‘ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ’ ಎಂದು ಫೇಸ್‌ಬುಕ್ ಇಂಡಿಯಾ ಸಂಸದೀಯ ಸಮಿತಿಗೆ ಸ್ಪಷ್ಟನೆ ನೀಡಿತ್ತು. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಫೇಸ್‌ಬುಕ್ ಇಂಡಿಯಾ ಭಾರತದ ಸಂಸತ್ತಿಗೆ ಸುಳ್ಳು ಹೇಳುತ್ತಿದೆಯೇ” ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬಜರಂಗದಳದ ವರ್ತನೆ ಕಾನೂನುಬಾಹಿರವಾದದ್ದು. ಹಾಗಾಗಿ ಅದನ್ನು ನಿಷೇಧಿಸಬೇಕು ಎಂದು ಅಮೆರಿಕಾದ ಫೇಸ್‌ಬುಕ್ ಹೇಳುತ್ತದೆ. ಆದರೆ ಫೇಸ್‌ಬುಕ್ ಇಂಡಿಯಾ, ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ ಎಂದು ಹೇಳುತ್ತದೆ. ಫೇಸ್‌ಬುಕ್ ಸಂಸತ್ತಿಗೆ ಸುಳ್ಳು ಹೇಳುತ್ತಿದೆಯೇ?” ಎಂದು ಅಮೆರಿಕಾ ಪತ್ರಿಕೆಗಳ ವರದಿಯನ್ನು ಉಲ್ಲೇಖಿಸಿ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಡ್ರಗ್ ಕೇಸ್: ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್ಗೆ ಎನ್ಸಿಬಿ ನೋಟಿಸ್
Facebook US says Bajrang Dal content is offensive and should be banned.
Facebook India tells our Parliamentary panel that Bajrang Dal content is not offensive.
Is Facebook lying to India and its Parliament? pic.twitter.com/nx0FrZQfOY
— Rahul Gandhi (@RahulGandhi) December 17, 2020
ಬಜರಂಗದಳವು ಭಾರತದಾದ್ಯಂತ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರವನ್ನು ಬೆಂಬಲಿಸುವ ಅಪಾಯಕಾರಿ ಸಂಘಟನೆಯೆಂದು ಫೇಸ್‌ಬುಕ್‌ನ ಭದ್ರತಾ ತಂಡವು ಗುರುತಿಸಿದ್ದರೂ, ರಾಜಕೀಯ ಮತ್ತು ವ್ಯವಹಾರದ ರಕ್ಷಣೆಯ ಕಾರಣಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅದಕ್ಕೆ ಮುಂದುವರೆಯಲು ಅವಕಾಶ ನೀಡಲಾಗಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು.
ಇದನ್ನೂ ಓದಿ: ’ಮೋದಿಯವರಂತೆ ಆಗಬೇಡಿ, ಮಾಸ್ಕ್ ಧರಿಸಿ’: ಮೋದಿ ವಿಡಿಯೋ ಟ್ರೋಲ್ ಮಾಡಿದ ಆಪ್
ಬಜರಂಗದಳವು ಆಡಳಿತಾರೂಢ ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಫೇಸ್‌ಬುಕ್ ಅರಿತುಕೊಂಡು, “ಬಜರಂಗದಳದ ವಿರುದ್ದ ಕ್ರಮ ಕೈಗೊಂಡರೆ ಕಂಪನಿ ವ್ಯವಹಾರದ ಭವಿಷ್ಯ ಮತ್ತು ಭಾರತದಲ್ಲಿನ ತನ್ನ ಸಿಬ್ಬಂದಿಗೆ ಅಪಾಯವಾಗಬಹುದು” ಎಂದು ಫೇಸ್‌ಬುಕ್ ಹೆದರಿತ್ತು ಎಂದು ಪತ್ರಿಕೆ ಉಲ್ಲೇಖಿಸಿದೆ.
ಕಳೆದ ಆಗಸ್ಟ್‌ನಲ್ಲಿ ತನ್ನ ನೀತಿಗಳಲ್ಲಿ ಫೇಸ್‌ಬುಕ್ ಪಕ್ಷಪಾತ ಮಾಡುತ್ತಿದೆ ಎಂದು ವಾಲ್‌ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು. ವರದಿಯಲ್ಲಿ, “ಆಡಳಿತರೂಡ ಬಿಜೆಪಿಯ ಬಗ್ಗೆ ತನ್ನ ವ್ಯಾಪಾರ ಹಿತಾಸಕ್ತಿಗಳಿಗಾಗಿ ಒಲವು ತೋರಿಸಿದೆ ಹಾಗೂ ಫೇಸ್‌ಬುಕ್‌ನ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಮುಸ್ಲಿಂ ವಿರೋಧಿ ಟೀಕೆಗಳನ್ನು ಮಾಡಿದ್ದ ಬಿಜೆಪಿ ನಾಯಕನ ಪರವಾಗಿ ಲಾಬಿ ಮಾಡಿದ್ದಾರೆ” ಎಂದು ಹೇಳಲಾಗಿತ್ತು.
ಇದನ್ನೂ ಓದಿ: ಬ್ರಾಹ್ಮಣ ವಿರೋಧಿ ಪಠ್ಯಪುಸ್ತಕ ವಿವಾದ: ಸಿಎಂ ವಿರುದ್ದ ಆಕ್ರೋಶ
ಈ ವರದಿ ಪ್ರಕಟವಾದ ಕೆಲವೇ ದಿನಗಳಲ್ಲಿ ರಾಜಕಾರಣಿಯೊಬ್ಬರ ಖಾತೆಯನ್ನು ಅಮಾನತ್ತು ಮಾಡಿದ್ದ ಫೇಸ್‌ಬುಕ್, ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿತ್ತಾದರೂ ದ್ವೇಷ ಭಾಷಣಗಳನ್ನು ನಿಗ್ರಹಿಸಲು ಇನ್ನೂ ಉತ್ತಮವಾಗಿ ಕ್ರಮಕೈಗೊಳ್ಳಬೇಕಾಗಿದೆ ಎಂದು ಒಪ್ಪಿಕೊಂಡಿತ್ತು. ಅಲ್ಲದೆ ಅದರ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಕೂಡಾ ಫೇಸ್‌ಬುಕ್ ತೊರೆದಿದ್ದರು.
ಭಾರತದಲ್ಲಿ ಐದು ಕಚೇರಿಗಳನ್ನು ನಡೆಸುತ್ತಿರು ಫೇಸ್‌ಬುಕ್, ಅಕ್ಟೋಬರ್ ತಿಂಗಳೊಂದರಲ್ಲೇ ಶತಕೋಟಿ ಡಾಲರ್‌ಗಳಷ್ಟು ದುಡ್ಡನ್ನು ಹೂಡಿಕೆ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಫೇಸ್‌ಬುಕ್ ಭಾರತವನ್ನು ಬಳಕೆದಾರರ ವಿಷಯದಲ್ಲಿ ತನ್ನ ಅತಿದೊಡ್ಡ ಮಾರುಕಟ್ಟೆಯೆಂದು ಪರಿಗಣಿಸಿದೆ.
ಇದನ್ನೂ ಓದಿ: ಟೊಯೋಟಾ ಕಾರ್ಮಿಕರ ಸ್ವಾಭಿಮಾನಿ ಹೋರಾಟ 39 ನೇ ದಿನಕ್ಕೆ; ನಾಳೆ ಡಿಸಿ ಕಚೇರಿ ಮುತ್ತಿಗೆ


