ಎಲ್ಲಾ ಧಾರ್ಮಿಕ ಕಾರ್ಯಗಳು ಮತ್ತು ಸಂಸ್ಥೆಗಳ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಜಗ್ಗಿ ವಾಸುದೇವ್ ಸ್ಥಾಪಿಸಿದ ಲಾಭೋದ್ದೇಶವಿಲ್ಲದ ಆಧ್ಯಾತ್ಮಿಕ ಸಂಸ್ಥೆ ಇಶಾ ಫೌಂಡೇಶನ್ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ವಕೀಲ ವರುಣ್ ಠಾಕೂರ್ ಮೂಲಕ ಒಬಿಸಿ ಮಹಾಸಭಾ ಮತ್ತು ಇತರರು ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.
ಕೊಯಮತ್ತೂರಿನ ನಿವೃತ್ತ ಪ್ರೊಫೆಸರ್ ಎಸ್ ಕಾಮರಾಜ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ ಜಗ್ಗಿ ವಾಸುದೇವ್ ಮತ್ತು ಅವರ ಫೌಂಡೇಶನ್ ತನ್ನ ಇಬ್ಬರು ಸುಶಿಕ್ಷಿತ ಹೆಣ್ಣುಮಕ್ಕಳ ಬ್ರೈನ್ ವಾಶ್ ಮಾಡುತ್ತಿದೆ ಎಂದು ಆರೋಪಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಪ್ರಸ್ತುತ ಅರ್ಜಿಯಲ್ಲಿ ಅರ್ಜಿದಾರರು ಇಶಾ ಫೌಂಡೇಶನ್ ಅನ್ನು “ಪ್ರಸಿದ್ಧ ಸಂಸ್ಥೆ” ಎಂದು ಕರೆದಿದ್ದು, ಈ ಸಂಸ್ಥೆಯು ನಿಯಮಿತವಾಗಿ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ ಆದರೆ ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯಿದೆ, 2013 ಅನ್ನು ಅನುಸರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಇಶಾ ಫೌಂಡೇಶನ್ ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯಿದೆ, 2013 ಅನ್ನು ಜಾರಿಗೊಳಿಸುವಂತೆ ನಿರ್ದೇಶಿಸಲು ಕೋರಿ ನಾವು ಕೋರುತ್ತೇವೆ ಎಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ. ಅಷ್ಟೆ ಅಲ್ಲದೆ, “ಎಲ್ಲಾ ಧಾರ್ಮಿಕ (ಜೈನ/ಹಿಂದೂ/ಮುಸ್ಲಿಂ/ಸಿಖ್/ಕ್ರಿಶ್ಚಿಯನ್/ಬೌದ್ಧ ಇತ್ಯಾದಿ) ಮತ್ತು ಸಂಸ್ಥೆಗಳು/ಕಾರ್ಯಗಳಲ್ಲಿ” ಈ ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೂಡಾ ಅರ್ಜಿಯು ನ್ಯಾಯಾಲಯಕ್ಕೆ ಮನವಿ ಮಾಡಿದೆ.
2013 ರ ಕಾಯಿದೆಯ ಕೆಲವು ಅಧ್ಯಾಯಗಳ ಪ್ರಕಾರ, ಕಾನೂನಿನ ಪ್ರಚಾರವನ್ನು ಒಳಗೊಂಡಂತೆ ಕಾನೂನನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು ರಾಜ್ಯದ ಕರ್ತವ್ಯವಾಗಿದೆ ಎಂದು ಒಬಿಸಿ ಮಹಾಸಭಾ ಹೇಳಿದೆ.
“ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಇಶಾ ಫೌಂಡೇಶನ್, ‘ಇಶಾ ಫೌಂಡೇಶನ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ವಿರುದ್ಧ ಇತ್ತೀಚೆಗೆ ಪೋಕ್ಸೊ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ’ ಎಂದು ಹೇಳಿತ್ತು. ಈ ಪ್ರಕರಣದಲ್ಲಿ ಆದಿವಾಸಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 12 ಬಾಲಕಿಯರಿಗೆ ಆತ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಇಶಾ ಫೌಂಡೇಶನ್ 2013 ರ ಕಾಯಿದೆಯನ್ನು ಕೆಲಸದ ಸ್ಥಳಗಳಲ್ಲಿ ಕಡ್ಡಾಯವಾಗಿ ಜಾರಿಗೆ ತಂದಿಲ್ಲ ಮತ್ತು ಇದರಿಂದ ಕಿರುಕುಳದ ಪರಿಸ್ಥಿತಿ ಉದ್ಭವಿಸಿದೆ” ಎಂದು ಸುಪ್ರಿಂಕೋರ್ಟ್‌ಗೆ ಸಲ್ಲಿಕೆಯಾದ ಅರ್ಜಿಯಲ್ಲಿ ಆರೋಪಿಸಲಾಗಿದೆ.
ಇಶಾ ಫೌಂಡೇಶನ್ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಿರುವುದರಿಂದ, ಸಾವಿರಾರು ಪುರುಷ ಮತ್ತು ಮಹಿಳಾ ಕಾರ್ಮಿಕರು ನಿಯಮಿತವಾಗಿ ಕೆಲಸ ಮಾಡುತ್ತಿದ್ದಾರೆ. ಇಲ್ಲಿ ಭಕ್ತರು ಕೆಲವು ತಿಂಗಳುಗಳು, ವರ್ಷಗಳು ಅಥವಾ ಶಾಶ್ವತವಾಗಿ ಉಳಿಯುವ ದೊಡ್ಡ ಮೂಲಸೌಕರ್ಯಗಳು ಕೂಡಾ ಇವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಇದನ್ನೂಓದಿ: ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ
ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ


