Homeಮುಖಪುಟನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: 45ಕ್ಕೂ ಹೆಚ್ಚು ಜನ ಸಾವು

ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: 45ಕ್ಕೂ ಹೆಚ್ಚು ಜನ ಸಾವು

- Advertisement -
- Advertisement -

ಉತ್ತರ ಗಾಝಾ ಪ್ರದೇಶದ ಜನನಿಬಿಡ ಜಬಾಲಿಯಾ ನಿರಾಶ್ರಿತರ ಶಿಬಿರದ ವಸತಿ ಕಟ್ಟಡದ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ. ಈ ವೇಳೆ ಕನಿಷ್ಠ 45 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಗಾಝಾದ ರಕ್ಷಣಾ ಸಚಿವಾಲಯ ಗುರುವಾರ ಪ್ರಕಟಿಸಿದೆ.

ನಿರಾಶ್ರಿತರ ಶಿಬಿರದ ಅಲ್-ಶಿಹಾಬ್ ಕುಟುಂಬದ ಮನೆಯ ಮೇಲೆ ಸಂಜೆಯ ವೇಳೆಗೆ ಈ ದಾಳಿ ನಡೆದಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಇಯಾದ್ ಬೋಝುಮ್ ಹೇಳಿದ್ದಾರೆ.

ಅಲ್-ಶಿಹಾಬ್ ಮನೆಯಲ್ಲಿ ಹಲವು ಜನ ಆಶ್ರಯ ಪಡೆದಿದ್ದರು. ಈ ದಾಳಿ ನಡೆದಿದೆ ಎನ್ನಲಾಗಿದೆ. ತೀವ್ರ ಬಾಂಬ್ ದಾಳಿಯ ಹಿನ್ನೆಲೆಯಲ್ಲಿ ಬೇರೆಡೆಯಿಂದ ಓಡಿಬಂದು ಈ ಕಟ್ಟಡದಲ್ಲಿ ಆಶ್ರಯ ಪಡೆದಿದ್ದರು ಎಂದು ತಿಳಿದು ಬಂದಿದೆ.

ಘಟನೆ ಬಳಿಕ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿರುವ ಮೃತದೇಹಗಳನ್ನು ಹೊರತೆಗೆಯುವ ಕಾರ್ಯವನ್ನು ಪರಿಹಾರ ಕಾರ್ಯಕರ್ತರು ಮುಂದುವರಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.

ಹಮಾಸ್ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್ ಸೇನೆ ಭೂದಾಳಿ ನಡೆಸಲು ಸಜ್ಜಾಗುತ್ತಿದ್ದು, ಈಗಾಗಲೇ ಗಾಝಾಪಟ್ಟಿಯುದ್ದಕ್ಕೂ ವಾಯುದಾಳಿಗಳನ್ನು ನಡೆಸುತ್ತಿದೆ. ಇಸ್ರೇಲ್ ಇಡೀ ಪ್ರದೇಶದ ಮೇಲೆ ಆಕ್ರಮಣ ನಡೆಸಿರುವ ಹಿನ್ನೆಲೆಯಲ್ಲಿ ಆಹಾರ, ಇಂಧನ ಮತ್ತು ವೈದ್ಯಕೀಯ ಸಾಧನಗಳ ಕೊರತೆ ಪ್ಯಾಲೆಸ್ತೀನಿಯರನ್ನು ಕಾಡುತ್ತಿದೆ.

ವಾರಾಂತ್ಯದ ದಾಳಿಯಲ್ಲಿ ಹಮಾಸ್ ಸಶಸ್ತ್ರ ಗುಂಪಿನ 150 ಜನರನ್ನು ಒತ್ತೆಯಾಳುಗಳಾಗಿ ಕರೆದೊಯ್ದಿದ್ದು, ಅವರನ್ನು ಬಿಡುಗಡೆ ಮಾಡುವವರೆಗೂ ದಾಳಿ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಪ್ಯಾಲೆಸ್ತೀನ್‌ಗೆ ಬೆಂಬಲ ಘೋಷಿಸಿದ ಸೌದಿ ಅರೇಬಿಯಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...