Homeಮುಖಪುಟಭಾರತದ ಸಂಸತ್ತಿಗೆ ಫೇಸ್‌ಬುಕ್ ಸುಳ್ಳು ಹೇಳುತ್ತಿದೆಯೇ? - ರಾಹುಲ್ ಗಾಂಧಿ ಪ್ರಶ್ನೆ

ಭಾರತದ ಸಂಸತ್ತಿಗೆ ಫೇಸ್‌ಬುಕ್ ಸುಳ್ಳು ಹೇಳುತ್ತಿದೆಯೇ? – ರಾಹುಲ್ ಗಾಂಧಿ ಪ್ರಶ್ನೆ

"ಬಜರಂಗದಳದ ವರ್ತನೆ ಕಾನೂನುಬಾಹಿರವಾದದ್ದು. ಹಾಗಾಗಿ ಅದನ್ನು ನಿಷೇಧಿಸಬೇಕು ಎಂದು ಅಮೆರಿಕಾದ ಫೇಸ್‌ಬುಕ್ ಹೇಳುತ್ತದೆ. ಆದರೆ ಫೇಸ್‌ಬುಕ್ ಇಂಡಿಯಾ, ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ ಎಂದು ಹೇಳುತ್ತದೆ"

- Advertisement -
- Advertisement -

‘ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ’ ಎಂದು ಫೇಸ್‌ಬುಕ್ ಇಂಡಿಯಾ ಸಂಸದೀಯ ಸಮಿತಿಗೆ ಸ್ಪಷ್ಟನೆ ನೀಡಿತ್ತು. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಫೇಸ್‌ಬುಕ್ ಇಂಡಿಯಾ ಭಾರತದ ಸಂಸತ್ತಿಗೆ ಸುಳ್ಳು ಹೇಳುತ್ತಿದೆಯೇ” ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬಜರಂಗದಳದ ವರ್ತನೆ ಕಾನೂನುಬಾಹಿರವಾದದ್ದು. ಹಾಗಾಗಿ ಅದನ್ನು ನಿಷೇಧಿಸಬೇಕು ಎಂದು ಅಮೆರಿಕಾದ ಫೇಸ್‌ಬುಕ್ ಹೇಳುತ್ತದೆ. ಆದರೆ ಫೇಸ್‌ಬುಕ್ ಇಂಡಿಯಾ, ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ ಎಂದು ಹೇಳುತ್ತದೆ. ಫೇಸ್‌ಬುಕ್ ಸಂಸತ್ತಿಗೆ ಸುಳ್ಳು ಹೇಳುತ್ತಿದೆಯೇ?” ಎಂದು ಅಮೆರಿಕಾ ಪತ್ರಿಕೆಗಳ ವರದಿಯನ್ನು ಉಲ್ಲೇಖಿಸಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಡ್ರಗ್ ಕೇಸ್: ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್​ಗೆ ಎನ್​ಸಿಬಿ ನೋಟಿಸ್

ಬಜರಂಗದಳವು ಭಾರತದಾದ್ಯಂತ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರವನ್ನು ಬೆಂಬಲಿಸುವ ಅಪಾಯಕಾರಿ ಸಂಘಟನೆಯೆಂದು ಫೇಸ್‌ಬುಕ್‌ನ ಭದ್ರತಾ ತಂಡವು ಗುರುತಿಸಿದ್ದರೂ, ರಾಜಕೀಯ ಮತ್ತು ವ್ಯವಹಾರದ ರಕ್ಷಣೆಯ ಕಾರಣಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅದಕ್ಕೆ ಮುಂದುವರೆಯಲು ಅವಕಾಶ ನೀಡಲಾಗಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು.

