Homeಮುಖಪುಟಪುಲ್ವಾಮ ದಾಳಿ 2019ರ ಚುನಾವಣೆ ಗೆಲ್ಲಲ್ಲು ಬಿಜೆಪಿ ನಡೆಸಿದ ಪಿತೂರಿಯೇ? ಸಂಜಯ್ ರಾವತ್ ಪ್ರಶ್ನೆ

ಪುಲ್ವಾಮ ದಾಳಿ 2019ರ ಚುನಾವಣೆ ಗೆಲ್ಲಲ್ಲು ಬಿಜೆಪಿ ನಡೆಸಿದ ಪಿತೂರಿಯೇ? ಸಂಜಯ್ ರಾವತ್ ಪ್ರಶ್ನೆ

ಈ ಅಪರಾಧಕ್ಕೆ ಮೋದಿ ಸರ್ಕಾರದ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಇದಕ್ಕೆ ಕಾರಣರಾದ ಮಂತ್ರಿಗಳನ್ನು "ಕೋರ್ಟ್ ಮಾರ್ಷಲ್" ಮಾಡಬೇಕು ಎಂದು ಸಂಜಯ್ ರಾವತ್ ಒತ್ತಾಯಿಸಿದ್ದಾರೆ.

- Advertisement -
- Advertisement -

40 ಸೈನಿಕರು ಹುತಾತ್ಮರಗಲು ಕಾರಣವಾದ ಪುಲ್ವಾಮ ದಾಳಿಯು 2019ರ ಚುನಾವಣೆ ಗೆಲ್ಲಲ್ಲು ಬಿಜೆಪಿ ನಡೆಸಿದ ಪಿತೂರಿಯೇ ಎಂದು ಶಿವಸೇನೆ ಉದ್ಧವ್ ಠಾಕ್ರೆ ಬಣದ ಸಂಸದ ಸಂಜಯ್ ರಾವತ್ ಪ್ರಶ್ನಿಸಿದ್ದಾರೆ. ಕೂಡಲೇ ಬಿಜೆಪಿ ಸರ್ಕಾರದ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಸಂದರ್ಶನವೊಂದರಲ್ಲಿ, ಪುಲ್ವಾಮಾ ಭಯೋತ್ಪಾದಕ ಘಟನೆಗೆ ಕಾರಣವಾದ ಲೋಪಗಳ ಬಗ್ಗೆ ಮಾತನಾಡದಂತೆ ಪ್ರಧಾನಿ ಮೋದಿ ನನ್ನನ್ನು ತಡೆದರು ಎಂಬ ಸ್ಪೋಟಕ ಹೇಳಿಕೆ ನಿಡಿದ್ದಕ್ಕೆ ಪ್ರತಿಯಾಗಿ ಸಂಜಯ್ ರಾವತ್ ಮೇಲಿನ ಹೇಳಿಕೆ ನೀಡಿದ್ದಾರೆ.

ನಾಗ್ಪುರದಲ್ಲಿ ಮಾತನಾಡಿದ ಸಂಜಯ್ ರಾವತ್, “ಈಗ ಸತ್ಯಪಾಲ್ ಮಲಿಕ್ ಏನು ಹೇಳಿದ್ದಾರೋ ಅದೇ ಪ್ರಶ್ನೆಗಳನ್ನು ಪುಲ್ವಾಮ ದಾಳಿಯ ನಂತರ ಪ್ರತಿಪಕ್ಷಗಳು ಕೇಳಿದವು, ಆದರೆ ಆಡಳಿತಾರೂಢ ಬಿಜೆಪಿಯು ದೇಶದ್ರೋಹಿಗಳು ಮತ್ತು ಪಾಕಿಸ್ತಾನದ ರೀತಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸುವ ಮೂಲಕ  ಮೌನಗೊಳಿಲಸಿತು” ಎಂದಿದ್ದಾರೆ.

