Homeಕರ್ನಾಟಕಕೊರಗರ ಮೇಲೆಯೆ ಪ್ರಕರಣ: ಬಿಜೆಪಿಯ ಗುಪ್ತ ಅಜೆಂಡವೇ ಎಂದ ಸಿದ್ದರಾಮಯ್ಯ

ಕೊರಗರ ಮೇಲೆಯೆ ಪ್ರಕರಣ: ಬಿಜೆಪಿಯ ಗುಪ್ತ ಅಜೆಂಡವೇ ಎಂದ ಸಿದ್ದರಾಮಯ್ಯ

ಹಿಂದುಗಳ ರಕ್ಷಣೆಗಾಗಿಯೇ ಅವತಾರವೆತ್ತಿಂತೆ ಬೊಬ್ಬಿಡುತ್ತಿರುವ ಸಚಿವೆ ಶೋಭಾ ಕರಂದ್ಲಾಜೆಯ ಮೌನ ಪೊಲೀಸ್‌ ದೌರ್ಜನ್ಯಕ್ಕೆ ಸಮ್ಮತಿ ಎಂದು ಅರ್ಥೈಸೋಣವೇ? ಎಂದು ಅವರು ಪ್ರಶ್ನಿಸಿದ್ದಾರೆ

- Advertisement -
- Advertisement -

ಕುಂದಾಪುರದ ಕೋಟ ತಟ್ಟುವಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೆ ಪ್ರಕರಣ ದಾಖಲು ಮಾಡಿರುವುದು ನೋಡಿದರೆ, ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, “ಕೊರಗ ಸಮುದಾಯದ ಮೇಲೆ ಕೋಟ ಪೊಲೀಸರು ಪ್ರಕರಣ ದಾಖಲಿಸಿರುವುದು, ಅಮಾನವೀಯವಾದುದು ಮಾತ್ರವಲ್ಲ, ಅತ್ಯಂತ ನಾಚಿಕೆಗೇಡಿನ ಸಂಗತಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಂಗಳೂರು: ಆದಿವಾಸಿ ಕೊರಗ ಜನಾಂಗದ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

“ಈ ಪ್ರಕರಣವನ್ನು ತಕ್ಷಣ ವಾಪಸು ಪಡೆಯಲು ಮುಖ್ಯಮಂತ್ರಿಗಳು ಸೂಚನೆ ನೀಡಿ, ಕಾರಣಕರ್ತ ಪೊಲೀಸರ ವಿರುದ್ದ ಕ್ರಮಕೈಗೊಳ್ಳಬೇಕು. ಹಿಂದುಗಳೆಲ್ಲ ಒಂದು ಎಂದು ಉದ್ಘೋಷಿಸುತ್ತಿರುವ ಬಿಜೆಪಿ ಬ್ರಾಂಡಿನ ಹಿಂದೂ ಧರ್ಮದಲ್ಲಿ ಕೊರಗ ಸಮುದಾಯ ಸೇರಿಲ್ಲವೇ? ದಲಿತರನ್ನು ಅಸ್ಪರ್ಶರನ್ನಾಗಿಯೇ ಉಳಿಸುವುದು ಇವರ ಗುಪ್ತ ಅಜೆಂಡಾವೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ಹಿಂದುಗಳ ರಕ್ಷಣೆಗಾಗಿಯೇ ಅವತಾರವೆತ್ತಿ ಬಂದವರಂತೆ ಬೊಬ್ಬಿಡುತ್ತಿರುವ, ಸ್ಥಳೀಯ ಲೋಕಸಭಾ ಸದಸ್ಯರೂ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮೌನವನ್ನು ಕೊರಗರ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಮೌನಸಮ್ಮತಿ ಎಂದು ಅರ್ಥೈಸೋಣವೇ?” ಎಂದು ಸಿದ್ದರಾಮಯ್ಯ ಅವರು ಕೇಳಿದ್ದಾರೆ.

ಇದನ್ನೂ ಓದಿ:ಕೊರಗರದ್ದು ಇನ್ನೊಂದು ‘ಜೈ ಭೀಮ್‌’ ಕಥೆ ಆಗದಿರಲಿ: ಎಚ್‌.ಸಿ.ಮಹದೇವಪ್ಪ

“ದೌರ್ಜನ್ಯಕ್ಕೀಡಾದ ಕೊರಗರ ಪರ ಕಂಬನಿ ಮಿಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಗಮನಕ್ಕೆ ಬರದೆ, ಪೊಲೀಸರು ಕೊರಗ ಬಂಧುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆಯೇ? ಹಾಗೆ ನಡೆದಿದ್ದರೆ ಅವರೊಬ್ಬ ಅಸಮರ್ಥ ಸಚಿವ, ಗಮನಕ್ಕೆ ಬಂದು ನಡೆದಿದ್ದರೆ ಅದು ಆತ್ಮವಂಚಕ ನಡವಳಿಕೆ” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಎಸ್ ಸಿಪಿ/ಟಿಎಸ್ ಪಿ ಕಾಯ್ದೆ ಸೇರಿದಂತೆ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳಿಗೆ ಹಣ ಮಂಜೂರು ಮಾಡದೆ ಆರ್ಥಿಕವಾಗಿ ದಲಿತರನ್ನು ಸಾಯಿಸುತ್ತಿರುವ ಬಿಜೆಪಿ ಸರ್ಕಾರ, ಈಗ ಪೊಲೀಸರಿಂದಲೂ ದೌರ್ಜನ್ಯ ನಡೆಸಲು ಹೊರಟಂತಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ:ಉಡುಪಿ: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ಎಸಗಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...