Homeಮುಖಪುಟದಲಿತ ರೈತರಿಗೆ 'ED' ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

- Advertisement -
- Advertisement -

ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಇಬ್ಬರು ದಲಿತ ರೈತರಿಗೆ ‘ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ’ಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್‌ ನೀಡಿದ ಪ್ರಕರಣ ರಾಷ್ಟ್ರಪತಿಯ ಅಂಗಳಕ್ಕೆ ತಲುಪಿದೆ. ಭಾರತೀಯ ಕಂದಾಯ ಸೇವೆ (IRS) ಅಧಿಕಾರಿಯೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಈ ಬಗ್ಗೆ ಪತ್ರವೊಂದನ್ನು ಬರೆದಿದ್ದು, ಕೇಂದ್ರ ಸರಕಾರಕ್ಕೆ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್‌ ಅವರಿಗೆ ಮುಜುಗರ ಉಂಟಾಗುವಂತೆ ಮಾಡಿದೆ.

ಚೆನ್ನೈನಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಉಪ ಆಯುಕ್ತರಾಗಿ ಕೆಲಸ ಮಾಡುತ್ತಿರುವ ಐಆರ್‌ಎಸ್ ಅಧಿಕಾರಿ ಬಿ ಬಾಲಮುರುಗನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರವನ್ನು ಬರೆದಿದ್ದು,  ಜಾರಿ ನಿರ್ದೇಶನಾಲಯ ಬಿಜೆಪಿಯ ಅಸ್ತ್ರವಾಗಿ ಮರ್ಪಟ್ಟಿದೆ. ಇಡಿಯನ್ನು ಯಶಸ್ವಿಯಾಗಿ ಬಿಜೆಪಿಯ ನೀತಿ ಜಾರಿ ನಿರ್ದೇಶನಾಲಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಆರೋಪಿಸಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಅವರನ್ನು ವಜಾಗೊಳಿಸಲು ಆಗ್ರಹಿಸಿದ್ದಾರೆ.

ಸೇಲಂ ಜಿಲ್ಲೆಯ ಅತ್ತೂರಿನ ಇಬ್ಬರು ದಲಿತ ರೈತರು ಸ್ಥಳೀಯ ಬಿಜೆಪಿ ನಾಯಕರೊಬ್ಬರು ತಮ್ಮ ಭೂಮಿಯನ್ನು ಅಕ್ರಮವಾಗಿ ಕಬಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಕೇಸ್‌ ಕೊಟ್ಟ ಬಳಿಕ ಅವರ ವಿರುದ್ಧ ಇಡಿ ಸಮನ್ಸ್ ನೀಡಿದ ಪ್ರಕರಣವನ್ನು ಉಲ್ಲೇಖಿಸಿದ್ದಾರೆ. ಬಿಜೆಪಿಯ ಸೇಲಂ ಪೂರ್ವ ಜಿಲ್ಲಾ ಕಾರ್ಯದರ್ಶಿ ಗುಣಶೇಖರ್ ಅವರು ತಮ್ಮ ಭೂಮಿಯನ್ನು ಕಾನೂನುಬಾಹಿರವಾಗಿ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದರು. ಸ್ಥಳೀಯ ನ್ಯಾಯಾಲಯದಲ್ಲಿ ಈ ಕುರಿತು ಕ್ರಿಮಿನಲ್ ಪ್ರಕರಣ ಬಾಕಿ ಇದೆ. ಈ ಸಂದರ್ಭದಲ್ಲಿ ದೂರದಾರ ಬಡ ರೈತರಿಗೆ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್‌ ಜಾರಿ ನಿರ್ದೇಶನಾಲಯವು ಹೇಗೆ ಬಿಜೆಪಿಯ ವಿಸ್ತೃತ ಅಂಗವಾಗಿದೆ ಎಂಬುದನ್ನು ತೋರಿಸುತ್ತದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಧಿಕಾರ ವಹಿಸಿಕೊಂಡ ನಂತರ ಜಾರಿ ನಿರ್ದೇಶನಾಲಯವನ್ನು ‘ಬಿಜೆಪಿಯ ನೀತಿ ಜಾರಿ ನಿರ್ದೇಶನಾಲಯ’ವನ್ನಾಗಿ ಪರಿವರ್ತಿಸಿದ್ದಾರೆ ಎಂದು ಅವರು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.

