Homeಅಂತರಾಷ್ಟ್ರೀಯIslamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್‌ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ...

Islamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್‌ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ ಜೆಡಿ ವ್ಯಾನ್ಸ್ ನಿಯೋಗ

- Advertisement -
- Advertisement -

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿರುವ ಅಮೆರಿಕ-ಇರಾನ್‌ ನಡುವಿನ ಮಹತ್ವದ ಶಾಂತಿ ಮಾತುಕತೆ ವಿಫಲವಾದಂತೆ ಗೋಚರಿಸುತ್ತಿದೆ. ಅಮೆರಿಕದ ಪರವಾಗಿ ಮಾತುಕತೆಗೆ ಆಗಮಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ, ಇರಾನ್‌ ಜೊತೆ ಯಾವುದೇ ಒಪ್ಪಂದ ಸಾಧ್ಯವಾಗದೆ ವಾಪಸ್ ತೆರಳಿದೆ ಎಂದು ವರದಿಯಾಗಿದೆ.

“ಪಾಕಿಸ್ತಾನದಲ್ಲಿ 21 ಗಂಟೆಗಳ ಕಾಲ ನಡೆದ ಮಾತುಕತೆಗಳ ನಂತರವೂ, ಇರಾನ್ ಜೊತೆ ಒಪ್ಪಂದ ಮಾಡಿಕೊಳ್ಳಲು ಅಮೆರಿಕದ ನಿಯೋಗ ವಿಫಲವಾಗಿದೆ. ನಾವು ಯುಎಸ್‌ಗೆ ವಾಪಸ್ ಹೋಗುತ್ತಿದ್ದೇವೆ” ಎಂದು ಸ್ವತಃ ಜೆಡಿ ವ್ಯಾನ್ಸ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಸಣ್ಣ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ವ್ಯಾನ್ಸ್, “ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪಿಕೊಳ್ಳದಿರಲು ನಿರ್ಧರಿಸಿದೆ” ಎಂದು ತಿಳಿಸಿದ್ದಾರೆ.

“ಇದು ಅಮೆರಿಕಕ್ಕೆ ಬ್ಯಾಡ್ ನ್ಯೂಸ್ (ಕೆಟ್ಟ ಸುದ್ದಿ), ಅದಕ್ಕಿಂತಲೂ ಹೆಚ್ಚಾಗಿ ಇರಾನ್‌ಗೆ ಬ್ಯಾಡ್ ನ್ಯೂಸ್. ನಾವು ನಮ್ಮ ಕೆಂಪು ರೇಖೆ (ರೆಡ್ ಲೈನ್‌) ಏನು, ನಾವು ಏನನ್ನು ಒಪ್ಪಿಕೊಳ್ಳುತ್ತೇವೆ, ಏನನ್ನು ಒಪ್ಪಿಕೊಳ್ಳುವುದಿಲ್ಲ ಎಂಬುವುದನ್ನು ಅವರಿಗೆ ಸ್ಪಷ್ಟವಾಗಿ ತಿಳಿಸಿದ್ದೇವೆ” ಎಂದಿದ್ದಾರೆ.

ಅಲ್‌-ಜಝೀರಾ ವರದಿಯ ಪ್ರಕಾರ, “ಪರಮಾಣು ವಿಷಯಕ್ಕೆ ಸಂಬಂಧಿಸಿದಂತೆ ಇರಾನ್‌ನಿಂದ ಇನ್ನೂ ಯಾವುದೇ ಬದ್ಧತೆ ಕಂಡುಬಂದಿಲ್ಲ. ನಾವು ನಮ್ಮ ಕಡೆಯಿಂದ ಅತ್ಯುತ್ತಮ ಮತ್ತು ಅಂತಿಮ ಪ್ರಸ್ತಾಪ ಮುಂದಿಟ್ಟಿದ್ದೇವೆ” ಎಂದು ವ್ಯಾನ್ಸ್ ಹೇಳಿದ್ದಾರೆ.

ಈ ನಡುವೆ, “ಐತಿಹಾಸಿಕ ಶಾಂತಿ ಮಾತುಕತೆ ಎರಡನೇ ದಿನವೂ ಮುಂದುವರಿಯಲಿವೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಈ ಚರ್ಚೆಯಲ್ಲಿ ಹಾರ್ಮುಝ್ ಜಲಸಂಧಿಯ ವಿಷಯವು ಪ್ರಮುಖ ಅಡೆತಡೆಯಾಗಿ ಅಥವಾ ತೀವ್ರ ಭಿನ್ನಾಭಿಪ್ರಾಯದ ವಿಷಯವಾಗಿ ಪರಿಣಮಿಸಿದೆ” ಎಂದಿವೆ.

ಮಾತುಕತೆಗಳು ಹೇಗೆ ಕೊನೆಗೊಂಡರೂ ಅಮೆರಿಕ ಇರಾನ್ ವಿರುದ್ಧದ ಯುದ್ಧವನ್ನು ಗೆದ್ದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ತನ್ನ ಎರಡು ಹಡಗುಗಳು ಹಾರ್ಮುಝ್ ಜಲಸಂಧಿಯ ಮೂಲಕ ಸಾಗಿವೆ ಎಂಬ ಅಮೆರಿಕದ ಹೇಳಿಕೆಯನ್ನು ಇರಾನ್ ನಿರಾಕರಿಸಿದೆ ಮತ್ತು ಮಿಲಿಟರಿ ಹಡಗುಗಳು ಜಲಮಾರ್ಗದ ಮೂಲಕ ಹಾದುಹೋಗಲು ಮಾಡುವ ಯಾವುದೇ ಪ್ರಯತ್ನಕ್ಕೆ ‘ಬಲವಾದ ಪ್ರತಿಕ್ರಿಯೆ’ ನೀಡಲಾಗುವುದು ಎಂದು ಎಚ್ಚರಿಸಿದೆ.

ಇವೆಲ್ಲದರ ನಡುವೆ, ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರೆಸಿದೆ, ಟೆಫಾಹ್ತಾ ಪಟ್ಟಣದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...