Homeಮುಖಪುಟ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಗಿಫ್ಟ್‌ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಬಂದಿದೆಯೇ? ಎಚ್ಚರ!

‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಗಿಫ್ಟ್‌ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಬಂದಿದೆಯೇ? ಎಚ್ಚರ!

ಪ್ರೇಮಿಗಳ ದಿನಗಳ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುತ್ತಿರುವ ಬೆಳವಣಿಗೆ ಬೆಳಕಿಗೆ ಬಂದಿದೆ.

- Advertisement -
- Advertisement -

ಪ್ರೇಮಿಗಳ ದಿನಗಳ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುತ್ತಿರುವ ಬೆಳವಣಿಗೆ ಬೆಳಕಿಗೆ ಬಂದಿದೆ. ಈ ಕುರಿತು ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದ್ದು, ವಾಟ್ಸ್‌ಆಪ್‌ನಲ್ಲಿ ಬರುತ್ತಿರುವ ಮೋಸದ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ಎಚ್ಚರಿಕೆ ನೀಡಿದೆ.

ಮೋಸದ ಜಾಲವನ್ನು ಹೊಂದಿರುವ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಹರಿದಾಡಿದೆ. ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಭಾಗವಾಗಿ ಉಚಿತ ಉಡುಗೊರೆಯನ್ನು ಗೆಲ್ಲುವ ಅವಕಾಶ ಎಂದು ನಕಲಿ ಲಿಂಕ್‌ ಹರಡಲಾಗಿದೆ.

ಈ ಲಿಂಕ್‌ಗಳನ್ನು ನೀವು ಪ್ರವೇಶಿಸಿದರೆ, ಇಲ್ಲಿನ ಸೂಚನೆಗಳನ್ನು ಅನುಸರಿಸಿದರೆ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಮೂರನೇ ವ್ಯಕ್ತಿ ಕದಿಯಬಹುದು ಅಥವಾ ಮಾಲ್‌ವೇರ್‌ (ವೈರಸ್‌ ಸಾಫ್ಟ್‌ವೇರ್) ನಿಮ್ಮ ಮೊಬೈಲ್ ಪ್ರವೇಶಿಸಬಹುದು ಎಂದು CyberPeace Foundation ಮತ್ತು Autobot Infosec ಸಂಸ್ಥೆಗಳು ಎಚ್ಚರಿಸಿವೆ.

“ಒಬ್ಬ ಬಳಕೆದಾರನು ಈ ಬಲೆಗೆ ಸಿಲುಕಿದರೆ, ಅದು ಮೈಕ್ರೊಫೋನ್, ಕ್ಯಾಮೆರಾ, ಪಠ್ಯ ಸಂದೇಶಗಳು, ಸಂಪರ್ಕಗಳು, ಚಿತ್ರಗಳು, ವೀಡಿಯೊಗಳು, ಬ್ಯಾಂಕಿಂಗ್ ಅಪ್ಲಿಕೇಶನ್‌ಗಳು ಇತ್ಯಾದಿಗಳಿಗೆ ಅನ್ಯರು ಪ್ರವೇಶಿಸಲು ಸಾಧ್ಯವಾಗಬಹುದು. ಜೊತೆಗೆ ಹಣಕಾಸಿನ ನಷ್ಟಗಳು ಉಂಟಾಗಬಹುದು” ಎಂದು ವರದಿ ಹೇಳಿದೆ.

PC: The Quint

ಅಮೇಜಾನ್‌ ಸಂಸ್ಥೆಯ ಪ್ರತಿಕ್ರಿಯೆಗಾಗಿ ಕಾಯುತ್ತಿರುವುದಾಗಿ ದಿ ಕ್ವಿಂಟ್‌ ತಿಳಿಸಿದೆ.

ಅಮೇಜಾನ್ ಸಂಸ್ಥೆಯಿಂದ ಪ್ರೇಮಿಗಳ ದಿನದ ಉಡುಗೊರೆ… 15,000 ಉಚಿತ ಉಡುಗೊರೆಗಳು… ಎಂದು ಆ ಲಿಂಕ್‌‌ ನಿಮ್ಮ ಗಮನ ಸೆಳೆಯುತ್ತದೆ.

ನೀವು ತಲುಪುವ ಪುಟವು ಅಮೆಜಾನ್ ಬ್ಯಾನರ್, ವಿವಿಧ ಎಲೆಕ್ಟ್ರಾನಿಕ್ಸ್‌ಗಳ ಛಾಯಾಚಿತ್ರವನ್ನು ಹೊಂದಿದೆ. ವಿಶೇಷ ಉಡುಗೊರೆಯನ್ನು ಗೆಲ್ಲಲು ಸಣ್ಣ ರಸಪ್ರಶ್ನೆಯನ್ನು ಪೂರ್ಣಗೊಳಿಸಲು ಕೇಳಲಾಗುತ್ತದೆ.

