Homeಮುಖಪುಟರಾಜ್ಯ ಬಿಜೆಪಿ ಸರ್ಕಾರದ ಸ್ವಘೋಷಿತ 'ಮಹಾನಾಯಕ-ಏಕಗವಾಕ್ಷಿ' ಬಗ್ಗೆ ಮೋದಿ ಮಾತಾಡುವರೇ?: HDK ಪ್ರಶ್ನೆ

ರಾಜ್ಯ ಬಿಜೆಪಿ ಸರ್ಕಾರದ ಸ್ವಘೋಷಿತ ‘ಮಹಾನಾಯಕ-ಏಕಗವಾಕ್ಷಿ’ ಬಗ್ಗೆ ಮೋದಿ ಮಾತಾಡುವರೇ?: HDK ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬಂಗಾಳದ ಏಕಗವಾಕ್ಷಿ ವ್ಯವಸ್ಥೆ ಬಗ್ಗೆ ಮಾತಾಡಿದ್ದಾರೆ. ದೇಶದಲ್ಲಿ ಅಭಿವೃದ್ಧಿಗೆ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದೂ, ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್ ಬ್ಯಾನರ್ಜಿ ಕೇಂದ್ರಿತ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ. ಆದರೆ, ಕರ್ನಾಟಕದಲ್ಲಿ ಯಾವ ಏಕಗವಾಕ್ಷಿ ವ್ಯವಸ್ಥೆ ಇದೆ? ಮೋದಿ ಉತ್ತರಿಸುವರೇ? ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಅವರು ಇಂದು ಟ್ವಿಟ್ಟರ್‌ನಲ್ಲಿ ಪರೋಕ್ಷವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಮಗ ಬಿ.ವೈ ವಿಜಯೇಂದ್ರನ ವಿರುದ್ಧ ದಾಳಿ ನಡೆಸಿದ್ದು, ಈ ಕುರಿತು ನರೇಂದ್ರ ಮೋದಿಯವರೇಕೆ ಮಾತನಾಡುತ್ತಿಲ್ಲ ಎಂದು ಟೀಕಿಸಿದ್ದಾರೆ.

“ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ಖುರ್ಚಿ ಹಿಂದೆ ಅಡಗಿ ಕುಳಿತಿರುವ, ರಾಜ್ಯದ ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ಬಗ್ಗೆ ಬಿಜೆಪಿಯ ಹಿರಿಯ ಶಾಸಕರೇ ಹಾದಿ ಬೀದಿಯಲ್ಲಿ ಗೋಳಾಡುತ್ತಿದ್ದಾರೆ. ಯಡಿಯೂರಪ್ಪ ಕುಟುಂಬದ ಅಕ್ರಮದ ಬಗ್ಗೆ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಸ್ವಘೋಷಿತ ‘ಮಹಾನಾಯಕ-ಏಕಗವಾಕ್ಷಿ’ ಬಗ್ಗೆ ಮೋದಿ ಮಾತಾಡುವರೇ?” ಎಂದು ಎಚ್‌ಡಿಕೆ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಸರ್ಕಾರದಲ್ಲೇ ‘ಏಕಗವಾಕ್ಷಿ’ಯೊಂದು ಇರುವಾಗ, ಅದನ್ನು ಉದ್ದೇಶಪೂರ್ವಕವಾಗಿ ಪೋಷಿಸುತ್ತಿರುವಾಗ ಮೋದಿ ಅವರು ಮಮತಾ ಬ್ಯಾನರ್ಜಿ ಬಗ್ಗೆ ಟೀಕಿಸುವುದು ಆತ್ಮವಂಚನೆ. ರಾಜ್ಯದ ಜನರ ತೆರಿಗೆ ಹಣ, ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿಹಾಕುತ್ತಿರುವ, ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ವ್ಯವಸ್ಥೆಯನ್ನು ಮೋದಿ ಮೊದಲು ಕೊನೆಗಾಣಿಸಲಿ ಎಂದು ಅವರು ಆಗ್ರಹಿಸಿದ್ದಾರೆ.

