Homeಮುಖಪುಟಇದು ಪ್ರಜಾಪ್ರಭುತ್ವವೇ?: ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಪ್ರಶ್ನೆ

ಇದು ಪ್ರಜಾಪ್ರಭುತ್ವವೇ?: ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಅಧಿಕಾರವನ್ನು ಗೊಂದಲಗೊಳಿಸುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದೆ ಎಂದು ಮಧ್ಯಪ್ರದೇಶ ಸರ್ಕಾರದ ಬಿಕ್ಕಟ್ಟಿನ ಬಗ್ಗೆ ಕಾಂಗ್ರೆಸ್ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದೆ. ಆಡಳಿತ ಪಕ್ಷ ಕಾಂಗ್ರೆಸ್ ಪರವಾಗಿ ಹಾಜರಾದ ಹಿರಿಯ ವಕೀಲ ದುಶ್ಯಂತ್ ದವೆ, ಬಿಜೆಪಿ ಕಾಂಗ್ರೆಸ್ ಶಾಸಕರನ್ನು ಅಪಹರಿಸಿ ಸರ್ಕಾರವನ್ನು ಅಸ್ಥಿರಗೊಳಿಸುವ “ಪಿತೂರಿ” ನಡೆಸುತ್ತಿದೆ ಎಂದು ಆರೋಪಿಸಿದರು.

ವಿಚಾರಣೆಯಲ್ಲಿ ಕಾಂಗ್ರೆಸ್ ಮಧ್ಯಪ್ರದೇಶ ಆರು ಶಾಸಕರ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಉಪಚುನಾವಣೆ ಪೂರ್ಣಗೊಳ್ಳುವವರೆಗೆ ಬಿಜೆಪಿ ಕರೆದಿರುವ ವಿಶ್ವಾಸ ಮತ ಯಾಚನೆಯನ್ನು ಮುಂದೂಡಲು ಕೋರಿತು. ರಾಜ್ಯಪಾಲ ಲಾಲ್ ಜಿ ಟಂಡನ್ ಅವರ ಅಸಂವಿಧಾನಿಕ ವಿಶ್ವಾಸ ಮತ ಯಾಚನೆ ಮತ್ತು ಮಧ್ಯರಾತ್ರಿಯ ಸಂದೇಶಗಳ ಬಗ್ಗೆ ಟೀಕಿಸುತ್ತಾ “ಇದು ಪ್ರಜಾಪ್ರಭುತ್ವವೇ? ಶಾಸಕರನ್ನು ಅಪಹರಿಸಿ ಎಲ್ಲಿ ಇಡಲಾಗಿದೆ?” ಎಂದು ದುಶ್ಯಂತ್ ದವೆ ಕೇಳಿದರು.

ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ಪರ ಹಿರಿಯ ವಕೀಲ ಮುಕುಲ್ ರೋಹಟ್ಗಿ “ಕಾಂಗ್ರೆಸಿಗೆ ಗೆಲ್ಲುವ ಭರವಸೆ ಇಲ್ಲ”. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಸಾಮೂಹಿಕ ಹತ್ಯೆಗೆ ಕಾರಣವಾದ ಕಾಂಗ್ರೆಸಿಗೆ ಅಧಿಕಾರದಲ್ಲಿ ಉಳಿಯಲು ಯಾವುದೇ ಕಾನೂನುಬದ್ಧ ಹಕ್ಕಿಲ್ಲ” ಎಂದಿದ್ದಾರೆ.

ಬಿಜೆಪಿ ತನ್ನ ಶಾಸಕರನ್ನು ಅಪಹರಿಸಿ ರಾಜೀನಾಮೆ ನೀಡುವಂತೆ ಒತ್ತಾಯಿಸಿ, ಆ ಮೂಲಕ ಪಕ್ಷವನ್ನು ವಿಧಾನಸಭೆಯಲ್ಲಿ ಅಸ್ಥಿರಗೊಳಿಸಿ ಅಧಿಕಾರದ ಪಡೆಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು.

ಪಕ್ಷವು ತನ್ನ ಅರ್ಜಿಯಲ್ಲಿ ಬೆಂಗಳೂರಿನಲ್ಲಿ ಸೆರೆಯಾಳಾಗಿರುವ ಶಾಸಕರಿಗೆ ಸಹಾಯ ಮಾಡುವಂತೆ ನ್ಯಾಯಾಲಯವನ್ನು ಕೇಳಿದೆ. ಇಡೀ ಅಸೆಂಬ್ಲಿ ಇಲ್ಲದೆ ಅಧಿವೇಶನದಲ್ಲಿ ವಿಶ್ವಾಸ ಮತ ಯಾಚನೆಯನ್ನು ನಡೆಸಲು ಸಾಧ್ಯವಿಲ್ಲ ಎಂದು ಸೂಚಿಸಿದರು. “ಕಾಂಗ್ರೆಸ್-ಮುಕ್ತ ಭಾರತ” ಎಂದು ಪ್ರಧಾನಿ ನರೇಂದ್ರ ಮೋದಿಯವರು ಪದೇ ಪದೇ ಹೇಳುವ ಮಾತನ್ನು ದುಶ್ಯಂತ್ ದವೆ ಉಲ್ಲೇಖಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ಇಪ್ಪತ್ತೆರಡು ಶಾಸಕರು ರಾಜೀನಾಮೆ ಪತ್ರಗಳನ್ನು ಸಲ್ಲಿಸಿದ್ದರು. ರಾಜೀನಾಮೆಗಳಲ್ಲಿ ಆರನ್ನು ಮಾತ್ರ ಸ್ಪೀಕರ್ ಅಂಗೀಕರಿಸಿದ್ದು ಉಳಿದವನ್ನು ಅಂಗೀಕರಿಸಿಲ್ಲ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ :...

0
ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನ ಸಮಾವೇಶದಲ್ಲಿ...