Homeಅಂತರಾಷ್ಟ್ರೀಯಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

- Advertisement -
- Advertisement -

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ.

ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್ ಮೈಲಿ ದೂರದಲ್ಲಿರುವ ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಅಮೆರಿಕದ ಜಲಾಂತರ್ಗಾಮಿ ಟಾರ್ಪಿಡೊ ಬಳಸಿ ಈ ದಾಳಿ ನಡೆಸಿದೆ.

ಇರಾನ್‌ನ ಯುದ್ಧನೌಕೆಯು ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದ ಭಾರತೀಯ ನೌಕಾಪಡೆಯ ‘ಮಿಲನ್ 2026’ ಮತ್ತು ಅಂತಾರಾಷ್ಟ್ರೀಯ ಫ್ಲೀಟ್ ರಿವ್ಯೂನಲ್ಲಿ ಭಾಗವಹಿಸಿ ಇರಾನ್‌ಗೆ ಮರಳುತ್ತಿತ್ತು. ಈ ತಂಡವನ್ನು ‘ಭಾರತದ ನೌಕಾಪಡೆಯ ಅತಿಥಿ’ ಎಂದು ಇರಾನ್‌ ಬಣ್ಣಿಸಿದೆ.

ದಾಳಿಯ ಸಮಯದಲ್ಲಿ ನೌಕೆಯಲ್ಲಿದ್ದ ಸುಮಾರು 130 ನೌಕಾ ಸಿಬ್ಬಂದಿಯ ಪೈಕಿ 87 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 32 ಸಿಬ್ಬಂದಿಯನ್ನು ಶ್ರೀಲಂಕಾ ನೌಕಾಪಡೆ ರಕ್ಷಿಸಿದೆ.

ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಈ ದಾಳಿಯನ್ನು ದೃಢಪಡಿಸಿದ್ದು, ಎರಡನೇ ಮಹಾಯುದ್ಧದ ನಂತರ ಶತ್ರು ದೇಶದ ಯುದ್ಧನೌಕೆಯೊಂದನ್ನು ಟಾರ್ಪಿಡೊ ಮೂಲಕ ಮುಳುಗಿಸಿದ ಮೊದಲ ಘಟನೆ ಇದಾಗಿದೆ ಎಂದು ಹೇಳಿದ್ದಾರೆ.

ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ ಈ ದಾಳಿಯನ್ನು ‘ಸಮುದ್ರದಲ್ಲಿ ನಡೆದ ದೌರ್ಜನ್ಯ’ ಎಂದಿದ್ದು, ಈ ಕೃತ್ಯಕ್ಕಾಗಿ ಅಮೆರಿಕ ಭಾರೀ ಪಶ್ಚಾತ್ತಾಪ ಪಡಲಿದೆ ಎಂದು ಅವರು ಕಟುವಾಗಿ ಎಚ್ಚರಿಸಿದ್ದಾರೆ.

ಅಮೆರಿಕವು ಇರಾನ್ ವಿರುದ್ಧ ದಾಳಿ ನಡೆಸಲು ಭಾರತದ ಬಂದರುಗಳನ್ನು ಬಳಸಿಕೊಂಡಿದೆ ಎಂಬ ವರದಿಗಳನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಬಲವಾಗಿ ನಿರಾಕರಿಸಿದೆ. ಇಂತಹ ಸುದ್ದಿಗಳನ್ನು ‘ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ’ ಎಂದು ಎಂಇಎ ಫ್ಯಾಕ್ಟ್‌ಚೆಕ್ ಮೂಲಕ ಸ್ಪಷ್ಟಪಡಿಸಿದೆ.

ದಾಳಿಯ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸದ್ಯಕ್ಕೆ ಸಂಪೂರ್ಣ ‘ಮೌನ’ ಪಾಲಿಸಿದೆ. ಕೇಂದ್ರ ಸರ್ಕಾರ ಸಮತೋಲಿತ ರಾಜತಾಂತ್ರಿಕ ನಿಲುವನ್ನು ಅನುಸರಿಸುತ್ತಿದೆ. ಯಾವುದೇ ದೇಶದ ಪರವಾಗಿ ನೇರ ಹೇಳಿಕೆ ನೀಡದೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ವರದಿಗಳು ಹೇಳಿದೆ.

ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ ಭಾರತವು ತೀವ್ರ ಕಳವಳ ವ್ಯಕ್ತಪಡಿಸಿದೆ. ಎಲ್ಲಾ ದೇಶಗಳು ಸಂಯಮದಿಂದ ವರ್ತಿಸಬೇಕು, ನಾಗರಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು ಮತ್ತು ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ವಿದೇಶಾಂಗ ಸಚಿವಾಲಯದ ಅಧಿಕೃತ ಪ್ರಕಟಣೆ ತಿಳಿಸಿದೆ.

ಈ ವಿಚಾರದಲ್ಲಿ ಸರ್ಕಾರದ ಮೌನವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಇದು ಭಾರತದ ಇಂಧನ ಭದ್ರತೆ ಮತ್ತು ತೈಲ ಪೂರೈಕೆಯ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಭಾರತೀಯ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ಅರುಣ್ ಪ್ರಕಾಶ್ ಅವರು ಈ ದಾಳಿಯನ್ನು ‘ಅರ್ಥಹೀನ ಮತ್ತು ಪ್ರಚೋದನಾತ್ಮಕ ಕೃತ್ಯ’ ಎಂದು ಖಂಡಿಸಿದ್ದಾರೆ. ಇದು ಜಾಗತಿಕ ಸಮುದ್ರ ವ್ಯಾಪಾರದ ಮೇಲೆ ಪರಿಣಾಮ ಬೀರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...