Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

- Advertisement -
- Advertisement -

ಅಕ್ಟೋಬರ್‌ 24ರಂದು ಪಾಕಿಸ್ತಾನ ಟಿ-20 ವರ್ಡ್‌ಕಪ್‌ನಲ್ಲಿ ಭಾರತವನ್ನು 10 ವಿಕೆಟ್‌‌ಗಳಿಂದ ಮಣಿಸಿತು. ಶ್ರೀನಗರದ ಮೆಡಿಕಲ್‌ ವಿದ್ಯಾರ್ಥಿಗಳು ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದರು.

ವೈದ್ಯಕೀಯ ಕಾಲೇಜಿನ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಪದವಿಯನ್ನು ಕಾಲೇಜು ರದ್ದುಗೊಳಿಸಿದೆ ಎಂದು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪ್ರತಿಪಾದಿಸಿದ್ದಾರೆ. ಪೂಜಾ ಹಿಂದು ಸನಾತನಿ ಬೇಟಿ ಎಂಬ  ಟ್ವಿಟರ್‌ ಬಳಕೆದಾರರು, ಬುರ್ಕಾಧಾರಿ ಹೆಣ್ಣುಮಕ್ಕಳ ಫೋಟೋವನ್ನು ಇದೇ ಒಕ್ಕಣೆಯೊಂದಿಗೆ ಹಂಚಿಕೊಂಡಿದ್ದಾರೆ. ಆಲ್ಟ್‌ ನ್ಯೂಸ್ ಫ್ಯಾಕ್ಟ್‌ ಚೆಕ್‌ ಮಾಡುವವರೆಗೆ ಈ ಫೋಟೋ 1740ಕ್ಕೂ ಹೆಚ್ಚು ಬಾರಿ ರೀ ಟ್ವೀಟ್ ಆಗಿತ್ತು. (ಟ್ವೀಟ್‌ನ ಅರ್ಕ್ವೈವ್‌ ಲಿಂಕ್‌ ಕ್ಲಿಕ್‌ ಮಾಡಿ)

ಸಂಭ್ರಮಾಚರಣೆಯ ಸುದ್ದಿಯನ್ನು ‘ನ್ಯೂಸ್ 18’ ಮಾಧ್ಯಮವು ವಿಡಿಯೊ ಬಿತ್ತರಿಸಿದ್ದು, ವಿದ್ಯಾರ್ಥಿಗಳ ಪದವಿಯನ್ನು ರದ್ದು ಮಾಡಿರುವ ಯಾವುದೇ ಮಾಹಿತಿಯನ್ನು ನ್ಯೂಸ್‌ 18 ಉಲ್ಲೇಖಿಸಿಲ್ಲ. ಕಾರ್ಯಕ್ರಮದ ಸಮಯದಲ್ಲಿ ಕಂಡುಬರುವ ಕೆಲವು ಸುದ್ದಿ ಟಿಕ್ಕರ್‌ಗಳೆಂದರೆ – “ಪಾಕಿಸ್ತಾನದ ವಿಜಯವನ್ನು ಆಚರಿಸುತ್ತಿರುವ ಹುಡುಗಿಯರು”, “ಭಾರತದ ಸೋಲನ್ನು ಆಚರಿಸುತ್ತಿರುವ ಬಾಲಕಿಯರ ಹಾಸ್ಟೆಲ್” ಮತ್ತು “ಪಾಕಿಸ್ತಾನ ಪರ ಘೋಷಣೆಗಳು” ಎಂಬುವಾಗಿವೆ. ಇದಲ್ಲದೆ, “ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದವರ ಮೇಲೆ ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿದೆ” ಎಂದು ನಿರೂಪಕ ಹೇಳುತ್ತಾರೆ.

ಆದರೆ ಪದವಿ ರದ್ದು ಮಾಡಲಾಗಿದೆ ಎಂಬ ಪ್ರತಿಪಾದನೆಯೊಂದಿಗೆ ಟ್ವಿಟರ್‌, ಫೇಸ್‌ಬುಕ್‌, ವಾಟ್ಸ್‌ಆಪ್‌ನಲ್ಲಿ ಸಾಕಷ್ಟು ಮಂದಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೇ?

ಈ ಕುರಿತು ಫ್ಯಾಕ್ಟ್‌ಚೆಕ್‌ ಮಾಡಿರುವ ಆಲ್ಟ್‌ನ್ಯೂಸ್‌, “ಈ ಪ್ರತಿಪಾದನೆಯನ್ನು ದೃಢೀಕರಿಸುವ ಯಾವುದೇ ಸುದ್ದಿ ಲಭ್ಯವಾಗಿಲ್ಲ” ಎಂದಿದೆ.