ಇದರ ಕೆಳಭಾಗದಲ್ಲಿ ನಕಲಿ ಕಾಮೆಂಟ್‌ಗಳ ವಿಭಾಗವಿದೆ. ಅಲ್ಲಿ ಬಳಕೆದಾರರು ಗಿಫ್ಟ್‌ ಕೊಡುತ್ತಿರುವುದು ನಿಜವೆಂದು ದೃಢೀಕರಿಸುತ್ತಾರೆ. ಜೊತೆಗೆ ಸಕಾರಾತ್ಮಕ ಅನುಭವಗಳನ್ನು ಅಲ್ಲಿ ಹಂಚಿಕೊಳ್ಳಲಾಗಿದೆ.

ಒಮ್ಮೆ ನೀವು ಕೆಲವು ಮೂಲಭೂತ ಪ್ರಶ್ನೆಗಳಿಗೆ ಉತ್ತರಿಸಿದರೆ (ನಿಮಗೆ ಅಮೆಜಾನ್ ತಿಳಿದಿದೆಯೇ? ನಿಮ್ಮ ವಯಸ್ಸು ಎಷ್ಟು?) ಅಭಿನಂದನಾ ಸಂದೇಶ ನಿಮಗೆ ಕಾಣಿಸಿಕೊಳ್ಳುತ್ತದೆ. ಅದರ ನಂತರ ಬಳಕೆದಾರರು ಉಡುಗೊರೆಯನ್ನು ಆಯ್ಕೆ ಮಾಡಿ ಬಹುಮಾನಗಳನ್ನು ಗೆಲ್ಲಲು ಮೂರು ಅವಕಾಶಗಳನ್ನು ನೀಡಲಾಗುತ್ತದೆ.

ನೀವು “Apple iPhone 11 128GB” ಅನ್ನು ಗೆದ್ದಿರುವಿರಿ ಎಂದು ಅದು ನಿಮಗೆ ತಿಳಿಸುತ್ತದೆ ಮತ್ತು WhatsApp ನಲ್ಲಿ ಈ ಅಭಿಯಾನವನ್ನು ಹಂಚಿಕೊಳ್ಳಲು ನಿಮಗೆ ಸೂಚಿಸಲಾಗುತ್ತದೆ.

 

PC: The Quint

ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಬಳಕೆದಾರರು ವಾಟ್ಸಾಪ್ ಬಟನ್ ಅನ್ನು ಹಲವು ಬಾರಿ ಕ್ಲಿಕ್ ಮಾಡಬೇಕಾಗುತ್ತದೆ ಎಂದು ವರದಿಯು ಗಮನಿಸಿದೆ. ನಿಮ್ಮ “ನೋಂದಣಿ”ಯನ್ನು ನೀವು ಪೂರ್ಣಗೊಳಿಸಿದ ನಂತರ, ಅದು ನಿಮ್ಮನ್ನು ಬಹು ಜಾಹೀರಾತು ವೆಬ್‌ಪುಟಗಳಿಗೆ ಕರೆದೊಯ್ಯುತ್ತದೆ.

ಸಾಮಾಜಿಕ ಮಾಧ್ಯಮದ ಪ್ಲಾಟ್‌ಫಾರ್ಮ್‌ಗಳಲ್ಲಿ ಅಂತಹ ಯಾವುದೇ ಲಿಂಕ್‌ಗಳನ್ನು ಕ್ಲಿಕ್ ಮಾಡುವುದನ್ನು ತಪ್ಪಿಸಲು ಮತ್ತು ಬ್ಯಾಂಕಿಂಗ್ ಮಾಹಿತಿಯಂತಹ ಗೌಪ್ಯ ವಿವರಗಳನ್ನು ಹಂಚಿಕೊಳ್ಳುವುದನ್ನು ತಡೆಯಲು ವರದಿ ಎಚ್ಚರಿಸಿದೆ. ಜನರು ಲಿಂಕ್‌ಗಳನ್ನು ಮೊದಲು ಪರಿಶೀಲಿಸದೆ ಹಂಚಿಕೊಳ್ಳಬೇಡಿ ಎಂದೂ ತಿಳಿಸಿದೆ.


ಇದನ್ನೂ ಓದಿರಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...