Homeಕರ್ನಾಟಕಇದು ಶಿಕ್ಷಣ ಇಲಾಖೆಯೋ, ತುಘಲಕ್ ಮಾದರಿ ಆಡಳಿತವೋ?: ಡಾ.ವಿ.ಪಿ.ನಿರಂಜನಾರಾಧ್ಯ

ಇದು ಶಿಕ್ಷಣ ಇಲಾಖೆಯೋ, ತುಘಲಕ್ ಮಾದರಿ ಆಡಳಿತವೋ?: ಡಾ.ವಿ.ಪಿ.ನಿರಂಜನಾರಾಧ್ಯ

- Advertisement -
- Advertisement -

“ಶಿಕ್ಷಣ ಇಲಾಖೆಯು ತನ್ನ ಗೊಂದಲದ ನಿರ್ಧಾರಗಳಿಂದ ಹೊರಬರುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಇದು ಶಿಕ್ಷಣ ಇಲಾಖೆಯೋ ಅಥವಾ ತುಘಲಕ್ ಮಾದರಿ ಆಡಳಿತವೋ ತಿಳಿಯುತ್ತಿಲ್ಲ” ಎಂದು ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಸಂಸ್ಥಾಪಕ ಮಹಾಪೋಷಕರಾದ ಡಾ.ವಿ.ಪಿ.ನಿರಂಜನಾರಾಧ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಠ್ಯದಿಂದ ಹೊರಗಿಡಲಾಗಿದ್ದ ಪಾಠ, ಪದ್ಯಗಳನ್ನು ಮತ್ತೆ ಸೇರಿಸಲು ಸುತ್ತೋಲೆ ಹೊರಡಿಸಿರುವುದರಿಂದ ಗೊಂದಲ ಸೃಷ್ಟಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಮಕ್ಕಳ ಪ್ರವೇಶ ವಯಸ್ಸು, 5 ಹಾಗೂ 8ನೇ ತರಗಳಿಗೆ ಪಬ್ಲಿಕ್ ಪರೀಕ್ಷೆ, ಉಚಿತ ಕಡ್ಡಾಯ ಶಿಕ್ಷಣಕ್ಕೆ ಸಂವಿಧಾನ ಬಾಹಿರವಾಗಿ ಪಾಲಕರಿಂದ ಶುಲ್ಕ, ಇತ್ಯಾದಿ ಮಕ್ಕಳ ಹಾಗೂ ಪಾಲಕ ವಿರೋಧಿ ತೀರ್ಮಾನಗಳಿಗೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವುಗಳನ್ನು ಹಿಂಪಡೆಯಲಾಗಿತ್ತು. ಇದು ಮಕ್ಕಳು ಹಾಗೂ ಪಾಲಕರ ಮನಸ್ಸಿನಲ್ಲಿ ಇನ್ನು ಹಸಿಯಾಗಿರುವ ಬೆನ್ನಲ್ಲೇ ಮತ್ತೊಂದು ಹೊಸ ವಿವಾದಿತ ಸುತ್ತೋಲೆಯನ್ನು ಇಲಾಖೆ ಹೊರಡಿಸಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹೊಸ ಸುತ್ತೋಲೆ ಅನ್ವಯ ಈ ಹಿಂದೆ ಮೌಲ್ಯಮಾಪನದಿಂದ ಕೈಬಿಟ್ಟಿದ್ದ ಪಾಠಗಳನ್ನು ಮತ್ತೆ ಸೇರಿಸುವ ಮೂಲಕ ಮಕ್ಕಳು ಪಾಲಕರಲ್ಲಿ ಗೊಂದಲ ಸೃಷ್ಟಿಸಿದೆ. ಈ ಹಿಂದೆ 10ನೇ ತರಗತಿ ಮತ್ತು ಇತರ ಕೆಲವು ತರಗತಿಗಳ ಕನ್ನಡ ಪಠ್ಯಗಳ ಕೆಲವು ಪಾಠಗಳನ್ನು, ಲೇಖಕರು ಪಠ್ಯ ಪರಿಷ್ಕರಣಾ ವಿವಾದದ ಹಿನ್ನೆಲೆಯಲ್ಲಿ ತಮ್ಮ ಹಕ್ಕು ಸ್ವಾಮ್ಯವನ್ನು ಹಿಂತೆಗೆದುಕೊಂಡಿದ್ದರು. ಆದ ಕಾರಣ ಪಠ್ಯದಿಂದ ಕೈಬಿಟ್ಟು ಕಲಿಕೆ ಹಾಗೂ ಮೌಲ್ಯಮಾಪನಕ್ಕೆ
ಪರಿಗಣಿಸಬಾರದೆಂದು ಸುತ್ತೋಲೆ ಹೊರಡಿಸಲಾಗಿತ್ತು. ಅದರಂತೆ ಆ ಪಾಠಗಳನ್ನು ಶಿಕ್ಷಕರು ಕಲಿಕೆ ಮತ್ತು ಮೌಲ್ಯಮಾಪನ ಪರಿಧಿಯಿಂದ ಹೊರಗಿಟ್ಟಿದ್ದರು. ಈಗ ಸರ್ಕಾರ ಮತ್ತೊಮ್ಮೆ ಸುತ್ತೋಲೆಯನ್ನು ಹೊರಡಿಸಿ ಈ ಹಿಂದೆ ಕೈ ಬಿಟ್ಟ ಪಾಠಗಳನ್ನು ಮತ್ತೆ 2022-23ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಬೋಧನೆ ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಹೇಳಿದೆ. ಈ ಪಾಠಗಳನ್ನು ಮತ್ತೆ ಬೋಧನೆ ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಹೊರಡಿಸಿರುವ ಈ ಸುತ್ತೋಲೆ ಮಕ್ಕಳಲ್ಲಿ, ಪೋಷಕರಲ್ಲಿ ಹಾಗೂ ಶಿಕ್ಷಕರಲ್ಲಿ ಗೊಂದಲ ಉಂಟುಮಾಡಿದೆ. ಇದು ಶಿಕ್ಷಣ ಇಲಾಖೆಯೋ ಅಥವಾ ತುಘಲಕ್ ಮಾದರಿ ಆಡಳಿತವೋ ತಿಳಿಯುತ್ತಿಲ್ಲ” ಎಂದು ಟೀಕಿಸಿದ್ದಾರೆ.