“ಕೋರ್ಸ್ ಮುಗಿದ ನಂತರ ಪದವಿಗಳನ್ನು ನೀಡಲಾಗುತ್ತದೆ ಎಂಬುದನ್ನು ಗಮನಿಸಬೇಕು. ಪಾಕಿಸ್ತಾನದ ಗೆಲುವನ್ನು ವಿದ್ಯಾರ್ಥಿಗಳು ಸಂಭ್ರಮಿಸಿದರು ಎಂದು ಇಲ್ಲಿನ ಪ್ರತಿಪಾದನೆ ಹೇಳುತ್ತದೆ. ಅವರು ಇನ್ನೂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಪದವಿಯನ್ನು ರದ್ದು ಮಾಡಲು ಹೇಗೆ ಸಾಧ್ಯ?” ಎಂದು ಆಲ್ಟ್‌ ನ್ಯೂಸ್ ಪ್ರಶ್ನಿಸಿದೆ.

ಟಿ-20 ಪಂದ್ಯದ ನಂತರ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಶ್ರೀನಗರದ ಎರಡು ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳ ವಿರುದ್ಧ ಯುಎಪಿಎ ಪ್ರಕರಣ ದಾಖಲಾಗಿದೆ. ಜತೆಗೆ ಕಾಲೇಜು ಆಡಳಿತದ ಮೇಲೂ ಈ ಕಾನೂನಿನಡಿ ಆರೋಪ ಹೊರಿಸಲಾಗಿತ್ತು.

“ಜಮ್ಮು ಮತ್ತು ಕಾಶ್ಮೀರ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಶ್ರೀನಗರದ ಕರ್ಣನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಶೇರ್-ಎ-ಕಾಶ್ಮೀರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (SKIMS) ಸೌರಾದ ಹಾಸ್ಟೆಲ್‌ಗಳಲ್ಲಿ ಇರುವ ವಿದ್ಯಾರ್ಥಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಕಾಲೇಜು ಆಡಳಿತ ಮತ್ತು ಹಾಸ್ಟೆಲ್ ವಾರ್ಡನ್‌ಗಳನ್ನು ಪ್ರಕರಣದಲ್ಲಿ ಒಳಗೊಳ್ಳಲಾಗಿದೆ” ಎಂದು ಜನ್‌‌ಸತ್ತಾ ವರದಿ ಹೇಳುತ್ತದೆ.

ವೈರಲ್‌ ಫೋಟೋದ ಅಸಲಿ ಕಥೆ ಏನು?

ಬುರ್ಕಾ ಧರಿಸಿರುವ ಫೋಟೋದ ಅಸಲಿಯತ್ತನ್ನು ಆಲ್ಟ್‌ ನ್ಯೂಸ್ ಪತ್ತೆ ಹಚ್ಚಿದೆ. “ರಿವರ್ಸ್ ಇಮೇಜ್ ಹುಡುಕಾಟವನ್ನು ಆಲ್ಟ್‌ ನ್ಯೂಸ್‌ ನಡೆಸಿತು. 2017ರ ಬ್ಲಾಗ್ ಪೋಸ್ಟ್‌ನಲ್ಲಿ ಮೂಲ ಫೋಟೋವನ್ನು ಕಂಡೆವು. India New England News  (ಇಂಡಿಯಾ ನ್ಯೂ ಇಂಗ್ಲೆಂಡ್ ನ್ಯೂಸ್) ಹೆಸರಿನ ವೆಬ್‌ಸೈಟ್‌ನಲ್ಲಿ ನವೆಂಬರ್ 12, 2017ರಂದು ಈ ಫೋಟೋ ಪ್ರಕಟವಾಗಿದೆ. ಮತ್ತೊಂದು ಪೋರ್ಟಲ್‌ನಲ್ಲಿ 2017ರ ನವೆಂಬರ್‌‌ನಲ್ಲಿ ಇದೇ ಫೋಟೋವನ್ನು ಪ್ರಕಟಿಸಿದ್ದು, ಉತ್ತರಪ್ರದೇಶದ ವಿದ್ಯಾರ್ಥಿನಿಯರೆಂದು ಕ್ಯಾಪ್ಶನ್‌ ತಿಳಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, “ಟಿ-20 ಪಂದ್ಯದಲ್ಲಿ ಪಾಕಿಸ್ತಾನದ ವಿಜಯವನ್ನು ಸಂಭ್ರಮಿಸುತ್ತಿರುವ ಕಾಶ್ಮೀರಿ ವೈದ್ಯಕೀಯ ಕಾಲೇಜಿನ 100 ವಿದ್ಯಾರ್ಥಿನಿಯರ ಪದವಿಗಳನ್ನು ರದ್ದುಗೊಳಿಸಲಾಗಿದೆ” ಎಂದು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ತಪ್ಪಾಗಿ ಪ್ರತಿಪಾದಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ ಚೆಕ್‌: ಇಟಲಿಯಲ್ಲಿ ವಿಶ್ವನಾಯಕರನ್ನು ಭೇಟಿ ಮಾಡಲು ಮೋದಿ ಟ್ಯಾಕ್ಸಿಯಲ್ಲಿ ತೆರಳಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...