ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ದಾಳಿ ಮುಂದುವರೆದಿದ್ದು, ಗಾಝಾ ನಗರದ ಅಲ್-ಅಹ್ಲಿ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ಮಾಡಿದೆ. ಈ ದಾಳಿಯಲ್ಲಿ 500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಆಸ್ಪತ್ರೆಯಲ್ಲಿ ಸಾವಿರಾರು ನಾಗರಿಕರು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದರು. ನಿರಂತರ ದಾಳಿಯ ಪರಿಣಾಮ ನಿರಾಶ್ರಿತರೂ ಆಸ್ಪತ್ರೆಯಲ್ಲಿ ಆಶ್ರಯ ಪಡೆಯುತ್ತಿದ್ದರು ಎನ್ನಲಾಗಿದೆ.
ಬಾಂಬ್ ದಾಳಿಯಿಂದಾಗಿ ಕನಿಷ್ಠ 500 ಮಂದಿ ಸಾವನ್ನಪ್ಪಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ಹೇಳಿದೆ. ವಿಶ್ವ ಸಂಸ್ಥೆ ನಡೆಸುತ್ತಿದ್ದ ಶಾಲೆಯಲ್ಲಿ ಆಶ್ರಯ ಪಡೆದಿದ್ದ ನಿರಾಶ್ರಿತರ ಮೇಲೂ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
Dear world,
Israel just bombed a Christian hospital in Gaza and murdered over 500 Palestinian civilians. White phosphorus chemical bombs confirmed by human rights watch was not enough to open your eyes. Over 1000 dead children wasn’t enough. Will you open your eyes and act now? pic.twitter.com/hSoUVJ40eD
— Dr. Omar Suleiman (@omarsuleiman504) October 17, 2023
ಆಸ್ಪತ್ರೆ ಮೇಲೆ ಬಾಂಬ್ ದಾಳಿ ಮಾಡಿರುವುದಕ್ಕೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ ಜಜೀರಾ ಹಂಚಿಕೊಂಡಿರುವ ದೃಶ್ಯಗಳಲ್ಲಿ ವೈದ್ಯರು ಮತ್ತು ನಾಗರಿಕರು ಬಿಳಿ ಚೀಲಗಳು, ಅಥವಾ ಹೊದಿಕೆಗಳಲ್ಲಿ ಮೃತ ದೇಹಗಳ್ನು ಪಡೆದುಕೊಳ್ಳುತ್ತಿರುವುದನ್ನು ನೋಡಬಹುದು. ಆಸ್ಪತ್ರೆಯ ಅಂಗಳದಲ್ಲಿ ರಕ್ತದ ಕಲೆಗಳು ಮತ್ತು ಸುಟ್ಟ ಕಾರುಗಳು ಗೋಚರಿಸಸುತ್ತವೆ.
ಅಕ್ಟೋಬರ್ 7ರಿಂದ ನಡೆಯುತ್ತಿರುವ ಈ ಮಾರಣಾಂತಿಕ ಸಂಘರ್ಷದಲ್ಲಿ ಪ್ಯಾಲೆಸ್ತೀನ್, ಇಸ್ರೇಲ್‌ನ ಸಾವಿರಾರು ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ. ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ಸೇನೆ ವೈಮಾನಿಕ ದಾಳಿ ನಡೆಸುವ ಮೂಲಕ ವಿನಾಶಕಾರಿ ಪರಿಸ್ಥಿತಿಯನ್ನು ಸೃಷ್ಟಿಸಿದೆ.
10 ದಿನಗಳಿಂದ ನಡೆಯುತ್ತಿರುವ ಬಾಂಬ್ ದಾಳಿಯಿಂದಾಗಿ ಸೆಂಟ್ರಲ್ ಗಾಜಾದ ಅಹ್ಲಿ ಅರಬ್ ಆಸ್ಪತ್ರೆಗೆ ಸ್ಥಳಾಂತರಗೊಂಡಿದ್ದ 500 ರಿಂದ 600 ಜನ ಇಸ್ರೇಲ್ ಸೈನ್ಯದ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪ್ಯಾಲೆಸ್ತೀನ್ ಆಳ್ವಿಕೆಯ ಆರೋಗ್ಯ ಸಚಿವಾಲಯ ತಿಳಿಸಿದೆ. ನೂರಾರು ಗಾಯಾಳುಗಳು ಇನ್ನೂ ಅವಶೇಷಗಳಡಿಯಲ್ಲಿದ್ದಾರೆ ಎಂದು ಹೇಳಿದ್ದು, ಇದು ಯುದ್ಧ ಅಪರಾಧ ಎಂದು ಕರೆದಿದೆ. ವಿಶ್ವ ಆರೋಗ್ಯ ಸಂಸ್ಥೆ ಕೂಡ ಈ ಘಟನೆಯನ್ನು ಖಂಡಿಸಿದೆ. ಜೋರ್ಡಾನ್‌ನಲ್ಲಿ ಘಟನೆಯನ್ನು ಖಂಡಿಸಿ ಇಸ್ರೇಲ್ ರಾಯಭಾರ ಕಚೇರಿ ಮೇಲೆ ದಾಳಿ ಮಾಡಲು ಪ್ರತಿಭಟನಾಕಾರರು ಪ್ರಯತ್ನಿಸಿದ್ದಾರೆ.
ಇದನ್ನೂ ಓದಿ: ಪ್ಯಾಲೆಸ್ತೀನ್ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್ ಆಗುತ್ತಿದೆ?


