Homeಮುಖಪುಟವೇಗದ ದ್ವಿಶತಕ ಸಿಡಿಸಿ ವಿಶ್ವದಾಖಲೆ ಬರೆದ ಇಶಾನ್ ಕಿಶನ್

ವೇಗದ ದ್ವಿಶತಕ ಸಿಡಿಸಿ ವಿಶ್ವದಾಖಲೆ ಬರೆದ ಇಶಾನ್ ಕಿಶನ್

- Advertisement -
- Advertisement -

ಇಂದು ಚಿತ್ತಗಾಂಗ್‌ನಲ್ಲಿ ನಡೆಯುತ್ತಿರುವ ಬಾಂಗ್ಲಾ ಎದುರಿನ ಮೂರನೇ ಏಕದಿನ ಪಂದ್ಯದಲ್ಲಿ ಕೇವಲ 126 ಎಸೆತಗಳಲ್ಲಿ 200 ರನ್ ಗಳಿಸಿದ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ವೇಗದ ದ್ವಿಶತಕ ಸಿಡಿಸಿದ ಆಟಗಾರ ಎಂಬ ವಿಶ್ವ ದಾಖಲೆಗೆ ಪಾತ್ರರಾದರು. ಈ ಮೊದಲು ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ 138 ಎಸೆತಗಳಲ್ಲಿ ಜಿಂಬಾಬ್ವೆ ವಿರುದ್ಧ ದ್ವಿಶತಕ ಗಳಿಸಿದ್ದರು.

ಇಂದಿನ ಪಂದ್ಯದಲ್ಲಿ ಮೊದಲ 85 ಎಸೆತಗಳಲ್ಲಿ ಶತಕ ಸಿಡಿಸಿದ ಕಿಶನ್ ಆನಂತರ ಕೇವಲ 41 ಎಸೆತಗಳಲ್ಲಿ ಮತ್ತೆ ನೂರು ರನ್ ಸಿಡಿಸಿ ಭಾರತ ತಂಡವು ಬಾಂಗ್ಲಾ ವಿರುದ್ಧ ಬೃಹತ್ ಮೊತ್ತ ಪೇರಿಸಲು ನೆರವಾದರು.

ಚೆಂಡನ್ನು ಮೂಲೆ ಮೂಲೆಗೂ ಅಟ್ಟಿದ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಇಶಾನ್ ಕಿಶನ್ 24 ಬೌಂಡರಿ ಮತ್ತು 10 ಸಿಕ್ಸರ್ ಸಿಡಿಸಿದರು. ತಮ್ಮ ಏಕದಿನ ಕ್ರಿಕೆಟ್‌ನ ಚೊಚ್ಚಲ ಶತಕವನ್ನು ಸ್ಮರಣೀಯವಾಗಿಸಿಕೊಂಡರು.

ಭಾರತ ತಂಡವು ಮೊದಲ ಎರಡು ಪಂದ್ಯಗಳಲ್ಲಿ ಬಾಂಗ್ಲಾ ವಿರುದ್ಧ ಸೋತಿತ್ತು. ಮೂರನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಗಾಯದ ಕಾರಣದಿಂದ ಹೊರಗುಳಿದರು. ಅದಕ್ಕಾಗಿ ಇಶಾನ್ ಕಿಶನ್‌ಗೆ ಅವಕಾಶ ಕಲ್ಪಿಸಲಾಗಿತ್ತು. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಅವರು ಭರ್ಜರಿ ದ್ವಿಶತಕ ಗಳಿಸಿ ಮಿಂಚಿದರು.

ಅವರು ಈ ಸೊಗಸಾದ ಆಟದ ನೆರವಿನಿಂದ ಭಾರತವು 41 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 344 ರನ್ ಗಳಿಸಿದೆ.

131 ಎಸೆತ ಎದುರಿಸಿದ ಇಶಾನ್ ಕಿಶನ್ 210 ರನ್ ಗಳಿಸಿ ಟಸ್ಕಿನ್ ಅಹ್ಮದ್ ಬೌಲಿಂಗ್‌ನಲ್ಲಿ ಲಿಟನ್ ದಾಸ್‌ಗೆ ಕ್ಯಾಚಿತ್ತು ಔಟಾದರು. ಅವರ ಇನ್ನಿಂಗ್ಸ್‌ನಲ್ಲಿ ಗಳು ಸೇರಿವೆ.

ಇದುವರೆಗೆ ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್ ಮತ್ತು ರೋಹಿತ್ ಶರ್ಮಾ ಏಕದಿನ ಪಂದ್ಯದಲ್ಲಿ ಭಾರತದ ಪರವಾಗಿ ದ್ವಿಶತಕ ಗಳಿಸಿದ ಆಟಗಾರರಾಗಿದ್ದಾರೆ. 4ನೇ ಆಟಗಾರನಾಗಿ ಇಶಾನ್ ಕಿಶನ್ ಸೇರ್ಪಡೆಗೊಂಡಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭದಲ್ಲಿಯೇ ನಾಯಕ ಶಿಖರ್ ಧವನ್ ವಿಕೆಟ್ ಕಳೆದುಕೊಂಡಿತು. ಆದರೆ ಇಶಾನ್ ಕಿಶನ್ ಮತ್ತು ವಿರಾಟ್ ಕೊಹ್ಲಿ ಎರಡನೇ ವಿಕೆಟ್‌ಗೆ 290 ರನ್‌ಗಳ ಬೃಹತ್ ಜೊತೆಯಾಟವಾಡಿ ಇತಿಹಾಸ ನಿರ್ಮಿಸಿದರು.

ಇನ್ನೊಂದೆಡೆ ವಿರಾಟ್ ಕೊಹ್ಲಿ 91 ಎಸೆತಗಳಲ್ಲಿ 113 ರನ್ ಸಿಡಿಸುವ ಮೂಲಕ ಮೊತ್ತೊಂದು ಶತಕ ಗಳಿಸಿದರು. ತಮ್ಮ ಅಂತರಾಷ್ಟ್ರೀಯ 72ನೇ ಶತಕ ಗಳಿಸಿದ ಅವರು ಸಚಿನ್ ನಂತರ ಎರಡನೇ ಸ್ಥಾನಕ್ಕೇರಿದರು. ಸಚಿನ್ 100 ಅಂತರಾಷ್ಟ್ರೀಯ ಶತಕಗಳನ್ನು ಗಳಿಸಿದ್ದಾರೆ.

ಇದನ್ನೂ ಓದಿ: 34ನೇ ಜನ್ಮದಿನ: ಮಾಗಿದ, ಸೌಹಾರ್ದತೆ ಪರ ವಾಲಿದ ವಿರಾಟ್ ಕೊಹ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...