Homeಕರ್ನಾಟಕಕೋವಿಡ್‌ ಹಗರಣ : ಹೈಕೋರ್ಟ್‌ಗೆ ನ್ಯಾ.ಕುನ್ಹಾ ವರದಿ ಸಲ್ಲಿಕೆ

ಕೋವಿಡ್‌ ಹಗರಣ : ಹೈಕೋರ್ಟ್‌ಗೆ ನ್ಯಾ.ಕುನ್ಹಾ ವರದಿ ಸಲ್ಲಿಕೆ

- Advertisement -
- Advertisement -

‘ಕೋವಿಡ್-19ರ ಎರಡನೇ ಅಲೆಯ ಸಂದರ್ಭದಲ್ಲಿ, ‘ಪ್ರುಡೆಂಟ್ ಮ್ಯಾನೇಜ್‌ಮೆಂಟ್‌ ಸಲ್ಯೂಷನ್ಸ್’ ಮತ್ತು ‘ಎಲ್‌ಎಜೆ ಎಕ್ಸ್‌ಪೋರ್ಟ್ಸ್‌’ ಲಿಮಿಟೆಡ್‌ ಕಂಪನಿಗಳು ಪಿಪಿಇ ಕಿಟ್‌ಗಳನ್ನು ದುಬಾರಿ ಬೆಲೆಗೆ ಪೂರೈಕೆ ಮಾಡಿವೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಜಾನ್‌ ಮೈಕಲ್‌ ಕುನ್ಹಾ ಅವರ ಏಕಸದಸ್ಯ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದೆ.

ಕೋವಿಡ್‌ ಸಂದರ್ಭದಲ್ಲಿ ಪಿಪಿಇ ಕಿಟ್‌ ಸೇರಿದಂತೆ ವೈದ್ಯಕೀಯ ಸಾಮಗ್ರಿಗಳನ್ನು ಪೂರೈಸಿರುವುದಕ್ಕೆ 76,51,35,000 ರೂಪಾಯಿ ಮೊತ್ತವನ್ನು ಪ್ರುಡೆಂಟ್ ಮ್ಯಾನೇಜ್‌ಮೆಂಟ್‌ ಸಲ್ಯೂಷನ್ಸ್‌ ಮತ್ತು ಎಲ್‌ಎಜೆ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್‌ಗೆ ಪಾವತಿಸಲು ನಿರ್ದೇಶಿಸಿದ್ದ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ ಐ ಅರುಣ್‌ ಅವರ ವಿಭಾಗೀಯ ಪೀಠ ಮಂಗಳವಾರ (ಫೆ.11) ನಡೆಸಿದೆ.

ಮೇಲ್ಮನವಿ ತಿದ್ದುಪಡಿ ಮಾಡಲು ಹಾಗೂ ಕೋವಿಡ್‌ ಹಗರಣದ ತನಿಖಾ ವರದಿ ಒಳಗೊಂಡು ಹೆಚ್ಚುವರಿ ದಾಖಲೆ ಸಲ್ಲಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಕೆ ಮಾಡಿರುವ ಮಧ್ಯಂತರ ಅರ್ಜಿಗಳನ್ನು ಹೈಕೋರ್ಟ್ ಪುರಸ್ಕರಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ರಾಜ್ಯ ಸರ್ಕಾರ ಸಲ್ಲಿಸಿರುವ ವರದಿಯ ಪ್ರತಿಯನ್ನು ನಾಳೆಯೊಳಗೆ ಪ್ರುಡೆಂಟ್ ಮ್ಯಾನೇಜ್‌ಮೆಂಟ್‌ ಸಲ್ಯೂಷನ್ಸ್‌ ಮತ್ತು ಎಲ್ಎಜೆ ಎಕ್ಸ್‌ಪೋರ್ಟ್ಸ್‌ಗೆ ನೀಡಬೇಕು. ಇದನ್ನು ಆಧರಿಸಿ ಮುಂದಿನ ವಿಚಾರಣೆ ವೇಳೆಗೆ ಪ್ರತಿವಾದಿ ಕಂಪನಿ ಪರ ವಕೀಲರು ವಾದಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ ಎಂದು ವರದಿ ತಿಳಿಸಿದೆ.

ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ರೊಬೆನ್‌ ಜಾಕಬ್‌ ಅವರು ಕೋವಿಡ್‌ ಮೊದಲನೇ ಅಲೆಯ ಸಂದರ್ಭದಲ್ಲಿ ಪ್ರತಿ ಪಿಪಿಇ ಕಿಟ್‌ಗೆ 1,312 ರೂಪಾಯಿ ದರ ವಿಧಿಸಲಾಗಿತ್ತು. ಎರಡನೇ ಅವಧಿಯ ವೇಳೆಗೆ ಪಿಪಿಇ ಕಿಟ್‌ ಬೆಲೆ ಮಾರುಕಟ್ಟೆಯಲ್ಲಿ 400 ರೂಪಾಯಿ ಇದ್ದರೂ 1,312 ರೂಪಾಯಿ ದರ ವಿಧಿಸಲಾಗಿದೆ. ಇದರ ಪ್ರಕಾರ ಪ್ರತಿವಾದಿ ಕಂಪನಿಗೆ 23 ಕೋಟಿ ಪಾವತಿಸಬೇಕಿದೆ. ಆದರೆ, ಪ್ರುಡೆಂಟ್ ಮ್ಯಾನೇಜ್‌ಮೆಂಟ್‌ ಸಲ್ಯೂಷನ್ಸ್‌ ಮತ್ತು ಎಲ್‌ಎಜೆ ಎಕ್ಸ್‌ಪೋರ್ಟ್ಸ್‌ 76 ಕೋಟಿ ರೂಪಾಯಿ ಶುಲ್ಕ ವಿಧಿಸುವ ಮೂಲಕ ಅಕ್ರಮ ಎಸಗಿದ್ದಾರೆ ಎಂದು ವಾದಿಸಿದ್ದಾರೆ.

ಪ್ರತಿ ಪಿಪಿಇ ಕಿಟ್‌ಗೆ 400 ರೂಪಾಯಿ ಮೂಲ ಬೆಲೆ ಇದ್ದರೂ ಅದನ್ನು 1,312 ರೂಪಾಯಿಗೆ ಪೂರೈಸಲಾಗಿದೆ. ಈ ಸಂಬಂಧ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತನಿಖೆ ನಡೆಸಿ ಅಕ್ರಮ ಪತ್ತೆ ಮಾಡಿದ್ದಾರೆ. ಸಂಬಂಧಿಸಿದ ಇಲಾಖಾ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹಗರಣದ ತನಿಖೆಗೆ ರಚಿಸಲಾದ ನ್ಯಾಯಮೂರ್ತಿ ಕುನ್ಹಾ ಅವರ ನೇತೃತ್ವದ ಆಯೋಗವು ವರದಿ ನೀಡಿದೆ ಎಂದು ತಿಳಿಸಿದ್ದಾರೆ.

ನ್ಯಾಯಾಲಯ ವಿಚಾರಣೆಯನ್ನು ಮಾರ್ಚ್‌ 3ಕ್ಕೆ ಮುಂದೂಡಿದೆ.

ಇದನ್ನೂ ಓದಿ : ಭದ್ರಾವತಿ | ಮಹಿಳಾ ಅಧಿಕಾರಿಗೆ ನಿಂದನೆ ಪ್ರಕರಣ : ಎಫ್‌ಐಆರ್ ದಾಖಲು, ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....