Homeಕರ್ನಾಟಕಯಡಿಯೂರಪ್ಪರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿಯೇ : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಯಡಿಯೂರಪ್ಪರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿಯೇ : ಸಿಎಂ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿಯೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

1992ರ ಗಲಭೆ ಆರೋಪಿ ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಸಿದ್ದರಾಮಯ್ಯ ಈ ರೀತಿ ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ, ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದೂ ವಿರೋಧಿಯೇ? ಬಿಜೆಪಿ ಬಿಟ್ಟು ಬಿಡಿ, ಅದರ ಪರಿವಾರದ ನಾಯಕರು ಕೂಡಾ ಹಿಂದೂ ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದು ವಿರೋಧಿ ಎಂದು ಕೂಗಾಡಲಿಲ್ಲವಲ್ಲ? ಈಗ ಯಾಕೆ ಈ ಕೂಗಾಟ? ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ಪ್ರಶ್ನಿಸಿದ್ದಾರೆ.

ಸುಮಾರು ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು ಹುಟ್ಟಿಸಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ. ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಅಪರಾಧ ಮತ್ತು ಅಪರಾಧಿಗಳಿಗೆ ಜಾತಿ-ಧರ್ಮದ ಬಣ್ಣಹಚ್ಚುವ ಬಿಜೆಪಿಯ ಕಾನೂನು ವಿರೋಧಿ ನಡವಳಿಕೆಗಳೇ ಕಾರಣ. ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧಗಳನ್ನು ಬೇಕಾದರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ. ಇದು ಧರ್ಮದ್ರೋಹದ ನಡೆ. ಕಾನೂನನ್ನು ಅದರ ಪಾಡಿಗೆ ಕೆಲಸ ಮಾಡಲು ಬಿಟ್ಟು ಬಿಡಿ ಎಂದಿದ್ದಾರೆ.

ಗಲಭೆ ಆರೋಪಿಯ ಬಂಧನ 

ಮೂರು ದಶಕಗಳ ಹಿಂದಿನ ಬಾಬರಿ ಮಸೀದಿ ಧ್ವಂಸ, ರಾಮಜನ್ಮ ಭೂಮಿ ಗಲಾಟೆ ವೇಳೆ ಹುಬ್ಬಳ್ಳಿಯಲ್ಲಿ ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಶ್ರೀಕಾಂತ್ ಎಂಬಾತನನ್ನು ಹುಬ್ಬಳ್ಳಿ ಪೊಲೀಸರು ಸೋಮವಾರ ಬಂಧಿಸಿದ್ದು, ಹಳೆ ಪ್ರಕರಣ ಮರುಜೀವ ಪಡೆದುಕೊಂಡಿದೆ.

ಡಿ.5, 1992ರಂದು ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದ್ದ ಗಲಭೆಯ ಸಂದರ್ಭ ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 8 ಜನರ ವಿರುದ್ಧ ಹುಬ್ಬಳ್ಳಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಿಜೆಪಿಯಿಂದ ಪ್ರತಿಭಟನೆ: 

ಗಲಭೆ ಆರೋಪಿ ಶ್ರೀಕಾಂತ್ ಪೂಜಾರ ಬಂಧನ ಖಂಡಿಸಿ ಇಂದು(ಡಿ.3) ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆಕೊಟ್ಟಿದೆ. ಹುಬ್ಬಳ್ಳಿಯ ಶಹರ ಪೊಲೀಸ್‌ ಠಾಣೆ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬೆಂಕಿ ಹಚ್ಚುವ ಅಂಬಾಸಿಡರ್. ಅವರಿಗೆ ರಾಮ ಮಂದಿರ ನಿರ್ಮಣವಾಗುತ್ತಿರುವುದು ಇಷ್ಟವಿಲ್ಲ. ಈ ಕಾರಣಕ್ಕೆ ಹಳೆಯ ಪ್ರಕರಣದ ಆರೋಪಿಯನ್ನು ಬಂಧಿಸಿ, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರನ್ನು ಭಯಪಡಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಕರಸೇವಕನ ಬಂಧನಕ್ಕೆ ಬಿಜೆಪಿ ವಿರೋಧ; ನ್ಯಾಯಾಲಯದ ಸೂಚನೆಯಂತೆ ಕ್ರಮ ಎಂದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...