Homeಮುಖಪುಟರಂಜಾನ್‌‌ನಲ್ಲಿ ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಸಾರ್ವಜನಿಕವಾಗಿ ಆಹಾರ ಸೇವಿಸುವುದನ್ನು ನಿಷೇಧಿಸಿದರೆ ಸರಿಯೆ?: ಬಿಜೆಪಿಯ ಮಾಂಸ ನಿಷೇಧದ...

ರಂಜಾನ್‌‌ನಲ್ಲಿ ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಸಾರ್ವಜನಿಕವಾಗಿ ಆಹಾರ ಸೇವಿಸುವುದನ್ನು ನಿಷೇಧಿಸಿದರೆ ಸರಿಯೆ?: ಬಿಜೆಪಿಯ ಮಾಂಸ ನಿಷೇಧದ ಬಗ್ಗೆ ಒಮರ್‌‌ ಅಬ್ದುಲ್ಲಾ ಪ್ರತಿಕ್ರಿಯೆ

- Advertisement -
- Advertisement -

ನವರಾತ್ರಿಯ ಸಮಯದಲ್ಲಿ ಎಲ್ಲಾ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ದಕ್ಷಿಣ ದೆಹಲಿ ಬಿಜೆಪಿ ಮೇಯರ್ ಕರೆಗೆ ರಾಜಕೀಯ ವಲಯದಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೆಹಲಿಯ ಕೆಲವು ಮಾಂಸದ ಅಂಗಡಿಗಳು ಸ್ವಯಂ ಪ್ರೇರಿತವಾಗಿ ಮುಚ್ಚಿದ್ದರೆ, ಇನ್ನು ಕೆಲವು ಅಂಗಡಿಗಳನ್ನು ಭಯದಿಂದ ಮುಚ್ಚಲಾಗಿತ್ತು. ಇನ್ನೂ ಕೆಲವು ಅಂಗಡಿಗಳು ಮೇಯರ್‌ ಕರೆಗೆ ಗಮನ ಕೊಡಲಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.

ದಕ್ಷಿಣ ಎಂಸಿಡಿ ಮೇಯರ್ ಮುಕೇಶ್ ಸೂರ್ಯನ್ ಅವರು ತಮ್ಮ ಆಯುಕ್ತರಿಗೆ ಪತ್ರ ಬರೆದು ಏಪ್ರಿಲ್ 2 ರಿಂದ ಏಪ್ರಿಲ್ 11 ರವರೆಗೆ ನವರಾತ್ರಿ ಉತ್ಸವದ ಒಂಬತ್ತು ದಿನಗಳ ಅವಧಿಯಲ್ಲಿ ಎಲ್ಲಾ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸುವಂತೆ ಒತ್ತಾಯಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೇಯರ್ ಸೂರ್ಯನ್ ಅವರು ನವರಾತ್ರಿಯ ಒಂಬತ್ತು ದಿನಗಳಲ್ಲಿ ಜನರು ಈರುಳ್ಳಿ ಮತ್ತು ಬೆಳ್ಳುಳ್ಳಿ ಬಳಕೆಯನ್ನು ಸಹ ತ್ಯಜಿಸುತ್ತಾರೆ. ಆದ್ದರಿಂದ ಮಾಂಸವನ್ನು ತೆರೆದು ಮಾರಾಟ ಮಾಡುವ ದೃಶ್ಯವು ಹಿಂದೂಗಳಿಗೆ ನೋವುಂಟು ಮಾಡುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

ಅವರ ಈ ಬೇಡಿಕೆಯು ಬಹುಸಂಖ್ಯಾತವಾದ ಸಿದ್ಧಾಂತವನ್ನು ಆಧರಿಸಿದ್ದು, ಬಹುಸಂಖ್ಯಾತ ಜನರ ಸಲುವಾಗಿ ಅಲ್ಪಸಂಖ್ಯಾತರು ತಮ್ಮ ಅಭ್ಯಾಸದಿಂದ ದೂರವಿಡುವಂತೆ ಒತ್ತಾಯಿಸಲಾಗಿದೆ.

ತಮ್ಮ ಪಕ್ಷದ ಸಹೋದ್ಯೋಗಿಯ ಬೇಡಿಕೆಯನ್ನು ಬೆಂಬಲಿಸಿ, ಪಶ್ಚಿಮ ದೆಹಲಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ, ಅಸಾದುದ್ದೀನ್ ಓವೈಸಿಯಂತಹ ನಾಯಕರ ಪ್ರಚೋದನಕಾರಿ ಹೇಳಿಕೆಗಳಿಗೆ ಬಲಿ ಬೀಳದೆ ಹಿಂದೂಗಳ ಹಬ್ಬವನ್ನು ಗೌರವಿಸುವಂತೆ ಮುಸ್ಲಿಮರನ್ನು ಒತ್ತಾಯಿಸಿದ್ದರು.