“ಸತ್ಯ ಪಾಲ್ ಮಲಿಕ್ ಅವರು ಪುಲ್ವಾಮ ಸ್ಫೋಟಕ್ಕಿಂತ ದೊಡ್ಡ ಸ್ಫೋಟಕ ಸತ್ಯವನ್ನು ಹೊರತಂದಿದ್ದಾರೆ. ಆದರೆ ಇದು ಹೊಸದೇನಲ್ಲ. ಕೆಲವು ಭಾರತ-ಪಾಕಿಸ್ತಾನದ ಘಟನೆಗಳು ರಾಜಕೀಯ ಲಾಭಕ್ಕಾಗಿ ತಯಾರಿಸಲ್ಪಡುತ್ತವೆ ಎಂದು ಜನರು ಆ ಸಮಯದಲ್ಲಿ ತಿಳಿದಿದ್ದರು. ಚುನಾವಣೆ ಗೆಲ್ಲುವ ಉದ್ದೇಶದಿಂದ ಉಗ್ರರ ದಾಳಿ ನಡೆಸಲಾಗಿದೆಯೇ? ರಾಜಕೀಯ ಲಾಭಕ್ಕಾಗಿ 40 ಯೋಧರ ಹತ್ಯೆಗೆ ಸಂಚು ನಡೆದಿದೆಯೇ? ನಾವು ವಿರೋಧ ಪಕ್ಷಗಳು ಆ ಸಮಯದಲ್ಲಿ ಇಂತಹ ಪ್ರಶ್ನೆಗಳನ್ನು ಕೇಳಲು ಪದೇ ಪದೇ ಪ್ರಯತ್ನಿಸಿದ್ದೆವು. ಆದರೆ ಆಡಳಿತ ಪಕ್ಷದಿಂದ ಬಾಯಿ ಮುಚ್ಚಲಾಯಿತು ಮತ್ತು ನಮ್ಮನ್ನು ‘ದೇಶದ್ರೋಹಿಗಳು’ ಎಂದು ಬ್ರಾಂಡ್ ಮಾಡಲಾಯಿತು” ಎಂದು ಅವರು ಹೇಳಿದ್ದಾರೆ.

ಭಾರೀ ಬಿಗಿ ಭದ್ರತೆಯ ನಡುವೆಯೂ ಆರ್‌ಡಿಎಕ್ಸ್ ಪುಲ್ವಾಮ ತಲುಪಿದ್ದು ಹೇಗೆ? ಭದ್ರತಾ ಸಿಬ್ಬಂದಿ ಎಂದಿಗೂ ಪುಲ್ವಾಮ ರಸ್ತೆಯಲ್ಲಿ ಪ್ರಯಾಣಿಸುವುದಿಲ್ಲ. ಹಾಗಾದರೆ ಸರ್ಕಾರ ಮತ್ತು ವಾಯುಪಡೆಯಿಂದ ಬೆಂಗಾವಲು ಪಡೆಗೆ ಏಕೆ ವಿಮಾನಗಳನ್ನು ನೀಡಲಿಲ್ಲ? ಈ ಅಪರಾಧಕ್ಕೆ ಮೋದಿ ಸರ್ಕಾರದ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸುವುದಲ್ಲದೆ, ಇದಕ್ಕೆ ಕಾರಣರಾದ ಮಂತ್ರಿಗಳನ್ನು “ಕೋರ್ಟ್ ಮಾರ್ಷಲ್” ಮಾಡಬೇಕು ಎಂದು ಸಂಜಯ್ ರಾವತ್ ಒತ್ತಾಯಿಸಿದ್ದಾರೆ.

ದಿ ವೈರ್ ಪತ್ರಕರ್ತ ಕರಣ್ ಥಾಪರ್‌ರವರಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ, “ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲಿನ ದಾಳಿಯು ಭಾರತೀಯ ಗುಪ್ತಚರ ಇಲಾಖೆಯ ಬಹುದೊಡ್ಡ ವೈಫಲ್ಯ ಮತ್ತು ನಿರ್ದಿಷ್ಟವಾಗಿ ಗೃಹ ಸಚಿವಾಲಯದ ಅಸಮರ್ಥತೆಯ ಪರಿಣಾಮವಾಗಿದೆ. ಆಗ ರಾಜನಾಥ್ ಸಿಂಗ್ ಗೃಹ ಸಚಿವರಾಗಿದ್ದರು. ಸಿಆರ್‌ಪಿಎಫ್ ತನ್ನ ಜವಾನರನ್ನು ಸಾಗಿಸಲು ವಿಮಾನವನ್ನು ಕೇಳಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಅದನ್ನು ನಿರಾಕರಿಸಿತು” ಎಂದು ಮಲಿಕ್ ದೂರಿದ್ದಾರೆ.