ಎಲ್ಲಕ್ಕಿಂತ ಮಿಗಿಲಾಗಿ ಈಗಾಗಲೇ ಕನ್ನಡ ಕಲಿಯುವ ಮಕ್ಕಳಲ್ಲಿ ಕನ್ನಡದ ಪಾಠಗಳು ನಿರಾಸಕ್ತಿಯನ್ನು ಉಂಟು ಮಾಡಿದ್ದು, ‘ಹೆಚ್ಚು ಪಾಠಗಳಿರುವ ಭಾಷೆ ಕನ್ನಡ ಎಂತಲೂʼ, ಈ ಪಾಠಗಳನ್ನು ಶಿಕ್ಷಕರು ಒಂದು ಶೈಕ್ಷಣಿಕ ಅವಧಿಯಲ್ಲಿ ಕಲಿಸಲು ಅಸಾಧ್ಯವೆಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ ಎಂದು ತಿಳಿಸಿದ್ದಾರೆ.

“ಅಲ್ಲದೆ 2021-22ನೇ ಸಾಇನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಆರು ವಿಷಯಗಳ ಪ್ರಗತಿ ನೋಡಿದಾಗ, ಪ್ರಥಮ ಭಾಷೆ ಕನ್ನಡದ ಫಲಿತಾಂಶ 4ನೇ ಸ್ಥಾನಕ್ಕೆ ಕುಸಿದಿದೆ. ಮಕ್ಕಳು ಮತ್ತು ಪೋಷಕರು ಪ್ರಥಮ ಭಾಷೆ ಕನ್ನಡ ಆಯ್ಕೆಯಿಂದ ವಿಮುಖರಾಗಿ ಭಾಷೆಗಳನ್ನು ಅಂಕಗಳಿಕೆ ದೃಷ್ಟಿಯಿಂದ ಇತರ ಭಾಷೆಗಳಾದ ಸಂಸ್ಕೃತ , ಇಂಗ್ಲಿಷ್, ಹಿಂದಿ ಆಯ್ಕೆ ಮಾಡುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಸುತ್ತೋಲೆ ಹೊರಡಿಸಿ ವಾಪಸ್‌ ಪಡೆಯುವ ಸರ್ಕಾರ: ಒಂದೇ ತಿಂಗಳಲ್ಲಿ ಮೂರು ಪ್ರಕರಣ

‘ಕನಿಷ್ಠ ಪಠ್ಯ ಗರಿಷ್ಠ ಕಲಿಕೆ’ ಎಂಬ ತತ್ವದ ಆಧಾರದಲ್ಲಿ ಮಕ್ಕಳಲ್ಲಿ ವಿಷಯದ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸಿರುವ ಈ ಸಂದರ್ಭದಲ್ಲಿ ಮತ್ತೆ ಕೈಬಿಟ್ಟ ಪಾಠಗಳನ್ನು ಕಲಿಯಿರಿ ಎಂದು ಹೊರಡಿಸಿರುವ ಈ ಸುತ್ತೋಲೆ ಮಕ್ಕಳು ಹಾಗು ಪಾಲಕರಲ್ಲಿ ಆತಂಕ ಮೂಡಿಸಿದೆ. ಜೊತೆಗೆ 10ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಇಂಥಹ ತೀರ್ಮಾನ ಸ್ವಾಭಾವಿಕವಾಗಿ ಮಕ್ಕಳು ಹಾಗು ಪಾಲಕರಲ್ಲಿ ಆತಂಕ ಮೂಡಿಸುತ್ತದೆ ಎಂದು ಹೇಳಿದ್ದಾರೆ.

ಈ ರೀತಿ ಮಕ್ಕಳ ಬದುಕಿನ ಜೊತೆ ಚೆಲ್ಲಾಟವಾಡುವುದನ್ನು ಬಿಟ್ಟು ಈ ಕೂಡಲೇ ಹಿಂದಿನ ತೀರ್ಮಾನಕ್ಕೆ ಬದ್ಧವಾಗಿ ಮೌಲ್ಯಮಾಪನ/ಪರೀಕ್ಷೆ ಸರಳಗೊಳಿಸಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕಿದೆ. ಈಗಾಗಲೇ ಪಠ್ಯದಿಂದ ಕೈಬಿಟ್ಟ ಪಠ್ಯಗಳನ್ನು ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸಬಾರದೆಂದು ಹೊರಡಿಸಿದ್ದ ಸುತ್ತೋಲೆಯನ್ನು ಮಾನ್ಯಗೊಳಿಸಿ ಮಕ್ಕಳ ಆತಂಕವನ್ನು ದೂರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...