Homeಕರ್ನಾಟಕ'19 ಜನ ಶಾಸಕರ ಭವಿಷ್ಯ ಬೇಕೋ; ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ..'; ಜೆಡಿಎಸ್‌ ವರಿಷ್ಠರಿಗೆ ಸಮೃದ್ಧಿ ಮಂಜುನಾಥ್...

’19 ಜನ ಶಾಸಕರ ಭವಿಷ್ಯ ಬೇಕೋ; ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ..’; ಜೆಡಿಎಸ್‌ ವರಿಷ್ಠರಿಗೆ ಸಮೃದ್ಧಿ ಮಂಜುನಾಥ್ ಎಚ್ಚರಿಕೆ

'ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ, ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಅನಿಸುವಂತ ಸ್ಥಿತಿಗೆ ತಲುಪಿದೆ'

- Advertisement -
- Advertisement -

ಹಾಸನ ಜೆಡಿಎಸ್ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಮತ್ತೋರ್ವ ‘ದಳ’ ಶಾಸಕ ಬಹಿರಂಗವಾಗಿ ಆಗ್ರಹಿಸಿದ್ದಾರೆ. “19 ಜನ ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ಪ್ರಜ್ವಲ್ ರೆವಣ್ಣ ಮುಖ್ಯವೋ ತೀರ್ಮಾನಿಸಬೇಕಿದೆ, 24ಗಂಟೆಗಳಲ್ಲಿ ಆರೋಪ ಹೊತ್ತಿರುವ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು’ ಎಂದು ಮುಳಬಾಗಿಲು ಎಂಎಲ್‌ಎ ಸಮೃದ್ಧಿ ಮಣಜುನಾಥ್ ಪಕ್ಷದ ವರಿಷ್ಠರಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, “ಇತ್ತಿಚಿನ ದಿನಗಳಲ್ಲಿ ‘ಹಾಸನದ ಲೀಲೆಗಳು’ ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ, ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಅನಿಸುವಂತ ಸ್ಥಿತಿಗೆ ತಲುಪಿದೆ. ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿಗೆ ಶಾಸಕನಾಗಿರುವ ನನಗೆ ಈ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿದ್ದರೆ, ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿಯಾದರೇನು ಯೋಚಿಸಿ” ಎಂದು ಅವರು ಬೇಸರ ಹೊರಹಾಕಿದ್ದಾರೆ.

“ಮಾನ್ಯ ವರಿಷ್ಠರು, ರಾಷ್ಟ್ರಾಧ್ಯಕ್ಷರು ಎಚ್.ಡಿ.ದೇವೇಗೌಡ ಅಪ್ಪಾಜಿ ರವರು, ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಣ್ಣರವರು ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಾದ ಸಮಯವಿದಾಗಿದೆ. ವಿನಂತಿಸಿಕೊಳ್ಳುವುದೇನೆಂದರೆ, 19 ಜನ ಶಾಸಕರ ಭವಿಷ್ಯ ಬೇಕೋ; ತಮ್ಮ ಕುಟುಂಬದ ಪ್ರಜ್ವಲ್ ರೇವಣ್ಣರವರು ಮುಖ್ಯವೋ ತೀರ್ಮಾನಿಸಬೇಕಿದೆ. 24ಗಂಟೆಗಳಲ್ಲಿ ಆರೋಪ ಹೊತ್ತಿರುವ ರೇವಣ್ಣ ಮತ್ತು ಪ್ರಜ್ವಲ್ ರವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ, ಪಕ್ಷದ ಸಿದ್ಧಾಂತಗಳನ್ನು ಉಳಿಸಿ, ಕಾರ್ಯಕರ್ತರನ್ನು ನಮ್ಮನ್ನು ಮುಜುಗರದಿಂದ ಪಾರು ಮಾಡಲು ಕೋರುತ್ತೇನೆ” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ; ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ವಿಡಿಯೋ ಬಗ್ಗೆ ಮೊದಲೇ ಗೊತ್ತಿದ್ದೂ ಸುಮ್ಮನಿದ್ರಾ ಮೈತ್ರಿ ನಾಯಕರು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

0
ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ...