Homeಕರ್ನಾಟಕಒಲ್ಲದ ಮನಸ್ಸಿನಿಂದ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಿ.ಟಿ.ರವಿ?

ಒಲ್ಲದ ಮನಸ್ಸಿನಿಂದ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಿ.ಟಿ.ರವಿ?

"ನಮ್ಮ ಪಕ್ಷದ ನಿಯಮದಲ್ಲಿ 75 ವರ್ಷ ದಾಟಿದವರು ಅಧಿಕಾರದಲ್ಲಿ ಮುಂದುವರೆಯಲು ಸಾಧ್ಯವಿಲ್ಲ. ಆದರೆ ಈಗ ಹಾಗೆಯೇ ನಡೆಯುತ್ತಿದೆಯೇ"

- Advertisement -
- Advertisement -

ಕರ್ನಾಟಕದ ಪ್ರವಾಸೋದ್ಯಮ ಇಲಾಖೆಯ ಸಚಿವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಅಯ್ಕೆಯಾದ ಹಿನ್ನೆಲೆಯಲ್ಲಿ ಒಬ್ಬರಿಗೆ ಒಂದೇ ಸ್ಥಾನ ನಿಯಮದಂತೆ ಸಚಿವರು ಸಿಎಂ ಯಡಿಯೂರಪ್ಪ ಅವರಿಗೆ ಶನಿವಾರ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

“ನಿಶ್ಚಯಿಸಿದಂತೆ ರಾಜೀನಾಮೆ ನೀಡಿದ್ದೇನೆ. ಎಲ್ಲವೂ ನಮ್ಮ ಮೇಲೆ ನಿಂತಿಲ್ಲ. ಕೆಲವೊಂದು ವ್ಯವಸ್ಥೆ ಮೇಲೆ ನಿಂತಿದೆ. ಪಕ್ಷ ಸಂಘಟನೆಗೆ ಮೊದಲ ಆಧ್ಯತೆ ನೀಡಲಾಗುವುದು. ಹೀಗಾಗಿಯೇ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮುಂದಿನ ತೀರ್ಮಾನ ವರಿಷ್ಠರಿಗೆ ಬಿಟ್ಟಿದ್ದು” ಎಂದು ಸಿ.ಟಿ ರವಿ ಹೇಳಿದ್ದಾರೆ.

ನಿನ್ನೆ ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ, ‘ರಾಷ್ಟ್ರೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವುದರಿಂದ ತಾವು ಸಚಿವ ಸಂಪುಟದಲ್ಲಿ ಮುಂದುವರೆಯುತ್ತೀರಾ’ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪರೋಕ್ಷವಾಗಿ ಉತ್ತರಿಸಿದ ಸಿ.ಟಿ.ರವಿ, “ನಮ್ಮ ಪಕ್ಷದ ನಿಯಮದಲ್ಲಿ 75 ವರ್ಷ ದಾಟಿದವರು ಅಧಿಕಾರದಲ್ಲಿ ಮುಂದುವರೆಯಲು ಸಾಧ್ಯವಿಲ್ಲ. ಆದರೆ ಈಗ ಹಾಗೆಯೇ ನಡೆಯುತ್ತಿದೆಯೇ” ಎಂದು ಯಡಿಯೂರಪ್ಪನವರನ್ನು ಪರೋಕ್ಷವಾಗಿ ಉಲ್ಲೇಖಿಸಿ ಉತ್ತರಿಸಿದ ಅವರು ತಮ್ಮ ರಾಜೀನಾಮೆ ಬಗ್ಗೆ ಚಕಾರವೆತ್ತಿರಲಿಲ್ಲ.

ನಂತರದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರು ಒಬ್ಬರಿಗೆ ಒಂದು ಹುದ್ದೆ ಆಧಾರದಲ್ಲಿ ತಮ್ಮ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಹತ್ರಾಸ್ ಅತ್ಯಾಚಾರ: ಕೊಲೆಗೀಡಾದ ಯುವತಿಯ ಪೋಸ್ಟ್‌ಮಾರ್ಟಂ ರಿಪೋರ್ಟ್ ಏನು ಹೇಳುತ್ತಿದೆ?

ಅಕ್ಟೊಂಬರ್ 2 ಗಾಂಧಿ ಜಯಂತಿಯಂದೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದರು. ಆದರೆ, ಗಾಂಧಿ ಜಯಂತಿಯಂದು ಸಿಎಂ ಯಡಿಯೂರಪ್ಪ ಸಿಗದ ಕಾರಣ ನಿನ್ನೆ ರಾಜೀನಾಮೆ ಸಲ್ಲಿಸಿದ್ದಾರೆ. ಸಿ.ಟಿ.ರವಿಯವರ ರಾಜೀನಾಮೆ ಸ್ವೀಕಾರದ ಬಗ್ಗೆ ಸೋಮವಾರ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಸಿ.ಟಿ.ರವಿ ಸೋಮವಾರ ದೆಹಲಿಗೆ ಪ್ರಯಾಣಿಸಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ನಂತರ 5-6 ರಂದು ದೆಹಲಿಯಲ್ಲಿನ ಪಕ್ಷದ ಸಂಘಟನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.


ಇದನ್ನೂ ಓದಿ: ಹತ್ರಾಸ್ ಸಂತ್ರಸ್ತೆ ತನ್ನ ಅಂತಿಮ ವಿಡಿಯೋದಲ್ಲಿ ಹೇಳಿದ್ದೇನು? ಪೋಸ್ಟ್‌ಮಾರ್ಟಂ ವರದಿ ಸುಳ್ಳೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...