Homeಮುಖಪುಟಸ್ಯಾಂಟ್ರೋ ರವಿ BJP ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ? ದಿನೇಶ್ ಗುಂಡೂರಾವ್ ಪ್ರಶ್ನೆ

ಸ್ಯಾಂಟ್ರೋ ರವಿ BJP ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ? ದಿನೇಶ್ ಗುಂಡೂರಾವ್ ಪ್ರಶ್ನೆ

- Advertisement -
- Advertisement -

ಸ್ಯಾಂಟ್ರೋ ರವಿ ವಿರುದ್ಧ FIR ದಾಖಲಾಗಿ ಹತ್ತು ದಿನಗಳಾಗಿವೆ. ಇಷ್ಟಾದರೂ ಸ್ಯಾಂಟ್ರೋ ರವಿಯ ಬಂಧನವಾಗಿಲ್ಲ. ಸ್ಯಾಂಟ್ರೋ ರವಿ BJP ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ ಅಥವಾ ಕೆಲ BJPಯವರಿಗೆ ಅವನು ಸಲ್ಲಿಸಿದ ‘ಸೇವೆ’ಯ ಕೃತಾಜ್ಞಾರ್ಥವಾಗಿ ಬಂಧನದಿಂದ ಆತನ ರಕ್ಷಣೆ ಮಾಡಲಾಗುತ್ತಿದೆಯೇ? ಸ್ಯಾಂಟ್ರೋ ರವಿ ಬಂಧನ ಯಾವಾಗ? ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ಸ್ಯಾಂಟ್ರೋ ರವಿಯಂತಹ ಪಿಂಪ್‌ BJP ಕಾರ್ಯಕರ್ತ, ಮತ್ತೊಂದು ಕಡೆ‌ ನಟೋರಿಯಸ್ ರೌಡಿ‌ ಶೀಟರ್‌ಗಳನ್ನು, ಪೋಲಿ‌ ಪುಡಾರಿಗಳನ್ನು BJPಯವರೇ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. BJP ಯವರು ನೈತಿಕತೆಯ ಬಗ್ಗೆ‌ ನೀತಿ ಪಾಠ ಮಾಡುವುದು ದೆವ್ವದ ಬಾಯಲ್ಲಿ ಸುಪ್ರಭಾತ ಕೇಳಿದಂತೆ. BJPಗೆ ಜನ ‘ಬ್ಲ್ಯೂ’ಜೆಪಿ ಎನ್ನುವುದು ಇದೇ ಕಾರಣಕ್ಕಾಗಿಯೇ?” ಎಂದು ವ್ಯಂಗ್ಯವಾಡಿದ್ದಾರೆ.

ನಾನು BJP ಕಾರ್ಯಕರ್ತ ಎಂದು ಸ್ಯಾಂಟ್ರೋ ರವಿಯೇ ಹೇಳಿಕೊಂಡಿದ್ದಾನೆ. ಇಂತಹ ತಲೆಹಿಡುಕರು BJP ಯಲ್ಲಿ ಮಾತ್ರ ಇರಲು ಸಾಧ್ಯ ಲಂಪಟರು, ನುಂಗುಬಾಕರು, ಲಂಚ-ಮಂಚ ಪ್ರಹಸನ ಶೂರರಿಂದ BJP ತುಂಬಿ ತುಳುಕುತ್ತಿದೆ. ಇಂತಹ ಭಂಡ BJPಯವರಿಗೆ ಸಂಸ್ಕೃತಿ, ಆಚಾರ, ವಿಚಾರಗಳ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ? ಎಂದು ಅವರಿ ಕಿಡಿಕಾರಿದ್ದಾರೆ.

ಕಳೆದ ವರ್ಷ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೋ ರವಿ ಆಲಿಯಾಸ್ ಕೆ.ಎಸ್ ಮಂಜುನಾಥ್ ವಿರುದ್ಧ ದೂರು ದಾಖಲಾಗಿದ್ದ ಸಂದರ್ಭದಲ್ಲಿ ಆತ ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಂಡಿರುವುದಾಗಿ ಮತ್ತು ತಾನು ವರ್ಗಾವಣೆ ಮಾಡಿಸಿಕೊಟ್ಟಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಅಲ್ಲದೆ ಸಿಎಂ ಮಗನ ಜೊತೆಗಿನ ಸ್ಯಾಂಟ್ರೋ ರವಿ ನಡೆಸಿರುವ ವಾಟ್ಸಾಪ್ ಸಂದೇಶ ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ; ಸಿಎಂ ಮಗ, ಬಿಜೆಪಿ ಸಚಿವರೊಂದಿಗೆ ಸಂಬಂಧ ಹೊಂದಿರುವ ಸ್ಯಾಂಟ್ರೊ ರವಿ ಯಾರು? ಇಲ್ಲಿದೆ ಪೂರ್ಣ ವಿವರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಪ್ರಚಾರಕ್ಕೆ ಸಿಂಗಾಪುರದ ರೈಲ್ವೆ ನಿಲ್ದಾಣದ ಫೋಟೋ ಬಳಸಿದ ಬಿಜೆಪಿ

0
ಬಿಜೆಪಿಯ ವಿವಿಧ ರಾಜ್ಯ ಮತ್ತು ಜಿಲ್ಲಾ ಘಟಕಗಳ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಇತ್ತೀಚೆಗೆ ಪೋಸ್ಟರ್ ಒಂದನ್ನು ಹಂಚಿಕೊಳ್ಳಲಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಮತ್ತು ಹಿಂಭಾಗದಲ್ಲಿ ಮೆಟ್ರೋ ರೈಲು ಸಾಗುತ್ತಿರು ಚಿತ್ರವಿರುವ ಈ ಪೋಸ್ಟರ್‌...