ನನ್ನ 30 ವರ್ಷಗಳ ಸೇವೆಯಲ್ಲಿ ಯಾವುದೇ ಸ್ಥಳೀಯ ರಾಜಕಾರಣಿಗಳು ಯಾವುದೇ ಅನುಕೂಲಕ್ಕಾಗಿ ನನ್ನನ್ನು ಸಂಪರ್ಕಿಸುವ ಅಥವಾ ಒತ್ತಡ ಹೇರುವುದನ್ನು ನಾನು ನೋಡಿಲ್ಲ. ಸಾಮಾನ್ಯವಾಗಿ ಅವರು ದೆಹಲಿಯ ಮೂಲಕ ಪ್ರಭಾವವನ್ನು ತರುತ್ತಾರೆ. ಈಗ ಪರಿಸ್ಥಿತಿ ಬದಲಾಗಿದೆ. ಈ ಸ್ಥಿತಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇರ ಹೊಣೆ. ಅವರು ಭಾರತದ ಹಣಕಾಸು ಸಚಿವರಾಗಲು ಅನರ್ಹರಾಗಿದ್ದಾರೆ ಎಂದು ಐಅರ್‌ಎಸ್‌ ಅಧಿಕಾರಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಮಿಳುನಾಡಿನ ಬಡ ದಲಿತ ರೈತರಿಗೆ ನ್ಯಾಯ ಒದಗಿಸಲು ಮತ್ತು ಜಾರಿ ನಿರ್ದೇಶನಾಲಯವನ್ನು ಉಳಿಸಲು ಕೇಂದ್ರ ಸರ್ಕಾರ ನಿರ್ಮಲಾ ಸೀತಾರಾಮನ್‌ ಅವರನ್ನು ತಕ್ಷಣವೇ ವಜಾಗೊಳಿಸಬೇಕೆಂದು ಅವರು ಪತ್ರದಲ್ಲಿ ರಾಷ್ಟ್ರಪತಿಗಳನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಮಾತನಾಡಿದ ಬಾಲಮುರುಗನ್,  ರಾಷ್ಟ್ರಪತಿಗಳಿಗೆ ಪತ್ರ ಕಳುಹಿಸಿರುವುದನ್ನು ದೃಢಪಡಿಸಿದರು ಮತ್ತು ತಾವು ಕೃಷಿ ಕುಟುಂಬಕ್ಕೆ ಸೇರಿದವರಾಗಿದ್ದು, ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳುವ ಕಷ್ಟಗಳನ್ನು ತಿಳಿದಿದ್ದೇವೆ. ಇಡಿ ಅಧಿಕಾರಿ ಅಂಕಿತ್ ತಿವಾರಿ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿರುವುದು ವೈಯಕ್ತಿಕ ವಿಚಾರ. ರೈತರಿಗೆ ಸಮನ್ಸ್ ಕಳುಹಿಸುವುದು ವೈಯಕ್ತಿಕ ಕಾರ್ಯವಲ್ಲ. ಒಂದು ಸಂಸ್ಥೆಯನ್ನು ಭ್ರಷ್ಟಗೊಳಿಸಲಾಗುತ್ತಿದೆ. ಇಡಿ ಸಂಸ್ಥೆಗೆ ಹಾನಿಯಾಗಿದೆ ಮತ್ತು ಅದಕ್ಕಾಗಿಯೇ ನಾನು ಕೇಂದ್ರ ಹಣಕಾಸು ಸಚಿವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದ್ದೇನೆ. ಈ ಪತ್ರ ಬರೆಯುವುದರಿಂದ ಆಗುವ ದುಷ್ಪರಿಣಾಮಗಳು ನನಗೆ ಗೊತ್ತು, ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಅದನ್ನು ಎದುರಿಸಲು ನಾನು ಸಿದ್ಧ ಎಂದು ಹೇಳಿದ್ದಾರೆ.