2022ರ ಹೊತ್ತಿಗೆ ರೈತರ ಆದಾಯ ದ್ವಿಗುಣ ಮಾಡುವುದಾಗಿ ಮೋದಿ ಹೇಳಿದ್ದರು. ಆದರೆ, 2021ರ ವೇಳೆಗೇ ರೈತರ ಕೃಷಿ ಖರ್ಚು-ವೆಚ್ಚ ದುಪ್ಪಟ್ಟಾಗಿದೆ. ರಸಗೊಬ್ಬರ ಬೆಲೆ ಏರಿದೆ. ರೈತರು ಬೋರ್‌ವೆಲ್‌ ಕೊರೆಸಲಾಗದಂಥಾ ಪರಿಸ್ಥಿತಿ ಉದ್ಭವವಾಗಿದೆ. ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯು ಪರಿಸ್ಥಿತಿಯನ್ನು ವಿಷಮಗೊಳಿಸಿದೆ. ಇನ್ನು ಆದಾಯ ದ್ವಿಗುಣ ಎಲ್ಲಿ ಎಂದು ಅವರು ಕಿಡಿಕಾರಿದ್ದಾರೆ.

ಇವತ್ತಿನ ಲೆಕ್ಕಾಚಾರದ ಪ್ರಕಾರ ರೈತರು ಬೋರ್‌ವೆಲ್ ಕೊರೆಸಬೇಕಿದ್ದರೆ ₹1-2ಲಕ್ಷ ಖರ್ಚು ಮಾಡಬೇಕು. ಪಿವಿಸಿ ಪೈಪ್‌ಗಳ ದರ ದುಪ್ಪಟ್ಟಾಗಿದೆ, ಮೋಟರ್‌ ಬೆಲೆಯಲ್ಲಿ ಜಿಗಿತವಾಗಿದೆ. ಕೃಷಿ ಪಂಪ್‌ ಸೆಟ್‌ಗಳಿಗೆ ರೈತರಾದವರೇ ಶೇ. 18ರಷ್ಟು ಜಿಎಸ್‌ಟಿ ಪಾವತಿಸಬೇಕಿರುವುದು ವಿಷಾದಕರ. ಇದು ಕೃಷಿಗೆ ಪೂರಕ ಸ್ಥಿತಿಯೇ ಎಂಬುದರ ಅವಲೋಕನೆಯಾಗಬೇಕಿದೆ ಎಂದಿದ್ದಾರೆ.

ಕೃಷಿಯಲ್ಲಿ ಆದಾಯ ಗಳಿಸುವುದು ಇರಲಿ, ಕೃಷಿ ಮಾಡಲೇ ರೈತ ಸಂಕಷ್ಟ ಅನುಭವಿಸಬೇಕಾಗಿರುವುದು ಇವತ್ತಿನ ದುರಂತ. ಇದನ್ನು ನಿವಾರಿಸಲಾಗದೇ ಇರುವುದು ರೈತರ ಆದಾಯ ದ್ವಿಗುಣ ಮಾಡುವ ಕ್ರಮವೇ ಎಂಬುದರ ಬಗ್ಗೆ ನರೇಂದ್ರ ಮೋದಿಯವರು ಉತ್ತರಿಸಬೇಕು. ಪರಿಸ್ಥಿತಿ ಹೀಗಿದ್ದು, ಸಮಾವೇಶದಲ್ಲಿ ರೈತರ ಕಲ್ಯಾಣದ ಬಗ್ಗೆ ಮೋದಿ ಅವರು ಆಡುವ ಮಾತುಗಳು ಪ್ರಾಮಾಣಿಕವೇ? ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯ ಅಧಿಕೃತ ‘ಎಕ್ಸ್’ ಖಾತೆ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಚುನಾವಣಾ ಆಯೋಗ

0
ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್‌ನ್ನು ದಾಖಲಿಸಿದೆ. ಈ ಕುರಿತು ಚುನಾವಣಾ ಆಯೋಗ...