Homeಕರ್ನಾಟಕಈಗ ದೇಶ ಬಿಟ್ಟು ಓಡುವುದು ಅದಾನಿ ಸರದಿಯೇ?: ದಿನೇಶ್‌ ಗೂಂಡೂರಾವ್

ಈಗ ದೇಶ ಬಿಟ್ಟು ಓಡುವುದು ಅದಾನಿ ಸರದಿಯೇ?: ದಿನೇಶ್‌ ಗೂಂಡೂರಾವ್

- Advertisement -
- Advertisement -

ಅದಾನಿ ಹಗರಣ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್‌ ಪ್ರಶ್ನೆಗಳ ಅಭಿಯಾನ ಆರಂಭಿಸಿದ್ದು, “ಈಗ ದೇಶ ಬಿಟ್ಟು ಓಡುವುದು ಅದಾನಿ ಸರಿದಿಯೇ?” ಎಂದು ಕಾಂಗ್ರೆಸ್ ನಾಯಕ ದಿನೇಶ್ ಗೂಂಡೂರಾವ್ ಪ್ರಶ್ನಿಸಿದ್ದಾರೆ.

ಟ್ವಿಟರ್‌ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, “ಭಾಗ್ ಮಿಲ್ಕಾ ಭಾಗ್ ಎಂಬಂತೆ‌ ಮೋದಿ ಆಡಳಿತದಲ್ಲಿ ಮೆಹುಲ್ ಚೋಕ್ಸಿ, ನೀರವ್ ಮೋದಿ, ಲಲಿತ್ ಮೋದಿ, ಮಲ್ಯ ಸೇರಿದಂತೆ ಸಾರ್ವಜನಿಕರ ಹಣ ಕೊಳ್ಳೆ ಹೊಡೆದವರು ಓಡಿ ಹೋಗಿದ್ದಾರೆ. ಈಗ ದೇಶ ಬಿಟ್ಟು ಓಡುವುದು ಅದಾನಿ ಸರದಿಯೇ?” ಎಂದು ಕೇಳಿದ್ದಾರೆ.

“ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಿದ್ದ LICಯ 23 ಸಾವಿರ ಕೋಟಿ ರೂ., SBI ಕೊಟ್ಟ ಸಾವಿರಾರು ಕೋಟಿ ರೂ. ಸಾಲಕ್ಕೆ ಪಂಗನಾಮ ಗ್ಯಾರಂಟಿಯೇ?” ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

“ಅದಾನಿ ಸಮೂಹದ ಮೆಗಾ ಹಗರಣದ ಬಗ್ಗೆ ಪ್ರಧಾನಿ ಮೋದಿಯವರು ಮೌನವಾಗಿರುವುದೇಕೆ? ಅದಾನಿ ವಂಚನೆಯ ಬಗ್ಗೆ ಮಾತಾಡಲು‌ ಮೋದಿಯವರಿಗೆ ಸ್ನೇಹ ಅಡ್ಡಿಯಾಗುತ್ತಿದೆಯೇ?” ಎಂದು ಕುಟುಕಿದ್ದಾರೆ.

“ಸ್ನೇಹಕ್ಕಾಗಿ ದೇಶದ ಲಕ್ಷಾಂತರ ಜನರ ಹೂಡಿಕೆ ಹಣವನ್ನು ಅಪಾಯದಲ್ಲಿಡುತ್ತಿದ್ದಾರೆಯೇ ಮೋದಿ? ಪ್ರಧಾನಿ ಮೋದಿಯವರಿಗೆ ದೇಶದ ಜನರ ಹಿತ ಮುಖ್ಯವೋ ಅಥವಾ ಗೌತಮ್ ಅದಾನಿ ಗೆಳೆತನ ಮುಖ್ಯವೋ?” ಎಂದು ಹರಿಹಾಯ್ದಿದ್ದಾರೆ.

“ಆರ್ಥಿಕ ಅಪರಾಧಗಳ ಬಗ್ಗೆ ತಮ್ಮದು ಝೀರೋ ಟಾಲರೆನ್ಸ್ ನಿಲುವು ಎಂದು ಮೋದಿಯವರು ಹೇಳುತ್ತಾರೆ. ಆದರೆ ಅದಾನಿ ಎಸಗಿದ ಆರ್ಥಿಕ ಅಪರಾಧದ ಬಗ್ಗೆ ಮೋದಿಯವರ ವ್ಯಾಖ್ಯಾನವೇನು? ED, CBI ಮತ್ತು IT ಸಂಸ್ಥೆಗಳು ಕೇವಲ ರಾಜಕೀಯ ವಿರೋಧಿಗಳ ವಿರುದ್ಧ ತನಿಖೆ ಮಾಡುವ ಸಂಸ್ಥೆಗಳೆ? ಮೋದಿಯವರ ಅತ್ಯಾಪ್ತರಿಗೆ ಈ ತನಿಖಾ ಸಂಸ್ಥೆಗಳಿಂದ ವಿನಾಯಿತಿ ಇದೆಯೇ?” ಎಂದಿದ್ದಾರೆ.

“ಸಾರ್ವಜನಿಕರ ಜೀವನ ಭದ್ರತೆಗಾಗಿ ಕಾಂಗ್ರೆಸ್‌ 1956ರಲ್ಲಿ LIC ಸ್ಥಾಪಿಸಿತ್ತು. 2021ರವರೆಗೆ LICಯಲ್ಲಿದ್ದ ಜನರ ಹಣ ಸುಭದ್ರವಾಗಿತ್ತು. ಆದರೆ 2021ರಲ್ಲಿ ಈ ಸರ್ಕಾರ LIC ಹಣವನ್ನು ಷೇರುಪೇಟೆಯಲ್ಲಿ ಹೂಡಿಕೆ ಮಾಡುವ ನಿರ್ಧಾರ ಮಾಡಿತ್ತು. LIC‌ ಹಣವನ್ನು ಷೇರುಪೇಟೆಯಲ್ಲಿ ಹೂಡಿಕೆ ಮಾಡುವ ನಿರ್ಧಾರ ಮಾಡಿದ್ದು ಯಾರ ಅನುಕೂಲಕ್ಕಾಗಿ ಮೋದಿಯವರೆ?” ಎಂದು ಕೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Adani company is running and functioning as it was. No problem for his company business. His company shares has gone down it will not give problems to company. Why we are giving preference to other contries organisation views.
    Our contry people,leaders should not support this research reports. LIC invested its .1% and SBI has given loan for the business and compan net worth. When company is running as usual then what more we want

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...