Homeಮುಖಪುಟ50 ಒತ್ತೆಯಾಳುಗಳ ಬಿಡುಗಡೆಗೆ ಪ್ರತಿಯಾಗಿ 4 ದಿನ ಯುದ್ಧ ವಿರಾಮ: ಇಸ್ರೇಲ್ ಒಪ್ಪಿಗೆ

50 ಒತ್ತೆಯಾಳುಗಳ ಬಿಡುಗಡೆಗೆ ಪ್ರತಿಯಾಗಿ 4 ದಿನ ಯುದ್ಧ ವಿರಾಮ: ಇಸ್ರೇಲ್ ಒಪ್ಪಿಗೆ

- Advertisement -
- Advertisement -

ಗಾಝಾದ ಹಮಾಸ್ ಗುಂಪಿನ ವಶದಲ್ಲಿರುವ 50 ಒತ್ತೆಯಾಳುಗಳ ಬಿಡುಗಡೆಗೆ ಪ್ರತಿಯಾಗಿ ನಾಲ್ಕು ದಿನಗಳ ಯುದ್ದ ವಿರಾಮಕ್ಕೆ ಇಸ್ರೇಲ್ ಸರ್ಕಾರ ಮತ್ತು ಹಮಾಸ್ ಬುಧವಾರ ಒಪ್ಪಿಕೊಂಡಿವೆ.

ಹಮಾಸ್ ಗುಂಪು ವಿದೇಶಿಗರು ಸೇರಿದಂತೆ ಇಸ್ರೇಲ್‌ ಮೂಲದ 50 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದರೆ, ಅತ್ತ ಇಸ್ರೇಲ್‌ ಸರ್ಕಾರ ಗಾಝಾದ 150 ಯುದ್ದ ಕೈದಿಗಳನ್ನು ಬಿಡುಗಡೆ ಮಾಡುವುದಾಗಿ ಒಪ್ಪಿಕೊಂಡಿದೆ ಎಂದು ತಿಳಿದು ಬಂದಿದೆ.

ಕತಾರ್ ಮತ್ತು ಅಮೆರಿಕದ ಅಧಿಕಾರಿಗಳು ಇಸ್ರೇಲ್ ಸರ್ಕಾರ ಹಾಗೂ ಹಮಾಸ್‌ ನಡುವಿನ ಮಾತುಕತೆಗೆ ಮಧ್ಯಸ್ಥಿಕೆ ವಹಿಸಿದ್ದರು. ಎರಡೂ ಕಡೆಯ ಮಾತುಕತೆ ಸಫಲವಾದ ಬಳಿಕ ಗಾಝಾದ ಯುದ್ದ ಕೈದಿಗಳನ್ನು ಬಿಡುಗಡೆ ಮಾಡಲು ಇಸ್ರೇಲ್ ಸಂಸತ್ ಕೂಡ ಒಪ್ಪಿಕೊಂಡಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಾರ್ಯಾಲಯ ತಿಳಿಸಿದೆ.

ಬಿಡುಗಡೆಯಾಗುವ ಪ್ರತೀ 10 ಹೆಚ್ಚುವರಿ ಒತ್ತೆಯಾಳುಗಳಿಗೆ ಪ್ರತಿಯಾಗಿ ಯುದ್ಧ ವಿರಾಮವನ್ನು ಇನ್ನೊಂದು ದಿನಕ್ಕೆ ವಿಸ್ತರಿಸಲಾಗುವುದು. ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ನಾವು ಬದ್ದರಾಗಿದ್ದೇವೆ ಎಂದು ಇಸ್ರೇಲ್ ಸರ್ಕಾರ ತಿಳಿಸಿದೆ.

ಅಕ್ಟೋಬರ್ 7ರಂದು ಗಾಝಾದ ಹಮಾಸ್ ಗುಂಪು ಇಸ್ರೇಲ್‌ ಮೇಲೆ ಏಕಾಏಕಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಇಸ್ರೇಲ್‌ 1,200 ಜನರು ಬಲಿಯಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ಇಸ್ರೇಲ್ ಸರ್ಕಾರ ಹಮಾಸ್‌ ಜೊತೆ ಯುದ್ದ ಸಾರಿದೆ. ಕಳೆದ ಒಂದುವರೆ ತಿಂಗಳಿನಿಂದ ನಡೆಯುತ್ತಿರುವ ಸಮರದಲ್ಲಿ ಗಾಝಾದ 11 ಸಾವಿರಕ್ಕೂ ಅಧಿಕ ನಾಗರಿಕರು ಬಲಿಯಾಗಿದ್ದಾರೆ.

ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದ್ದಾಗ ವಿದೇಶಿಗರು ಸೇರಿದಂತೆ 200 ಅಧಿಕ ಜನರನ್ನು ಅಪಹರಿಸಿ ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿದೆ. ಅವರೆಲ್ಲರನ್ನು ಬಿಡುಗಡೆ ಮಾಡುವವರೆಗೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಹೇಳಿದೆ.

ಇದನ್ನೂ ಓದಿ : ಪ್ರತಿ ಪ್ರೊಡಕ್ಟ್‌ಗೆ 1 ಕೋಟಿ ದಂಡ ಹಾಕುತ್ತೇವೆ: ಬಾಬಾ ರಾಮ್‌ ದೇವ್‌ಗೆ ಕೋರ್ಟ್ ಎಚ್ಚರಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...