ಇದನ್ನೂ ಓದಿ: ’ಮೋದಿಯವರಂತೆ ಆಗಬೇಡಿ, ಮಾಸ್ಕ್ ಧರಿಸಿ’: ಮೋದಿ ವಿಡಿಯೋ ಟ್ರೋಲ್ ಮಾಡಿದ ಆಪ್

ಬಜರಂಗದಳವು ಆಡಳಿತಾರೂಢ ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಫೇಸ್‌ಬುಕ್ ಅರಿತುಕೊಂಡು, “ಬಜರಂಗದಳದ ವಿರುದ್ದ ಕ್ರಮ ಕೈಗೊಂಡರೆ ಕಂಪನಿ ವ್ಯವಹಾರದ ಭವಿಷ್ಯ ಮತ್ತು ಭಾರತದಲ್ಲಿನ ತನ್ನ ಸಿಬ್ಬಂದಿಗೆ ಅಪಾಯವಾಗಬಹುದು” ಎಂದು ಫೇಸ್‌ಬುಕ್ ಹೆದರಿತ್ತು‌‌ ಎಂದು ಪತ್ರಿಕೆ ಉಲ್ಲೇಖಿಸಿದೆ.

ಕಳೆದ ಆಗಸ್ಟ್‌‌ನಲ್ಲಿ ತನ್ನ ನೀತಿಗಳಲ್ಲಿ ಫೇಸ್‌ಬುಕ್ ಪಕ್ಷಪಾತ ಮಾಡುತ್ತಿದೆ ಎಂದು ವಾಲ್‌ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು. ವರದಿಯಲ್ಲಿ, “ಆಡಳಿತರೂಡ ಬಿಜೆಪಿಯ ಬಗ್ಗೆ ತನ್ನ ವ್ಯಾಪಾರ ಹಿತಾಸಕ್ತಿಗಳಿಗಾಗಿ ಒಲವು ತೋರಿಸಿದೆ ಹಾಗೂ ಫೇಸ್‌ಬುಕ್‌ನ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಮುಸ್ಲಿಂ ವಿರೋಧಿ ಟೀಕೆಗಳನ್ನು ಮಾಡಿದ್ದ ಬಿಜೆಪಿ ನಾಯಕನ ಪರವಾಗಿ ಲಾಬಿ ಮಾಡಿದ್ದಾರೆ” ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಬ್ರಾಹ್ಮಣ ವಿರೋಧಿ ಪಠ್ಯಪುಸ್ತಕ ವಿವಾದ: ಸಿಎಂ ವಿರುದ್ದ ಆಕ್ರೋಶ

ಈ ವರದಿ ಪ್ರಕಟವಾದ ಕೆಲವೇ ದಿನಗಳಲ್ಲಿ ರಾಜಕಾರಣಿಯೊಬ್ಬರ ಖಾತೆಯನ್ನು ಅಮಾನತ್ತು ಮಾಡಿದ್ದ ಫೇಸ್‌ಬುಕ್, ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿತ್ತಾದರೂ ದ್ವೇಷ ಭಾಷಣಗಳನ್ನು ನಿಗ್ರಹಿಸಲು ಇನ್ನೂ ಉತ್ತಮವಾಗಿ ಕ್ರಮಕೈಗೊಳ್ಳಬೇಕಾಗಿದೆ ಎಂದು ಒಪ್ಪಿಕೊಂಡಿತ್ತು. ಅಲ್ಲದೆ ಅದರ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಕೂಡಾ ಫೇಸ್‌ಬುಕ್ ತೊರೆದಿದ್ದರು.

ಭಾರತದಲ್ಲಿ ಐದು ಕಚೇರಿಗಳನ್ನು ನಡೆಸುತ್ತಿರು ಫೇಸ್‌ಬುಕ್, ಅಕ್ಟೋಬರ್ ತಿಂಗಳೊಂದರಲ್ಲೇ ಶತಕೋಟಿ ಡಾಲರ್‌ಗಳಷ್ಟು ದುಡ್ಡನ್ನು ಹೂಡಿಕೆ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಫೇಸ್‌ಬುಕ್ ಭಾರತವನ್ನು ಬಳಕೆದಾರರ ವಿಷಯದಲ್ಲಿ ತನ್ನ ಅತಿದೊಡ್ಡ ಮಾರುಕಟ್ಟೆಯೆಂದು ಪರಿಗಣಿಸಿದೆ.


ಇದನ್ನೂ ಓದಿ: ಟೊಯೋಟಾ ಕಾರ್ಮಿಕರ ಸ್ವಾಭಿಮಾನಿ ಹೋರಾಟ 39 ನೇ ದಿನಕ್ಕೆ; ನಾಳೆ ಡಿಸಿ ಕಚೇರಿ ಮುತ್ತಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...