Homeಮುಖಪುಟಪ್ರತಿಭಟನೆ ಆಯೋಜನೆ ಮಾತ್ರಕ್ಕೆ ಯುಎಪಿಎ ದಾಖಲಿಸಬಹುದಾ? ದೆಹಲಿ ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

ಪ್ರತಿಭಟನೆ ಆಯೋಜನೆ ಮಾತ್ರಕ್ಕೆ ಯುಎಪಿಎ ದಾಖಲಿಸಬಹುದಾ? ದೆಹಲಿ ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ

- Advertisement -
- Advertisement -

ಒಬ್ಬರು ವ್ಯಕ್ತಿಯ ಮೇಲೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಲು ಪ್ರತಿಭಟನೆ ಆಯೋಜನೆ ಕಾರಣವಷ್ಟೆ ಸಾಕಾ? ಎಂದು ದೆಹಲಿ ಹೈಕೋರ್ಟ್ ಬುಧವಾರ (ಜ.8) ದೆಹಲಿ ಪೊಲೀಸರನ್ನು ಪ್ರಶ್ನಿಸಿದೆ.

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ವಿರೋಧಿಸುತ್ತಿದ್ದ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಅಮಿತ್ ಪ್ರಸಾದ್ ಅವರಿಗೆ ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಶಾಲಿಂದರ್ ಕೌರ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಪ್ರಶ್ನೆಯನ್ನು ಕೇಳಿದೆ.

ಯುಎಪಿಎ ಅಡಿ ಪ್ರಕರಣ ದಾಖಲಿಸಲು ಪ್ರತಿಭಟನಾ ಸ್ಥಳ ನಿಗದಿ ಮಾಡುವುದು ಅಥವಾ ಪ್ರತಿಭಟನೆ ಆಯೋಜಿಸಿದ ಕಾರಣವಷ್ಟೇ ಸಾಕಾ? ಇಲ್ಲಾ ಆ ಪ್ರತಿಭಟನಾ ಸ್ಥಳದಲ್ಲಿ ಹಿಂಸಾಚಾರ ನಡೆದಿರಬೇಕಾ? ನಿಮ್ಮ ವಾದ ಏನು? ಈಗ ಯಾವುದನ್ನು ಯುಎಪಿಎ ಅಡಿ ಪರಿಗಣಿಸಬೇಕು? ಎಂದು ನ್ಯಾಯಪೀಠ ಪ್ರಶ್ನಿಸಿದೆ. 

ಆರೋಪಿಗಳು ಗಲಭೆಗೆ ಸಂಚು ರೂಪಿಸಿದ್ದರು ಮತ್ತು ಅದನ್ನು ವಾಟ್ಸಾಪ್‌ ಚಾಟ್‌ಗಳ ಮೂಲಕ ಕಾರ್ಯಗತಗೊಳಿಸಿದ್ದಾರೆ ಎಂದು ಎಸ್‌ಪಿಪಿ ಪ್ರಸಾದ್ ನ್ಯಾಯಾಲಯಕ್ಕೆ ಹೇಳಿದ್ದಾರೆ. ಅಲ್ಲದೆ, ಇಬ್ಬರು ಆರೋಪಿಗಳು ಯಾರು, ಯಾರಿಗೆ, ಏನು ಸಂದೇಶ ಕಳಿಸಿದ್ದರು ಎಂದು ಓದಲು ಶುರು ಮಾಡಿದ್ದಾರೆ.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಾಲಯ, “ಯುಎಪಿಎ ವಿಧಿಸಲು ಪ್ರತಿಭಟನೆ ಆಯೋಜಿಸುವುದಷ್ಠೇ ಸಾಕಾ? ಆರೋಪಿಗಳು ಹಿಂಸಾತ್ಮಕ ಕೃತ್ಯವನ್ನು ಯೋಜಿಸಿ ಅದನ್ನು ಕಾರ್ಯಗತಗೊಳಿಸಿದ್ದಾರೆ ಎಂಬುವುದಕ್ಕೆ ಪುರಾವೆಗಳಿದ್ದರೆ, ಭಯೋತ್ಪಾದನಾ ವಿರೋಧಿ ಕಾನೂನಿನ ನಿಬಂಧನೆಗಳನ್ನು ಅನ್ವಯಿಸಬಹುದು. ಆದರೆ ವಾಟ್ಸಾಪ್ ಗುಂಪು ಮೂಲಕ ಪ್ರತಿಭಟನೆಗಳನ್ನು ಆಯೋಜಿಸುತ್ತಿದ್ದಾರೆ ಎಂಬುದು ನಿಮ್ಮ ವಾದವಾಗಿದೆ, ಅದು ಯುಎಪಿಎ ದಾಖಲಾತಿಗೆ ಸಾಕಾ? ಎಂದು ಕೇಳಿದೆ.

ಈ ವೇಳೆ ಶಾಹೀನ್ ಬಾಗ್ ಪ್ರತಿಭಟನೆಯನ್ನು ಉಲ್ಲೇಖಿಸಿದ ಎಸ್‌ಪಿಪಿ ಪ್ರಸಾದ್, ಆ ಪ್ರತಿಭಟನೆ ಕೂಡ ಅದಾಗಿಯೇ ನಡೆದಿರುವುದಲ್ಲ. ಅದರ ಹಿಂದೆ ದೊಡ್ಡ ಯೋಜನೆ ರೂಪಿಸಲಾಗಿತ್ತು. ಸ್ಥಳೀಯರು ಕೂಡ ಬೆಂಬಲಿಸದಿದ್ದಾಗ ಅದು ಹೇಗೆ ಅದಾಗಿಯೇ ಆದ ಪ್ರತಿಭಟನೆಯಾಗಲು ಸಾಧ್ಯ ಎಂದು ಹೇಳಿದ್ದಾರೆ.

ಯಾವ ಆರೋಪಿ, ಯಾವ ನಿರ್ದಿಷ್ಟ ವಾಟ್ಸಾಪ್ ಗುಂಪಿನ ಸದಸ್ಯನಾಗಿದ್ದಾನೆ ಎಂಬುವುದನ್ನು ತೋರಿಸುವ ಚಾರ್ಟ್ ರಚಿಸಲು ಎಸ್‌ಪಿಪಿಗೆ ಸೂಚಿಸಿದ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.

ಇದನ್ನೂ ಓದಿ : ಶೀಶ್ ಮಹಲ್ to ರಾಜ್‌ಮಹಲ್ : ಏನಿದು ದೆಹಲಿಯ ಬಂಗಲೆ ಗಲಾಟೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...