Homeಅಂತರಾಷ್ಟ್ರೀಯಹೆಲಿಕಾಪ್ಟರ್‌ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು: ಮಾಹಿತಿ ಬಹಿರಂಗಗೊಳಿಸಿದ ಅಧಿಕಾರಿಗಳು

ಹೆಲಿಕಾಪ್ಟರ್‌ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು: ಮಾಹಿತಿ ಬಹಿರಂಗಗೊಳಿಸಿದ ಅಧಿಕಾರಿಗಳು

- Advertisement -
- Advertisement -

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ಇದ್ದ ಹೆಲಿಕಾಪ್ಟರ್‌ ನಿನ್ನೆ ಪತನವಾಗಿತ್ತು. ಆದರೆ ಹೆಲಿಕಾಪ್ಟರ್‌ನಲ್ಲಿದ್ದವರ ಸ್ಥಿತಿ ಏನಾಗಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ದುರಂತದಲ್ಲಿ ಮೃತಪಟ್ಟಿರುವ ಆಘಾತಕಾರಿ ಸುದ್ದಿಯನ್ನು ಇರಾನ್‌ನ ಅಧಿಕಾರಿಗಳು ಬಹಿರಂಗಗೊಳಿಸಿದ್ದಾರೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಅಧಿಕಾರಿಗಳು ಪರ್ವತ ಭೂಪ್ರದೇಶದ ಹಿಮಾವೃತ ವಾತಾವರಣದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಯೊಬ್ಬರು ಸೋಮವಾರ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ ಅವಶೇಷಗಳನ್ನು ಪತ್ತೆ ಮಾಡಿದ ನಂತರ ತಿಳಿಸಿದ್ದಾರೆ.

ಇರಾನ್‌ನ ಮೆಹರ್ ಸುದ್ದಿ ಸಂಸ್ಥೆ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಸಾವನ್ನು ದೃಢಪಡಿಸಿದೆ. ಇರಾನ್ ಅಧ್ಯಕ್ಷ ಮತ್ತು ವಿದೇಶಾಂಗ ಸಚಿವರನ್ನು ಹೊತ್ತ ಹೆಲಿಕಾಪ್ಟರ್‌ನ ಎಲ್ಲಾ ಪ್ರಯಾಣಿಕರು ಹುತಾತ್ಮರಾಗಿದ್ದಾರೆ ಎಂದು ವರದಿ ಮಾಡಿದೆ.

ಭಾನುವಾರ ನಡೆದ ಅಪಘಾತದಲ್ಲಿ ರೈಸಿ ಮತ್ತು ವಿದೇಶಾಂಗ ಸಚಿವ ಹೊಸೈನ್ ಅಮಿರಾಬ್ದೊಲ್ಲಾಹಿಯಾನ್ ಅವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಸಂಪೂರ್ಣವಾಗಿ ಸುಟ್ಟುಹೋಗಿದೆ ಎಂದು ಇರಾನ್ ಅಧಿಕಾರಿಯೊಬ್ಬರು ನಿನ್ನೆ ರಾಯಿಟರ್ಸ್‌ಗೆ ತಿಳಿಸಿದ್ದರು. ವಿಮಾನವು ಪರ್ವತದ ಶಿಖರಕ್ಕೆ ಅಪ್ಪಳಿಸಿದೆ ಎಂದು  ಚಿತ್ರಗಳು ತೋರಿಸಿವೆ ಎಂದು ಸ್ಟೇಟ್ ಟಿವಿ ವರದಿ ಮಾಡಿತ್ತು. ಆದರೆ ಅಪಘಾತದ ಕಾರಣದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿರಲಿಲ್ಲ.

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಇರಾನ್‌ನ ತಬ್ರೀಝ್‌ ನಗರದಲ್ಲಿ ಆಝರ್‌ಬೈಜಾನ್‌ನ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಜೊತೆಗೂಡಿ ಖಿಝ್‌ ಖಲಾಸಿ ಅಣೆಕಟ್ಟನ್ನು ಎರಡೂ ದೇಶಗಳು ಹಂಚಿರುವ ಗಡಿ ಸ್ಥಳದಲ್ಲಿ ಉದ್ಘಾಟಿಸಿ ವಾಪಸಾಗುತ್ತಿರುವಾಗ ಈ ಘಟನೆ ಸಂಭವಿಸಿದೆ. ಹಾರಾಟ ಆರಂಭಿಸಿದ ಸುಮಾರು 30 ನಿಮಿಷಗಳಲ್ಲಿ ಹೆಲಿಕಾಪ್ಟರ್‌ ಸಂಪರ್ಕ ಕಳೆದುಕೊಂಡಿತ್ತು. ಇರಾನ್‌ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ನಾಪತ್ತೆಯಾಗಿದೆ ಎಂಬ ಸುದ್ದಿ ಬೆನ್ನಲ್ಲಿ 60ಕ್ಕೂ ಹೆಚ್ಚು ರಕ್ಷಣಾ ತಂಡಗಳು ಕೆಟ್ಟ ಹವಾಮಾನ ಪರಿಸ್ಥಿತಿಗಳ ನಡುವೆ ಶೋಧ ನಡೆಸಿದ್ದವು.

ರೈಸಿ ಅವರಿದ್ದ ಹೆಲಿಕಾಪಟ್ಟರ್‌ನೊಂದಿಗೆ ಪ್ರಯಾಣಿಸಿದ್ದ ಇತರ ಎರಡು ಬೆಂಗಾವಲು ಹೆಲಿಕಾಪ್ಟರ್‌ಗಳು  ಸುರಕ್ಷಿತವಾಗಿ ಹಿಂತಿರುಗಿವೆ. ಬೆಂಗಾವಲು ಹೆಲಿಕಾಪ್ಟರ್‌ಗಳಲ್ಲಿ ಇಂಧನ ಸಚಿವ ಅಲಿ ಅಕ್ಬರ್ ಮೆಹ್ರಾಬಿಯಾನ್ ಹಾಗೂ ವಸತಿ ಹಾಗೂ ಸಾರಿಗೆ ಸಚಿವ ಮೆಹ್ರದಾದ್ ಬಾಝ್ಪ್ರಾಶ್ ಇದ್ದು, ಅವರು ಸುರಕ್ಷಿತವಾಗಿ ಮರಳಿದ್ದರು.

ಇದನ್ನು ಓದಿ: ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ಬಳಲುತ್ತಿದ್ದಾರೆ’: ಬಿಡುಗಡೆ ಬಳಿಕ ದುಃಖ ವ್ಯಕ್ತಪಡಿಸಿದ ಗೌತಮ್ ನವಲಾಖಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಿಯಾಂಕ ಗಾಂಧಿ

ಗಾಜಾದಲ್ಲಿ ಇಸ್ರೇಲ್‌ನ ‘ಜನಾಂಗೀಯ ಕೃತ್ಯಗಳು’ ನಿಲ್ಲಬೇಕು: ಪ್ರಿಯಾಂಕಾ ಗಾಂಧಿ

0
ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ದಾಳಿಯನ್ನು ಸ್ವೀಕಾರಾರ್ಹವಲ್ಲ ಮತ್ತು ಹತ್ಯಾಕಾಂಡ ಎಂದು ಹೇಳಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಇದನ್ನು ಜಗತ್ತಿನ ಪ್ರತಿಯೊಂದು ಸರ್ಕಾರ ಖಂಡಿಸಬೇಕು ಎಂದು ಶುಕ್ರವಾರ ಕರೆ...