Homeಮುಖಪುಟ140 ಕೋಟಿ ಜನರಲ್ಲಿ 100 ಜನ ಮಾತ್ರ ಅತೀ ಶ್ರೀಮಂತರಾಗುವುದು ನ್ಯಾಯವೆ?- ರಾಹುಲ್ ಗಾಂಧಿ ಪ್ರಶ್ನೆ

140 ಕೋಟಿ ಜನರಲ್ಲಿ 100 ಜನ ಮಾತ್ರ ಅತೀ ಶ್ರೀಮಂತರಾಗುವುದು ನ್ಯಾಯವೆ?- ರಾಹುಲ್ ಗಾಂಧಿ ಪ್ರಶ್ನೆ

"ಮೋದಿ ಸರ್ಕಾರವು ಎರಡು ಭಾರತಗಳನ್ನು ಸೃಷ್ಟಿಸಿದೆ. ಒಂದು ಬಡವರು ಮತ್ತು ಸಾಮಾನ್ಯ ಜನರು ವಾಸಿಸುವ ಭಾರತ. ಮತ್ತೊಂದು ಎಲ್ಲಾ ಸಂಪತ್ತನ್ನು ಹೊಂದಿರುವ ಕೇವಲ 200-300 ಜನರು ವಾಸಿಸುವ ಭಾರತವಾಗಿದೆ.

- Advertisement -
- Advertisement -

ಭಾರತ ದೇಶದ 140 ಕೋಟಿ ಜನರಲ್ಲಿ ಕೇವಲ 100 ಜನ ಮಾತ್ರ ಅತೀ ಶ್ರೀಮಂತರಾಗುವುದು ನ್ಯಾಯವೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಭಾರತ್ ಜೋಡೋ ಜಾತ್ರೆಯ 112ನೇ ದಿನವಾದ ಇಂದು ಉತ್ತರ ಪ್ರದೇಶದಿಂದ ಹರಿಯಾಣ ರಾಜ್ಯ ಪ್ರವೇಶಿಸಿ ಪಾಣಿಪತ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನನ್ನ ಮನಸ್ಸಿನಲ್ಲಿ ಒಂದು ಪ್ರಶ್ನೆ ಇದೆ. ದೇಶದ ಜನಸಂಖ್ಯೆ 140 ಕೋಟಿ ಇದೆ. ಆದರೆ ದೇಶದ ಒಟ್ಟು ಸಂಪತ್ತಿನ ಶೇಕಡ 50 ರಷ್ಟನ್ನು ದೇಶದ ಕೇವಲ 100 ಶ್ರೀಮಂತರು ಮಾತ್ರ ಹೊಂದಿದ್ದಾರೆ. ನಿಮಗೆ ಇದರಲ್ಲಿ ನ್ಯಾಯ ಕಾಣುತ್ತಿದೆಯೇ? ಇದು ನರೇಂದ್ರ ಮೋದಿಯವರ ಭಾರತದ ವಾಸ್ತವಸ್ಥಿತಿ” ಎಂದು ಹೇಳಿದ್ದಾರೆ.

“ನೀವು ಭಾರತದ ಎಲ್ಲಾ ಕಾರ್ಪೊರೇಟ್ ಲಾಭಗಳನ್ನು ನೋಡಿದರೆ, 90 ಪ್ರತಿಶತದಷ್ಟು ಲಾಭವು ಕೇವಲ 20 ಕಾರ್ಪೊರೇಟ್‌ಗಳಿಗೆ ಮಾತ್ರ ದಕ್ಕುಕತ್ತಿದೆ ಮತ್ತು ಈ ದೇಶದ ಅರ್ಧದಷ್ಟು ಸಂಪತ್ತು ಕೇವಲ 100 ಜನರ ಕೈಯಲ್ಲಿದೆ. ಇದು ನರೇಂದ್ರ ಮೋದಿಯವರ ಭಾರತದ ಸತ್ಯದರ್ಶನ” ಎಂದು ಅವರು ಹೇಳಿದ್ದಾರೆ.

“ಮೋದಿ ಸರ್ಕಾರವು ಎರಡು ಭಾರತಗಳನ್ನು ಸೃಷ್ಟಿಸಿದೆ. ಒಂದು ಬಡವರು ಮತ್ತು ಸಾಮಾನ್ಯ ಜನರು ವಾಸಿಸುವ ಭಾರತ. ಮತ್ತೊಂದು ಎಲ್ಲಾ ಸಂಪತ್ತನ್ನು ಹೊಂದಿರುವ ಕೇವಲ 200-300 ಜನರು ವಾಸಿಸುವ ಭಾರತವಾಗಿದೆ. ನಿಮ್ಮ ಬಳಿ ಏನೂ ಇಲ್ಲ. ನಿಮ್ಮ ಬಳಿ ಕೇವಲ ಪಾಣಿಪತ್‌ ನೀಡುವ ಗಾಳಿ ಮಾತ್ರ ಇದೆ ಅದು ಸಹ ಉಸಿರಾಡಲು ಕಷ್ಟವಾದ ಗಾಳಿಯಾಗಿದ್ದು, ಅದರಿಂದ ಕ್ಯಾನ್ಸರ್ ಬರುತ್ತದೆ” ಎಂದು ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾಣಿಪತ್ ಅತಿ ಸಣ್ಣ ಕೈಗಾರಿಕೆಗಳ ಕೇಂದ್ರವಾಗಿದೆ. ಆದರೆ ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿ ಸಣ್ಣ ಮತ್ತು ಮಧ್ಯಮ ವ್ಯವಹಾರಗಳನ್ನು ಹಾಳುಮಾಡಿದೆ. ಇದು ಪಾಣಿಪತ್ ಕಥೆ ಮಾತ್ರವಲ್ಲ ಬದಲಿಗೆ ಇಡೀ ದೇಶದ ಕಥೆಯಾಗಿದೆ. ಜಿಎಸ್‌ಟಿ ಮತ್ತು ನೋಟು ನಿಷೇಧ ದೇಶದ ಬೆನ್ನೆಲುಬು ಮುರಿದಿದೆ. ನಿರುದ್ಯೋಗದಲ್ಲಿ ಶೇ.38 ರಷ್ಟು ಹೆಚ್ಚಿರುವ ಹರಿಯಾಣ ದೇಶದಲ್ಲೇ ಅಗ್ರಸ್ಥಾನದಲ್ಲಿದೆ ಎಂದರು.

ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ ಜಮ್ಮು ಕಾಶ್ಮೀರ ಮುಖಂಡರು

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಜಮ್ಮು ಕಾಶ್ಮೀರ ರಾಜ್ಯಕ್ಕೆ ಪ್ರವೇಶಿಸುವ ಮುನ್ನವೇ ಕಾಂಗ್ರೆಸ್ ತೊರೆದು ಗುಲಾಮ್ ನಬಿ ಆಜಾದ್ ಅವರ ಡೆಮಾಕ್ರಟಿಕ್ ಆಜಾದ್ ಪಕ್ಷ ಸೇರಿದ್ದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್, ಮಾಜಿ ಸಚಿವರಾದ ಪೀರ್ಜಾದಾ ಮೊಹಮ್ಮದ್ ಸಯೀದ್, ಬಲ್ವಾನ್ ಸಿಂಗ್ ಸೇರಿದಂತೆ ಇತರ ಪ್ರಮುಖ ನಾಯಕರು ಇಂದು ಮತ್ತೆ ಕಾಂಗ್ರೆಸಿಗೆ ವಾಪಸ್ಸಾಗಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ಬಲ ತರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...