ದೆಹಲಿಯ ದಕ್ಷಿಣ, ಪೂರ್ವ ಮತ್ತು ಉತ್ತರ ಕಾರ್ಪೋರೇಷನ್‌ ಅನ್ನು ಬಿಜೆಪಿ ಆಳುತ್ತಿದೆ. ಬಿಜೆಪಿ ಆಡಳಿತದ ಪಾಲಿಕೆಯ ಈ ತೀರ್ಮಾನಕ್ಕೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ರಾಜ್ಯದ ಆಡಳಿತ ಪಕ್ಷವಾದ ಎಎಪಿ, ಕಾಂಗ್ರೆಸ್ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕೂಡ ಬಿಜೆಪಿ ಮೇಯರ್‌ ಅವರ ಸರ್ವಾಧಿಕಾರಿ ನೀತಿಗೆ ಕಿಡಿ ಕಾರಿದ್ದಾರೆ.

ಪರ್ವೇಶ್‌ ಸಾಹಿಬ್ ಸಿಂಗ್ ವರ್ಮಾ ಅವರ ಬಹುಸಂಖ್ಯಾತವಾದದ ಬೇಡಿಕೆಗೆ ಕಾಶ್ಮೀರದ ಮಾಜಿ ಸಿಎಂ ಅಬ್ದುಲ್ಲಾ ಉತ್ತರಿಸಿದ್ದು, “ಮುಸ್ಲಿಮರು ಪ್ರಾಬಲ್ಯವಿರುವ ಕಾಶ್ಮೀರದಲ್ಲಿ ರಂಜಾನ್ ಸಮಯ ತೆರೆದ ಸ್ಥಳದಲ್ಲಿ ಆಹಾರ ನೀಡುವುದನ್ನು ನಿಷೇಧಿಸುವುದು ಸೂಕ್ತವೇ?” ಎಂದು ವ್ಯಂಗ್ಯವಾಗಿ ಕೇಳಿದ್ದಾರೆ.

ಇದನ್ನೂ ಓದಿ: ’ಕಲ್ಲು ಹೂವಿನ ನೆರಳು’: ತಾಜಾ ನಿರೂಪಣೆಯ ಮತ್ತು ಸಂವೇದನೆಯುಳ್ಳ ಗ್ರಹಿಕೆಯ ಕಥೆಗಳು

“ರಂಜಾನ್ ಸಮಯದಲ್ಲಿ ನಾವು ಸೂರ್ಯೋದಯ ಮತ್ತು ಸೂರ್ಯಾಸ್ತದ ನಡುವೆ ಊಟ ಮಾಡುವುದಿಲ್ಲ. ಪ್ರತಿಯೊಬ್ಬ ಮುಸ್ಲಿಮೇತರ ನಿವಾಸಿಗಳು ಅಥವಾ ಪ್ರವಾಸಿಗರು ಸಾರ್ವಜನಿಕವಾಗಿ, ವಿಶೇಷವಾಗಿ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ತಿನ್ನುವುದನ್ನು ನಾವು ನಿಷೇಧಿಸಿದರೆ ಅದು ಸರಿ ಎಂದು ನಾನು ಭಾವಿಸುತ್ತೇನೆ. ದಕ್ಷಿಣ ದೆಹಲಿಗೆ ಬಹುಸಂಖ್ಯಾತವಾದ ಸರಿಯಾಗಿದ್ದರೆ, ಜಮ್ಮು ಕಾಶ್ಮೀರಕ್ಕೂ ಅದು ಸರಿಯಾಗಿರುತ್ತದೆ” ಎಂದು ಒಮರ್‌‌ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ದೆಹಲಿ ಕಾಂಗ್ರೆಸ್ ಉಪಾಧ್ಯಕ್ಷ ಅಭಿಷೇಕ್ ದತ್ ಅವರು ಬಿಜೆಪಿ ಮೇಯರ್‌ ಬೇಡಿಕೆಯನ್ನು ಅಗ್ಗದ ಪ್ರಚಾರದ ಸ್ಟಂಟ್ ಎಂದು ಬಣ್ಣಿಸಿದ್ದಾರೆ. ಇಂತಹ ನಿಷೇಧವನ್ನು ವಿಧಿಸಲು ಅವರಿಗೆ ಯಾವುದೇ ಹಕ್ಕಿಲ್ಲ ಎಂದು ಅವರು ಹೇಳಿದ್ದಾರೆ.

ಎಎಪಿ ನಾಯಕ ದುರ್ಗೇಶ್ ಪಾಠಕ್ ಅವರು, ಇಂತಹ ನಿಷೇಧವನ್ನು ಬಿಜೆಪಿ ಆಡಳಿತದ ಉತ್ತರ ಪ್ರದೇಶ ಮತ್ತು ಹರಿಯಾಣದಲ್ಲಿ ವಿಧಿಸಲಿ ಎಂದು ಸವಾಲು ಹಾಕಿದ್ದಾರೆ.

ದಕ್ಷಿಣ ಎಂಸಿಡಿ ವ್ಯಾಪ್ತಿಯಲ್ಲಿ ಸುಮಾರು 1,500 ನೋಂದಾಯಿತ ಮಾಂಸದ ಅಂಗಡಿಗಳಿವೆ. ನವರಾತ್ರಿಯಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಪಾಲಿಕೆಯು ಇದೇ ಮೊದಲ ಬಾರಿಗೆ ಕೋರಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಪೊಲೀಸರು ಜನರ ಮೊಬೈಲ್ ಪರಿಶೀಲಿಸುವಂತಿಲ್ಲ : ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್ ಪಂತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...