ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರವನ್ನು ಬಿಜೆಪಿ ಸರ್ಕಾರ ಪೊಲೀಸ್ ಬಲದ ಮೂಲಕ ದಮನಿಸಲು ಹೊರಟಿರುವುದು ಖಂಡನೀಯ. ಇದು ಪ್ರಜಾಪ್ರಭುತ್ವ ವಿರೋಧಿ ಮಾತ್ರವಲ್ಲ ಅಮಾನವೀಯ ನಡೆ ಕೂಡಾ ಆಗಿದೆ ಎಂದು ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ರಾಜ್ಯದ ಬಹಳ ಕಡೆಗಳಲ್ಲಿ ಬಿಜೆಪಿ ಸರ್ಕಾರ ಮುಷ್ಕರ ನಿರತ ಕೆಎಸ್‌ಆರ್‌ಟಿಸಿ ನೌಕರರನ್ನು ವಾರಂಟ್ ಇಲ್ಲದೆ ಬಂಧಿಸುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರ್ನಾಟಕವನ್ನು ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆಯೇ?” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ನಾಳೆಯು ಸಾರಿಗೆ ಮುಷ್ಕರ ಮುಂದುವರಿಕೆ – ಯುಗಾದಿಗೆ ನೌಕರರಿಂದ ಭಿಕ್ಷಾಟನೆ ಪ್ರತಿಭಟನೆ!
ರಾಜ್ಯದ ಬಹಳ ಕಡೆಗಳಲ್ಲಿ @BJP4Karnataka ಸರ್ಕಾರ ಮುಷ್ಕರ ನಿರತ ಕೆಎಸ್‌ಆರ್‌ಟಿಸಿ ನೌಕರರನ್ನು ವಾರಂಟ್ ಇಲ್ಲದೆ ಬಂಧಿಸುತ್ತಿದೆ.@CMofKarnataka ಕರ್ನಾಟಕವನ್ನು ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆಯೇ?#ಕೆಎಸ್ಆರ್ಟಿಸಿಮುಷ್ಕರ
2/4— Siddaramaiah (@siddaramaiah) April 12, 2021
‘‘ಅಕ್ರಮವಾಗಿ ವರ್ಗಾವಣೆ, ಅಮಾನತು ಮತ್ತು ಮನೆ ಖಾಲಿಮಾಡಿಸುವ ಮೂಲಕ ಮುಷ್ಕರ ನಿರತ ಕೆಎಸ್‌ಆರ್‌ಟಿಸಿ ನೌಕರರನ್ನು ಮುಖ್ಯಮಂತ್ರಿಗಳು ಬೆದರಿಸಲು ಹೊರಟಿದ್ದಾರೆ. ಈಗಲೂ ಕಾಲ ಮಿಂಚಿಲ್ಲ, ಮುಖ್ಯಮಂತ್ರಿಗಳು ಹಠಕ್ಕೆ ಬೀಳದೆ ತಕ್ಷಣ ಮುಷ್ಕರ ನಿರತ ಕೆಎಸ್‌ಆರ್‌ಟಿಸಿ ನೌಕರರನ್ನು ಮಾತುಕತೆಗೆ ಕರೆದು ಈಗಿನ ಬಿಕ್ಕಟ್ಟನ್ನು ಪರಿಹರಿಸಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ರಫೇಲ್ ಹಗರಣ ಕುರಿತು PIL: ಮತ್ತೆ ವಿಚಾರಣೆಗೆ ಮುಂದಾದ ಸುಪ್ರೀಂ