ಬಾಲಮುರುಗನ್ ಅವರು ಜ.31, 2024ರಂದು ನಿವೃತ್ತರಾಗಲಿದ್ದಾರೆ. ಅವರು ವಕೀಲ ಪರ್ವಿನಾ ಅವರ ಪತಿಯೂ ಆಗಿದ್ದಾರೆ. ಪರ್ವಿನಾ, ಇಡಿಯಿಂದ ಸಮನ್ಸ್ ಪಡೆದ ಇಬ್ಬರು ರೈತರಾದ ಕಣ್ಣಿಯಾನ್ ಮತ್ತು ಕೃಷ್ಣನ್ ಅವರ ವಕೀಲರಾಗಿದ್ದಾರೆ.

ಏನಿದು ಘಟನೆ:

ಸೇಲಂ ಜಿಲ್ಲೆಯ ಬಿಜೆಪಿ ನಾಯಕ ಗುಣಶೇಖರ್ ವಿರುದ್ದ ಜಮೀನು ಕಬಳಿಕೆ ಯತ್ನದ ವಿರುದ್ಧ ದೂರು ನೀಡಿದ್ದ ಅತ್ತೂರಿನ ದಲಿತ ಸಮುದಾಯದ ರೈತರಾದ ಕನ್ನೈಯನ್ ಮತ್ತು ಅವರ ಸಹೋದರ ಕೃಷ್ಣನ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿತ್ತು.

ಬರೀ 1,000 ಮಾಸಿಕ ಪಿಂಚಣಿಯಲ್ಲಿ ಜೀವನ ಸಾಗಿಸುವ ದಲಿತ ರೈತರನ್ನು ಇಡಿ ಹಿಂಬಾಲಿಸಿದೆ. ಈ ರೈತರು ಬಿಜೆಪಿಯ ಸೇಲಂ ಪೂರ್ವ ಜಿಲ್ಲಾ ಕಾರ್ಯದರ್ಶಿ ಗುಣಶೇಖರ್ ವಿರುದ್ಧ ಭೂಕಬಳಿಕೆ ಯತ್ನದ ಆರೋಪ ಮಾಡಿದ್ದರು. ಇದೇ ಕಾರಣಕ್ಕೆ ಸಮನ್ಸ್‌ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಬಗ್ಗೆ ಮಾತನಾಡಿದ ಕನ್ನಿಯನ್ ಮತ್ತು ಕೃಷ್ಣನ್ ಪರ ವಕೀಲರಾದ ಪರ್ವಿನಾ, ಸಮನ್ಸ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಉಲ್ಲೇಖಿಸಲಾಗಿಲ್ಲ. ಇಬ್ಬರು ಸಹೋದರರಿಗೆ ಪ್ರಕರಣ ಏನೆಂದು ತಿಳಿದಿಲ್ಲ. ಸಮನ್ಸ್‌ನಲ್ಲಿ ಸರಿಯಾದ ದಾಖಲೆಗಳೊಂದಿಗೆ ‘ಇಡಿ’ ಮುಂದೆ ಹಾಜರಾಗುವಂತೆ ಕೇಳುವುದನ್ನು ಹೊರತುಪಡಿಸಿ ಏನನ್ನೂ ಉಲ್ಲೇಖಿಸಲಾಗಿಲ್ಲ. ಭೂ ಕಬಳಿಕೆ ಆರೋಪಕ್ಕೆ ಪ್ರತಿಯಾಗಿ ಈ ಬೆಳವಣಿಗೆ ನಡೆದಿದೆ ಎಂದು ಹೇಳಿದ್ದರು. ಇದಲ್ಲದೆ ಇಡಿ ಸಮನ್ಸ್‌ನಲ್ಲಿ ರೈತರ ಜಾತಿಯನ್ನು ‘ಹಿಂದೂ ಪಲ್ಲರ್‌ಸ್’ ಎಂದು ಉಲ್ಲೇಖಿಸಿತ್ತು. ಇದು ವ್ಯಾಪಕವಾದ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನು ಓದಿ: ಲೋಕಸಭೆ ಚುನಾವಣೆ ಘೋಷಣೆಗೆ ಮೊದಲೆ CAA ಬಗ್ಗೆ ಅಧಿಸೂಚನೆಗೆ ಕೇಂದ್ರ ಸಜ್ಜು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...