Homeಮುಖಪುಟಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

- Advertisement -
- Advertisement -

ಎಲ್ಲಾ ಧಾರ್ಮಿಕ ಕಾರ್ಯಗಳು ಮತ್ತು ಸಂಸ್ಥೆಗಳ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಜಗ್ಗಿ ವಾಸುದೇವ್ ಸ್ಥಾಪಿಸಿದ ಲಾಭೋದ್ದೇಶವಿಲ್ಲದ ಆಧ್ಯಾತ್ಮಿಕ ಸಂಸ್ಥೆ ಇಶಾ ಫೌಂಡೇಶನ್ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ವಕೀಲ ವರುಣ್ ಠಾಕೂರ್ ಮೂಲಕ ಒಬಿಸಿ ಮಹಾಸಭಾ ಮತ್ತು ಇತರರು ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.

ಕೊಯಮತ್ತೂರಿನ ನಿವೃತ್ತ ಪ್ರೊಫೆಸರ್ ಎಸ್ ಕಾಮರಾಜ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ ಜಗ್ಗಿ ವಾಸುದೇವ್‌ ಮತ್ತು ಅವರ ಫೌಂಡೇಶನ್ ತನ್ನ ಇಬ್ಬರು ಸುಶಿಕ್ಷಿತ ಹೆಣ್ಣುಮಕ್ಕಳ ಬ್ರೈನ್ ವಾಶ್ ಮಾಡುತ್ತಿದೆ ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಸ್ತುತ ಅರ್ಜಿಯಲ್ಲಿ ಅರ್ಜಿದಾರರು ಇಶಾ ಫೌಂಡೇಶನ್ ಅನ್ನು “ಪ್ರಸಿದ್ಧ ಸಂಸ್ಥೆ” ಎಂದು ಕರೆದಿದ್ದು, ಈ ಸಂಸ್ಥೆಯು ನಿಯಮಿತವಾಗಿ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ ಆದರೆ ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯಿದೆ, 2013 ಅನ್ನು ಅನುಸರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಇಶಾ ಫೌಂಡೇಶನ್‌ ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯಿದೆ, 2013 ಅನ್ನು ಜಾರಿಗೊಳಿಸುವಂತೆ ನಿರ್ದೇಶಿಸಲು ಕೋರಿ ನಾವು  ಕೋರುತ್ತೇವೆ ಎಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ. ಅಷ್ಟೆ ಅಲ್ಲದೆ, “ಎಲ್ಲಾ ಧಾರ್ಮಿಕ (ಜೈನ/ಹಿಂದೂ/ಮುಸ್ಲಿಂ/ಸಿಖ್/ಕ್ರಿಶ್ಚಿಯನ್/ಬೌದ್ಧ ಇತ್ಯಾದಿ) ಮತ್ತು ಸಂಸ್ಥೆಗಳು/ಕಾರ್ಯಗಳಲ್ಲಿ” ಈ ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೂಡಾ ಅರ್ಜಿಯು ನ್ಯಾಯಾಲಯಕ್ಕೆ ಮನವಿ ಮಾಡಿದೆ.

2013 ರ ಕಾಯಿದೆಯ ಕೆಲವು ಅಧ್ಯಾಯಗಳ ಪ್ರಕಾರ, ಕಾನೂನಿನ ಪ್ರಚಾರವನ್ನು ಒಳಗೊಂಡಂತೆ ಕಾನೂನನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು ರಾಜ್ಯದ ಕರ್ತವ್ಯವಾಗಿದೆ ಎಂದು ಒಬಿಸಿ ಮಹಾಸಭಾ ಹೇಳಿದೆ.

“ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಇಶಾ ಫೌಂಡೇಶನ್, ‘ಇಶಾ ಫೌಂಡೇಶನ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ವಿರುದ್ಧ ಇತ್ತೀಚೆಗೆ ಪೋಕ್ಸೊ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ’ ಎಂದು ಹೇಳಿತ್ತು. ಈ ಪ್ರಕರಣದಲ್ಲಿ ಆದಿವಾಸಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 12 ಬಾಲಕಿಯರಿಗೆ ಆತ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಇಶಾ ಫೌಂಡೇಶನ್ 2013 ರ ಕಾಯಿದೆಯನ್ನು ಕೆಲಸದ ಸ್ಥಳಗಳಲ್ಲಿ ಕಡ್ಡಾಯವಾಗಿ ಜಾರಿಗೆ ತಂದಿಲ್ಲ ಮತ್ತು ಇದರಿಂದ ಕಿರುಕುಳದ ಪರಿಸ್ಥಿತಿ ಉದ್ಭವಿಸಿದೆ” ಎಂದು ಸುಪ್ರಿಂಕೋರ್ಟ್‌ಗೆ ಸಲ್ಲಿಕೆಯಾದ ಅರ್ಜಿಯಲ್ಲಿ ಆರೋಪಿಸಲಾಗಿದೆ.

ಇಶಾ ಫೌಂಡೇಶನ್ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಿರುವುದರಿಂದ, ಸಾವಿರಾರು ಪುರುಷ ಮತ್ತು ಮಹಿಳಾ ಕಾರ್ಮಿಕರು ನಿಯಮಿತವಾಗಿ ಕೆಲಸ ಮಾಡುತ್ತಿದ್ದಾರೆ. ಇಲ್ಲಿ ಭಕ್ತರು ಕೆಲವು ತಿಂಗಳುಗಳು, ವರ್ಷಗಳು ಅಥವಾ ಶಾಶ್ವತವಾಗಿ ಉಳಿಯುವ ದೊಡ್ಡ ಮೂಲಸೌಕರ್ಯಗಳು ಕೂಡಾ ಇವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇದನ್ನೂಓದಿ: ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ

ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...