Homeಅಂತರಾಷ್ಟ್ರೀಯದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

- Advertisement -
- Advertisement -

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ.

ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ “ಅಮೆರಿಕ ಇರಾನ್ ಮೇಲೆ ಸೇನಾ ದಾಳಿ ನಡೆಸಿದರೆ, ಅಮೆರಿಕದ ಸೈನ್ಯ ಮತ್ತು ಇಸ್ರೇಲ್ ಎರಡೂ ನಮ್ಮ ಕಾನೂನುಬದ್ಧ ಗುರಿಗಳಾಗುತ್ತವೆ” ಎಂದು ಎಚ್ಚರಿಸಿದ್ದಾರೆ.

ಸಂಸತ್ ಅಧ್ಯಕ್ಷರು ಈ ರೀತಿ ಹೇಳುತ್ತಿದ್ದಂತೆ, ಸಂಸದರು ಅಧ್ಯಕ್ಷರ ಪೀಠ ಏರಿ “ಅಮೆರಿಕಕ್ಕೆ ಮರಣ!” (Death to America!) ಎಂದು ಜೋರಾಗಿ ಕೂಗಿದ್ದಾರೆ.

“ಇರಾನ್‌ನ ಶಾಂತಿಯುತ ಪ್ರತಿಭಟನಾಕಾರರ ಹತ್ಯೆ ಮುಂದುವರಿದರೆ, ಅವರನ್ನು ರಕ್ಷಿಸಲು ಅಮೆರಿಕ ಮಧ್ಯ ಪ್ರವೇಶಿಸಲಿದೆ. ಹಿಂದೆಂದಿಗಿಂತಲೂ ಹೆಚ್ಚಾಗಿ ಇರಾನ್ ಸ್ವಾತಂತ್ರ್ಯ ಬಯಸುತ್ತಿದೆ. ಅದಕ್ಕೆ ಸಹಾಯ ಮಾಡಲು ಯುಎಸ್‌ ಸಿದ್ದವಾಗಿದೆ” ಎಂದು ಟ್ರಂಪ್ ಹೇಳಿದ್ದಾರೆ.

ಪ್ರತಿಭಟನಾಕಾರರು ವಿದೇಶಿ ಶಕ್ತಿಗಳ (ವಿಶೇಷವಾಗಿ ಅಮೆರಿಕ ಮತ್ತು ಇಸ್ರೇಲ್‌) ಬೆಂಬಲಿಗರು ಎಂದು ಇರಾನ್ ಆರೋಪಿಸಿದೆ. ದೇಶದಲ್ಲಿ ಆಡಳಿತ ವಿರೋಧಿ ದಂಗೆ ಏಳಿಸಿದ್ದೇ ಅಮೆರಿಕ ಮತ್ತು ಇಸ್ರೇಲ್ ಎಂದು ಹೇಳಿದೆ. ಇದನ್ನು ಪುಷ್ಠೀಕರಿಸುವಂತೆ ಇರಾನ್‌ನ ಮಾಜಿ ದೊರೆಯ ಮಗ ರೆಝಾ ಪಹ್ಲವಿ ಇರಾನ್‌ನ ಆಂತರಿಕ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಟ್ರಂಪ್‌ಗೆ ಮನವಿ ಮಾಡಿದ್ದಾರೆ.

ಪ್ರತಿಭಟನಾಕಾರರು ಇರಾನ್‌ ಇಸ್ಲಾಮಿಕ್ ಗಣರಾಜ್ಯದ ಸರ್ವೋಚ್ಚ ನಾಯಕ ಅಯಾತೊಲ್ಲ ಖಮೇನಿಯನ್ನು ಪಟ್ಟದಿಂದ ಕೆಳಗಿಳಿಸುವ ಘೋಷಣೆಗಳನ್ನು ಕೂಗುತ್ತಿದ್ದಾರೆ ಮತ್ತು ಪಹ್ಲವಿ ರಾಜಾಡಳಿತವನ್ನು ಬಯಸುತ್ತಿದ್ದಾರೆ. ಇವೆಲ್ಲವೂ ಅಮೆರಿಕ ಮತ್ತು ಇಸ್ರೇಲ್‌ನ ಕುತಂತ್ರ. ಪಹ್ಲವಿ ಟ್ರಂಪ್‌ನ ಸಾಕು ನಾಯಿ ಎಂದು ಇರಾನ್ ಹೇಳಿದೆ.

ಪ್ರತಿಭಟನಾಕಾರರನ್ನು ‘ದೇವರ ವಿರೋಧಿಗಳು’ ಎಂದು ಇರಾನ್‌ ಸರ್ಕಾರ ಘೋಷಣೆ ಮಾಡಿದ್ದು, ಅವರಿಗೆ ಮರಣದಂಡನೆ ವಿಧಿಸಲು ಸಿದ್ದತೆ ನಡೆಸಿದೆ. ಈಗಾಗಲೇ 116ರಕ್ಕೂ ಹೆಚ್ಚು ಪ್ರತಿಭಟನಾಕಾರರು ಭದ್ರತಾ ಪಡೆಯ ಗುಂಡಿಗೆ ಬಲಿಯಾಗಿದ್ದಾರೆ.

ಇರಾನ್ ಸರ್ಕಾರದ ಅಧೀನದ ದೂರದರ್ಶನ ಸಂಸತ್ತಿನ ಅಧಿವೇಶನವನ್ನು ನೇರ ಪ್ರಸಾರ ಮಾಡಿದೆ. ಅದರಲ್ಲಿ ಕಂಡಂತೆ ಈ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಂಸತ್ತಿನ ಹಾಲಿ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್, ಪ್ರತಿಭಟನೆಯ ಸಮಯದಲ್ಲಿ ಸರ್ಕಾರದ ಪರ ನಿಂತ ಪೊಲೀಸರು, ಇಸ್ಲಾಮಿಕ್ ಪ್ಯಾರಾಮಿಲಿಟರಿ ಪಡೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ (ಐಆರ್‌ಜಿಸಿ), ಅದರ ಸ್ವಯಂಸೇವಕ ತಂಡ ಬಸಿಜ್‌ಗೆ ಧನ್ಯವಾದ ಹೇಳಿದ್ದಾರೆ.

“ಪ್ರತಿಭಟನಾ ನಿರತ ಇರಾನಿನ ಜನರೇ, ನಾವು ನಿಮ್ಮನ್ನು ಬಂಧಿಸುತ್ತೇವೆ, ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಖಲೀಬಾಫ್ ಎಚ್ಚರಿಕೆ ನೀಡಿದ್ದಾರೆ. ಆಕ್ರಮಿತ ಪ್ರದೇಶ ಎಂದ ಇಸ್ರೇಲ್‌ ಅನ್ನು ಉಲ್ಲೇಖಿಸಿರುವ ಖಲೀಬಾಫ್, ಇಸ್ರೇಲ್ ಮತ್ತು ಅಮೆರಿಕ ಮಿಲಿಟರಿ ಮೇಲೆ ನೇರ ದಾಳಿ ನಡೆಸುವ ಬೆದರಿಕೆ ಹಾಕಿದ್ದಾರೆ.

“ಇರಾನ್ ಮೇಲೆ ದಾಳಿಗೆ ಮುಂದಾದರೆ, ಆಕ್ರಮಿತ ಪ್ರದೇಶ ಮತ್ತು ಅದರೊಳಗಿರುವ ಅಮೆರಿಕದ ಎಲ್ಲಾ ಸೇನಾ ನೆಲೆಗಳು ಮತ್ತು ಹಡಗುಗಳು ನಮ್ಮ ಕಾನೂನುಬದ್ದ ಗುರಿಯಾಗಲಿದೆ. ನಾವು ದಾಳಿ ನಡೆದ ಮೇಲೆ ಪ್ರತಿದಾಳಿ ನಡೆಸುವುದಿಲ್ಲ. ದಾಳಿಯ ಸಣ್ಣ ಸೂಚನೆ ಸಿಕ್ಕರೂ ಕಠಿಣವಾಗಿ ಪ್ರತಿಕ್ರಿಯಿಸುತ್ತೇವೆ ಎಂದಿದ್ದಾರೆ.

2025ರ ಜೂನ್‌ನಲ್ಲಿ ಇಸ್ರೇಲ್ ಜೊತೆಗಿನ 12 ದಿನಗಳ ಸಂಘರ್ಷದಲ್ಲಿ ತನ್ನ ವಾಯು ರಕ್ಷಣಾ ಪಡೆಗಳು ನಾಶವಾದ ನಂತರ, ದಾಳಿ ನಡೆಸುವುದರ ಬಗ್ಗೆ ಇರಾನ್ ಎಷ್ಟು ಗಂಭೀರವಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಯುದ್ಧಕ್ಕೆ ಹೋಗುವ ಯಾವುದೇ ನಿರ್ಧಾರವು ಇರಾನ್‌ನ 86 ವರ್ಷದ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಮೇಲೆ ಅವಲಂಬಿತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...