Homeಅಂತರಾಷ್ಟ್ರೀಯಇರಾನ್ ಮೇಲೆ ಇಸ್ರೇಲ್ ದಾಳಿ; ಭಾರತೀಯರಿಗೆ ತುರ್ತು ಪ್ರಯಾಣ ಸಲಹೆ ನೀಡಿದ ಭಾರತ!

ಇರಾನ್ ಮೇಲೆ ಇಸ್ರೇಲ್ ದಾಳಿ; ಭಾರತೀಯರಿಗೆ ತುರ್ತು ಪ್ರಯಾಣ ಸಲಹೆ ನೀಡಿದ ಭಾರತ!

- Advertisement -
- Advertisement -

ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳ ಹಿನ್ನಲೆ ಪ್ರಾದೇಶಿಕ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಗಿದ್ದು, ಭಾರತವು ಶುಕ್ರವಾರ ಇರಾನ್ ಮತ್ತು ಇಸ್ರೇಲ್‌ನಲ್ಲಿರುವ ತನ್ನ ನಾಗರಿಕರಿಗೆ ತುರ್ತು ಪ್ರಯಾಣ ಸಲಹೆಗಳನ್ನು ನೀಡಿದೆ. ಅದಾಗ್ಯೂ, ಇರಾನ್ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದು, ಅದರ ನಂತರ ಏರ್ ಇಂಡಿಯಾ ತನ್ನ 15 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ವಿಮಾನಗಳನ್ನು ಬೇರೆಡೆಗೆ ತಿರುಗಿಸಿದೆ.ಇರಾನ್ ಮೇಲೆ ಇಸ್ರೇಲ್

ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಲ್ಲಾ ಭಾರತೀಯ ಪ್ರಜೆಗಳು ಮತ್ತು ಇರಾನ್‌ನಲ್ಲಿರುವ ಭಾರತೀಯ ಮೂಲದ ವ್ಯಕ್ತಿಗಳು ತೀವ್ರ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದೆ.

“ಇರಾನ್‌ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಭಾರತೀಯ ಪ್ರಜೆಗಳು ಮತ್ತು ಇರಾನ್‌ನಲ್ಲಿರುವ ಭಾರತೀಯ ಮೂಲದ ವ್ಯಕ್ತಿಗಳು ಜಾಗರೂಕರಾಗಿರಲು, ಎಲ್ಲಾ ಅನಗತ್ಯ ಚಲನೆಗಳನ್ನು ತಪ್ಪಿಸಲು, ರಾಯಭಾರ ಕಚೇರಿಯ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಅನುಸರಿಸಲು ಮತ್ತು ಸ್ಥಳೀಯ ಅಧಿಕಾರಿಗಳ ಸಲಹೆಯಂತೆ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲು ವಿನಂತಿಸಲಾಗಿದೆ” ಎಂದು ರಾಯಭಾರ ಕಚೇರಿ ಎಕ್ಸ್‌ನಲ್ಲಿ ತಿಳಿಸಿದೆ.

ಅದೇ ವೇಳೆ, ಪ್ರದೇಶದಲ್ಲಿ ಉದ್ವಿಗ್ನತೆ ಮತ್ತಷ್ಟು ಉಲ್ಬಣಗೊಳ್ಳುವ ಭೀತಿಯ ನಡುವೆ ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಇದೇ ರೀತಿಯ ಎಚ್ಚರಿಕೆಯನ್ನು ನೀಡಿದೆ, .

“ಪ್ರದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಇಸ್ರೇಲ್ ಅಧಿಕಾರಿಗಳು ಮತ್ತು ಹೋಮ್ ಫ್ರಂಟ್ ಕಮಾಂಡ್ ಸೂಚಿಸಿದಂತೆ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಪಾಲಿಸಲು ಸೂಚಿಸಲಾಗಿದೆ” ಎಂದು ಅದು ಹೇಳಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ‘ಆಪರೇಷನ್ ರೈಸಿಂಗ್ ಲಯನ್’ ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದ ನಂತರ ಈ ಎರಡು ಸಲಹೆಗಳನ್ನು ನೀಡಲಾಗಿದೆ. ಈ ಆಪರೇಷನ್‌ ಇರಾನ್‌ನ ಪರಮಾಣು ಸಾಮರ್ಥ್ಯಗಳನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

ಇಸ್ರೇಲ್ ದಾಳಿಗಳು ನಟಾಂಜ್‌ನಲ್ಲಿರುವ ಯುರೇನಿಯಂ ಪುಷ್ಟೀಕರಣ ಸೌಲಭ್ಯ ಸೇರಿದಂತೆ ಪ್ರಮುಖ ಪರಮಾಣು ಮೂಲಸೌಕರ್ಯದ ಮೇಲೆ ಪರಿಣಾಮ ಬೀರಿವೆ ಎಂದು ನೆತನ್ಯಾಹು ಹೇಳಿದ್ದಾರೆ.

ಇಸ್ರೇಲ್‌ ದಾಳಿಯಿಂದಾಗಿ ಇರಾನ್ ತನ್ನ ವಾಯುಪ್ರದೇಶದ ಕೆಲವು ಭಾಗಗಳನ್ನು ಮುಚ್ಚಿದ್ದು, ವಾಣಿಜ್ಯ ವಾಯು ಸಂಚಾರಕ್ಕೂ ಅಡ್ಡಿಯಾಗಿದೆ. ಏರ್ ಇಂಡಿಯಾದ ಹಲವಾರು ದೀರ್ಘ-ಪ್ರಯಾಣದ ವಿಮಾನಗಳನ್ನು ಮಾರ್ಗಮಧ್ಯದಲ್ಲಿ ತಿರುಗುವಂತೆ ಅಥವಾ ಹಿಂತಿರುಗುವಂತೆ ಆಯಿದೆ.

ಭಾರತೀಯ ಪ್ರಜೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕವನ್ನು ಕಾಯ್ದುಕೊಳ್ಳುವಾಗ, ಪ್ರದೇಶದಲ್ಲಿನ ತನ್ನ ಕಾರ್ಯಾಚರಣೆಗಳ ಮೂಲಕ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಭಾರತ ಸರ್ಕಾರ ಹೇಳಿದೆ. ಇರಾನ್ ಮೇಲೆ ಇಸ್ರೇಲ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಏರ್ ಇಂಡಿಯಾ ಪತನ: ಮೃತಪಟ್ಟ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಸಾವಿನ ಸಂಖ್ಯೆ ಕನಿಷ್ಠ 265

ಏರ್ ಇಂಡಿಯಾ ಪತನ: ಮೃತಪಟ್ಟ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಸಾವಿನ ಸಂಖ್ಯೆ ಕನಿಷ್ಠ 265

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...