Homeಮುಖಪುಟಗೋವುಗಳ ಮಾರಾಟದ ಹೇಳಿಕೆಗಾಗಿ ಮನೇಕಾ ಗಾಂಧಿಗೆ ಇಸ್ಕಾನ್‌ನಿಂದ 100 ಕೋಟಿ ಮಾನನಷ್ಟ ನೋಟಿಸ್

ಗೋವುಗಳ ಮಾರಾಟದ ಹೇಳಿಕೆಗಾಗಿ ಮನೇಕಾ ಗಾಂಧಿಗೆ ಇಸ್ಕಾನ್‌ನಿಂದ 100 ಕೋಟಿ ಮಾನನಷ್ಟ ನೋಟಿಸ್

- Advertisement -
- Advertisement -

ಅಂತರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್) ದೇಶದ ಅತಿ ದೊಡ್ಡ ಮೋಸದ ಸಂಸ್ಥೆಯಾಗಿದ್ದು, ಗೋಶಾಲೆಯಿಂದ ಗೋವುಗಳನ್ನು ಕಸಾಯಿ ಖಾನೆಗೆ ಮಾರಾಟ ಮಾಡುತ್ತಿದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಸಂಸದೆ ಮನೇಕಾ ಗಾಂಧಿ ವಿರುದ್ಧ ಶುಕ್ರವಾರ 100 ಕೋಟಿ ರೂಪಾಯಿ ಮಾನನಷ್ಟ ನೋಟಿಸ್ ಕಳುಹಿಸಲಾಗಿದೆ.

ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊದಲ್ಲಿ, ”ಆಂಧ್ರಪ್ರದೇಶದ ಅನಂತಪುರ ನಗರದಲ್ಲಿ ಇಸ್ಕಾನ್‌ನ ಗೋಶಾಲೆಗೆ ಭೇಟಿ ನೀಡಿದ್ದಾಗಿ ಹೇಳುತ್ತಾರೆ. ಆಗ ಇಸ್ಕಾನ್ ಎನ್ನುವುದು ಭಾರತದ ಅತಿ ದೊಡ್ಡ ಮೋಸದ ಸಂಸ್ಥೆ ಎಂದು ಹೇಳಿದರು.

”ಇಡೀ ಡೈರಿಯಲ್ಲಿ ಒಂದೇ ಒಂದು ಗೊಡ್ಡು ಹಸು ಇರಲಿಲ್ಲ, ಒಂದು ಕರುವೂ ಇರಲಿಲ್ಲ. ಇದರರ್ಥ ಎಲ್ಲವನ್ನೂ ಮಾರಾಟ ಮಾಡಲಾಗಿದೆ” ಎಂದು ಹೇಳಿದರು. (ಗೊಡ್ಡು ಹಸು ಎಂದರೆ ಸ್ವಲ್ಪ ಸಮಯದಿಂದ ಹಾಲು ನೀಡದಿರುವುದು.)

ಮಾಜಿ ಕೇಂದ್ರ ಸಚಿವ ಮತ್ತು ಪ್ರಾಣಿ ಹಕ್ಕುಗಳ ಕಾರ್ಯಕರ್ತಯಾಗಿರುವ ಮನೇಕಾ ಗಾಂಧಿ, ”ಇಸ್ಕಾನ್ ಗೋಶಾಲೆಗಳನ್ನು ಸ್ಥಾಪಿಸಿ ಸರ್ಕಾರದಿಂದ ”ಅನಿಯಮಿತ ಪ್ರಯೋಜನಗಳನ್ನು” ಪಡೆಯುತ್ತಿದೆ ಎಂದು ಆರೋಪಿಸಿದರು.

”ಅವರು(ಇಸ್ಕಾನ್) ರಸ್ತೆಗಳಲ್ಲಿ ‘ಹರೇ ರಾಮ್ ಹರೇ ಕೃಷ್ಣ’ ಎಂದು ಹಾಡುತ್ತಾರೆ ಮತ್ತು ಅವರ ಸಂಪೂರ್ಣ ಜೀವನವು ಹಾಲಿನ ಮೇಲೆ ಅವಲಂಬಿತವಾಗಿದೆ ಎಂದು ಹೇಳುತ್ತಾರೆ. ಬಹುಶಃ, ಅವರಷ್ಟು ಜಾನುವಾರುಗಳನ್ನು ಯಾರೂ ಕಟುಕರಿಗೆ ಯಾರೂ ಮಾರಾಟ ಮಾಡಿರಲಿಕ್ಕಿಲ್ಲ” ಎಂದು ಹೇಳಿದರು.

ಈ ಬಗ್ಗೆ ಶುಕ್ರವಾರದ ಪ್ರತಿಕ್ರಿಯಿಸಿದ ಇಸ್ಕಾನ್, ”ಅವರ ಆರೋಪಗಳು ದುರುದ್ದೇಶಪೂರಿತ, ಸುಳ್ಳು ಮತ್ತು ಮಾನನಷ್ಟವಾಗಿವೆ” ಎಂದು ಹೇಳಿದೆ.

ಇಸ್ಕಾನ್ ಕೋಲ್ಕತ್ತಾದ ಉಪಾಧ್ಯಕ್ಷರಾದ ರಾಧರಮ್ ದಾಸ್ ಅವರು, ”ಸುಳ್ಳು ಹೇಳಿ ಅಪಪ್ರಚಾರ ಮಾಡಿದ್ದಾರೆ. ಅವರ ಟೀಕೆಗಳನ್ನು ಹಿಂಪಡೆಯಬೇಕು ಮತ್ತು ಬೇಷರತ್ತಾದ ಕ್ಷಮೆಯಾಚಿಸಬೇಕು, ಅದನ್ನು ಎಲ್ಲಾ ಪ್ರಮುಖ ಪತ್ರಿಕೆಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಕಟಿಸಬೇಕು” ಎಂದು ಒತ್ತಾಯಿಸಿದರು.

”ನಿಮ್ಮ ಸುಳ್ಳು ಹೇಳಿಕೆಗಳು ಮತ್ತು ಆರೋಪಗಳು ನನ್ನ ಕ್ಲೈಂಟ್‌ನ ಪ್ರತಿಷ್ಠೆಗೆ ತೀವ್ರ ಹಾನಿಯನ್ನುಂಟುಮಾಡಿದೆ. ನಿಮ್ಮ ಹೇಳಿಕೆಗಳು ಪ್ರಚೋದನಾತ್ಮಕವಾಗಿವೆ, ಸಂಸ್ಥೆಯ ಅನುಯಾಯಿಗಳನ್ನು ದಾರಿ ತಪ್ಪಿಸುವಂತಿವೆ” ಎಂದು ಎಂದು ಮಾನನಷ್ಟ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ‘ಇಸ್ಕಾನ್’ ಅತಿ ದೊಡ್ಡ ಮೋಸದ ಸಂಸ್ಥೆ, ಹಸುಗಳನ್ನು ಕಟುಕರಿಗೆ ಮಾರಿದೆ: ಬಿಜೆಪಿ ಸಂಸದೆ ಮನೇಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...