ಎಂದು ವರದಿಯಾಗಿದೆ. ಕೆಲ ಮಾನವ ಹಕ್ಕು ಸಂಘಟನೆಗಳು ಇರಾನ್‌ನಲ್ಲಿ ಇದುವರೆಗೆ ಸುಮಾರು 2,500ರಿಂದ 3000 ಜನರು ಸಾವಿಗೀಡಾಗಿದ್ದಾರೆ ಎಂದು ಹೇಳುತ್ತಿವೆ. ಈ ಕುರಿತು ಖಚಿತ ಮಾಹಿತಿಯನ್ನು ಇರಾನ್‌ ಹೊರ ಬಿಟ್ಟಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...