Homeಅಂತರಾಷ್ಟ್ರೀಯಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

- Advertisement -
- Advertisement -

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಡಿಸೆಂಬರ್ 28ರಂದು ಪ್ರಾರಂಭವಾದ ಪ್ರತಿಭಟನೆಗಳು, ಆರಂಭದಲ್ಲಿ ಹೆಚ್ಚುತ್ತಿರುವ ಹಣದುಬ್ಬರದ ಬಗ್ಗೆ ಅಸಮಾಧಾನದ ಮೇಲೆ ಕೇಂದ್ರೀಕೃತವಾಗಿದ್ದವು. ನಂತರ 100ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನಾಕಾರರು ಧಾರ್ಮಿಕ ನಾಯಕರ ಆಡಳಿತವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿದ ಪರಿಣಾಮ, ಅದು ಆಡಳಿತ ವಿರೋಧಿ ದಂಗೆಯಾಗಿ ಪರಿರ್ವತನೆಯಾಗಿದೆ.

ಇರಾನ್‌ನ ಅಧಿಕಾರಿಗಳು ಅಮೆರಿಕ ಮತ್ತು ಇಸ್ರೇಲ್ ದೇಶದಲ್ಲಿ ಅಶಾಂತಿಯನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿದ್ದಾರೆ. ಸರ್ಕಾರ ಗುರುವಾರ ಇಂಟರ್ನೆಟ್ ಮತ್ತು ದೂರವಾಣಿ ಸೇವೆಗಳನ್ನು ಕಡಿತಗೊಳಿಸಿದೆ. ಇದರಿಂದಾಗಿ ದೇಶಕ್ಕೆ ಹೊರಗಿನ ಪ್ರಪಂಚದಿಂದ ಸಂಪರ್ಕ ಕಡಿತಗೊಂಡಿದೆ.

ಪ್ರತಿಭಟನೆಗಳು ಪ್ರಾರಂಭಗೊಂಡು ಎರಡು ವಾರ ಪೂರ್ಣಗೊಳ್ಳುವಾಗ ದೇಶದಲ್ಲಿ ದೃಢಪಡಿಸಿದ ಸಾವಿನ ಸಂಖ್ಯೆ ಶನಿವಾರ 116ಕ್ಕೆ ತಲುಪಿದೆ ಎಂದು ಇರಾನ್‌ನ ಮಾನವ ಹಕ್ಕುಗಳ ಕಾರ್ಯಕರ್ತರು ತಿಳಿಸಿದ್ದಾರೆ. ಇಂಟರ್ನೆಟ್ ಸ್ಥಗಿತಗೊಳಿಸುವಿಕೆ ಮತ್ತು ತೀವ್ರ ಸಂವಹನ ಅಡಚಣೆಗಳು ‘ಮಾಹಿತಿಯನ್ನು ಪ್ರಸಾರ ಮಾಡುವ ಮತ್ತು ಘಟನೆಗಳನ್ನು ಸ್ವತಂತ್ರವಾಗಿ ಪರಿಶೀಲಿಸುವ ಸಾಮರ್ಥ್ಯವನ್ನು ಗಮನಾರ್ಹವಾಗಿ ಸೀಮಿತಗೊಳಿಸಿವೆ’ ಎಂದು ಹೇಳಿದ್ದಾರೆ.

ಪ್ರತಿಭಟನಾ ನಿರತ ಎಲ್ಲರನ್ನೂ ‘ದೇವರ ಶತ್ರು’ ಎಂದು ಪರಿಗಣಿಸಲಾಗುತ್ತದೆ ಎಂದು ಇರಾನ್ ಅಟಾರ್ನಿ ಜನರಲ್ ಮೊಹಮ್ಮದ್ ಮೊವಾಹೆದಿ ಆಝಾದ್ ಶನಿವಾರ ಎಚ್ಚರಿಸಿದ್ದಾರೆ. ಈ ಆರೋಪಕ್ಕೆ ಮರಣದಂಡನೆ ವಿಧಿಸಲಾಗುತ್ತದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಗಲಭೆಕೋರರಿಗೆ ಸಹಾಯ ಮಾಡುವ ವ್ಯಕ್ತಿಗಳು ಕೂಡ ಈ ಆರೋಪ ಎದುರಿಸಬೇಕಾಗುತ್ತದೆ ಎಂದು ಮೊವಾಹೆದಿ ಹೇಳಿದ್ದನ್ನು ಇರಾನ್ ಸರ್ಕಾರದ ದೂರದರ್ಶನ ಉಲ್ಲೇಖಿಸಿದೆ.

“ನಮ್ಮ ದೇಶದ ವಿರುದ್ಧ ದ್ರೋಹ ಮಾಡಿ, ಜನರಲ್ಲಿ ಭಯ ಹುಟ್ಟಿಸಿ, ಅಶಾಂತಿ ಸೃಷ್ಟಿಸಿ, ವಿದೇಶಿ ಶಕ್ತಿಗಳ ಆಳ್ವಿಕೆ ತರಲು ಯತ್ನಿಸುವ ಎಲ್ಲರ ವಿರುದ್ಧ ತ್ವರಿತವಾಗಿ, ಕಠಿಣವಾಗಿ ಕಾನೂನು ಕ್ರಮ ಕೈಗೊಳ್ಳಿ. ಆರೋಪಪತ್ರಗಳನ್ನು ತ್ವರಿತವಾಗಿ ದಾಖಲಿಸಿ, ಶೀಘ್ರ ವಿಚಾರಣೆ ನಡೆಸಿ, ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿ. ಯಾವುದೇ ದಯೆ, ಕ್ಷಮೆ, ಸಹನೆ ಇರಬಾರದು” ಎಂದು ಮೊವಾಹೆದಿ ಹೇಳಿದ್ದಾರೆ.

ಈ ನಡುವೆ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳು ರಾಜಧಾನಿ ತೆಹ್ರಾನ್ ಮತ್ತು ಉತ್ತರದಲ್ಲಿ ರಾಶ್ಟ್, ವಾಯುವ್ಯದಲ್ಲಿ ತಬ್ರಿಝ್ ಮತ್ತು ದಕ್ಷಿಣದಲ್ಲಿ ಶಿರಾಜ್ ಮತ್ತು ಕೆರ್ಮನ್‌ನಂತಹ ಹಲವಾರು ನಗರ ಕೇಂದ್ರಗಳಲ್ಲಿ ಹೊಸದಾಗಿ ಪ್ರತಿಭಟನೆಗಳು ಭುಗಿಲೆದ್ದಿರುವುದನ್ನು ತೋರಿಸಿವೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....