ದಾಳಿ ನಡೆದ ದಿನ ಸಂಜೆಯೇ ಪ್ರಧಾನಿ ಮೋದಿಯವರಿಗೆ ಈ ವೈಫಲ್ಯಗಳ ಬಗ್ಗೆ ತಿಳಿಸಿದೆ. ನಮ್ಮ ತಪ್ಪಿನಿಂದಾಗಿ 40 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ವಿವರಿಸಿದೆ. ಆದರೆ ಅವರು ಯಾರಿಗೂ ಹೇಳಬೇಡಿ, ಸುಮ್ಮನಿದ್ದುಬಿಡಿ ಎಂದರು. ಎನ್‌ಎಸ್‌ಎ ಅಜಿತ್ ದೋವಲ್ ಕೂಡ ನನ್ನ ಬಾಯಿ ಮುಚ್ಚಿಸಿದರು. ಆಗ ನನಗೆ ತಕ್ಷಣವೇ ಅರ್ಥವಾಯಿತು, ಅವರ ಉದ್ದೇಶ ಪಾಕಿಸ್ತಾನದ ಮೇಲೆ ದೋಷಾರೋಪ ಮಾಡಿ ಚುನಾವಣೆಯಲ್ಲಿ ಸರ್ಕಾರ ಮತ್ತು ಬಿಜೆಪಿಗೆ ಲಾಭ ಪಡೆಯುವುದಾಗಿತ್ತು ಎಂದು ಸತ್ಯಪಾಲ್ ಮಲಿಕ್ ಸಂದರ್ಶನದಲ್ಲಿ ಹೇಳಿದ್ದಾರೆ.

ಪುಲ್ವಾಮಾ ಘಟನೆಯಲ್ಲಿ 300 ಕೆಜಿ ಆರ್‌ಡಿಎಕ್ಸ್ ಸ್ಫೋಟಕಗಳನ್ನು ಹೊತ್ತ ಕಾರು ಪಾಕಿಸ್ತಾನದಿಂದ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ರಸ್ತೆಗಳು ಮತ್ತು ಹಳ್ಳಿಗಳಲ್ಲಿ 10-15 ದಿನಗಳ ಕಾಲ ಯಾರಿಗೂ ಗೊತ್ತಾಗದಂತೆ ಮತ್ತು ಯಾರಿಗೂ ತಿಳಿಯದಂತೆ ಸಂಚರಿಸುತ್ತಿತ್ತು ಎಂದರೆ ಇದು ಗಂಭೀರ ಗುಪ್ತಚರ ವೈಫಲ್ಯ ಅಲ್ಲವೇ ಎಂದಿದ್ದಾರೆ.

ಭ್ರಷ್ಟಾಚಾರದ ವಿಷಯಕ ಕುರಿತು ಮಾತನಾಡಿದ ಅವರು, “ಹೈಡ್ರೋ ಎಲೆಕ್ಟ್ರಿಕ್ ಯೋಜನೆ ಮತ್ತು ರಿಲಯೆನ್ಸ್ ಇನ್ಸೂರೆನ್ಸ್ ಯೋಜನೆಗೆ ಅನುಮತಿ ಪಡೆಯಲು ಬಿಜೆಪಿ ಆರ್‌ಎಸ್‌ಎಸ್‌ ಮುಖಂಡ ರಾಮ್ ಮಾಧವ್ ಬಂದಿದ್ದರು. ಆ ಯೋಜನೆಗಳಿಗೆ ಸಹಿ ಹಾಕಿದ್ದರೆ ನನಗೆ 300 ಕೋಟಿ ಸಿಗುತ್ತದೆ ಎಂದು ಜನ ಮಾತನಾಡುತ್ತಿದ್ದರು. ಆದರೆ ನಾನು ಆ ತಪ್ಪು ಕೆಲಸ ಮಾಡಲಿಲ್ಲ. ರಾಮ್ ಮಾಧವ್ ಎಷ್ಟೇ ಪ್ರಯತ್ನ ಪಟ್ಟರೂ ನಾನು ಆ ಯೋಜನೆಗಳನ್ನು ಜಾರಿಗೊಳಿಸಲಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಪುಲ್ವಾಮ ಕುರಿತು ಸತ್ಯಪಾಲ್ ಮಲಿಕ್‌ ಹೇಳಿಕೆಯಿಂದ ದೇಶವೇ ಬೆಚ್ಚಿಬಿದ್ದಿದೆ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...