Homeಅಂತರಾಷ್ಟ್ರೀಯಸುದ್ದಿ ಓದುತ್ತಿರುವಾಗಲೇ ಇರಾನ್ ಸರ್ಕಾರಿ ಚಾನೆಲ್‌ ಮೇಲೆ ಇಸ್ರೇಲ್ ದಾಳಿ; ನೇರ ಪ್ರಸಾರದಲ್ಲಿ ದಾಖಲು

ಸುದ್ದಿ ಓದುತ್ತಿರುವಾಗಲೇ ಇರಾನ್ ಸರ್ಕಾರಿ ಚಾನೆಲ್‌ ಮೇಲೆ ಇಸ್ರೇಲ್ ದಾಳಿ; ನೇರ ಪ್ರಸಾರದಲ್ಲಿ ದಾಖಲು

- Advertisement -
- Advertisement -

ಇರಾನ್ ಸರ್ಕಾರಿ ಟಿವಿ ನಿರೂಪಕಿಯೊಬ್ಬರು ಸೋಮವಾರ ಸ್ಟುಡಿಯೋದಲ್ಲಿ ಸುದ್ದಿ ಓದುತ್ತಿರುವಾಗಲೇ ಇಸ್ರೇಲ್ ವಾಯುದಾಳಿ ನಡೆಸಿದ್ದು, ನೇರಪ್ರಸಾದಲ್ಲಿ ದಾಳಿ ಭೀಕರತೆ ದಾಖಲಾಗಿದೆ. ಟೆಹ್ರಾನ್ ಪ್ರದೇಶವನ್ನು ಸ್ಥಳಾಂತರಿಸುವಂತೆ ಇಸ್ರೇಲ್ ಎಚ್ಚರಿಕೆ ನೀಡಿದ ಒಂದು ಗಂಟೆಯ ನಂತರ ಸ್ಫೋಟ ಸಂಭವಿಸಿದ್ದು, ಪ್ರಾಣ ಉಳಿಸಿಕೊಳ್ಳಲು ನಿರೂಪಕಿ ಸ್ಟುಡಿಯೋ ತೊರೆದಿರುವುದುನ್ನು ಕಾಣಬಹುದು.

ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ನ್ಯೂಸ್ ನೆಟ್‌ವರ್ಕ್‌ನ ವರದಿಗಾರ್ತಿ ಮಾತನಾಡುತ್ತಾ, “ತಾಯ್ನಾಡಿನ ವಿರುದ್ಧ ಆಕ್ರಮಣದ ಶಬ್ದ, ಸತ್ಯ ಮತ್ತು ಸದಾಚಾರದ ವಿರುದ್ಧ ಆಕ್ರಮಣದ ಶಬ್ದ” ಎಂದು ಹೇಳುತ್ತಿದ್ದಂತೆಯೇ ದಾಳಿ ನಡೆದಿದದ್ದು, ಇಡೀ ಸ್ಟುಡಿಯೋ ಧೂಳಿನಿಂದ ಆವೃತವಾಯಿತು.

ನಿರೂಪಕಿ ಸಹರ್ ಎಮಾಮಿ ಅವರು ನೇರಪ್ರಸಾರದಿಂದ ಹೊರಗೆ ಓಡಿಹೋದರು. ಈ ಸಂದರ್ಭದಲ್ಲಿ ಚಾನೆಲ್ ಸಿಬ್ಬಂದಿ ‘ಅಲ್ಲಾಹು ಅಕ್ಬರ್’ ಎಂದು ಕೂಗಿಕೊಂಡು ಪ್ರಾಣರಕ್ಷಣೆಗೆ ಓಡಿದ್ದಾರೆ.

ಚಾನೆಲ್‌ನ ಪ್ರಸಾರವು ಕೂಡಲೇ ರೆಕಾರ್ಡ್ ಮಾಡಿದ ಕಾರ್ಯಕ್ರಮಗಳಿಗೆ ಬದಲಾಯಿತು. ಶೀಘ್ರದಲ್ಲೇ, ಎಮಾಮಿ ಮತ್ತೊಂದು ಸ್ಟುಡಿಯೋದಿಂದ ನೇರ ಪ್ರಸಾರಕ್ಕೆ ಹಿಂತಿರುಗಿದರು. ಮತ್ತೋರ್ವ ನಿರೂಪಕನೊಂದಿಗೆ ಕುಳಿತು ಮಾತನಾಡುತ್ತಿರುವುದು ಕಂಡುಬಂದಿತು.

ದಾಳಿಯ ಹೊಣೆಯನ್ನು ಇಸ್ರೇಲ್‌ನ ರಕ್ಷಣಾ ಸಚಿವಾಲಯ ಒಪ್ಪಿಕೊಂಡಿದೆ. “ದಾಳಿ ಪ್ರದೇಶದ ನಿವಾಸಿಗಳನ್ನು ವ್ಯಾಪಕವಾಗಿ ಸ್ಥಳಾಂತರಿಸಿದ ನಂತರ ಇರಾನಿನ ಆಡಳಿತದ ಪ್ರಚಾರ ಮತ್ತು ಪ್ರಚೋದನೆ ಪ್ರಸಾರ ಪ್ರಾಧಿಕಾರದ ಮೇಲೆ ಐಡಿಎಫ್ ದಾಳಿ ಮಾಡಿದೆ” ಎಂದು ಇಸ್ರೇಲ್ ಕಾಟ್ಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ನಾವು ಎಲ್ಲೆಡೆ ಇರಾನಿನ ಸರ್ವಾಧಿಕಾರಿಯನ್ನು ಹೊಡೆಯುತ್ತೇವೆ” ಎಂದು ಘೋಷಿಸಿದ್ದಾರೆ.

ಚಾನೆಲ್‌ ಮೇಲಿನ ದಾಳಿಯ ಒಂದು ಗಂಟೆಯ ಮೊದಲು, ಇಸ್ರೇಲಿ ಮಿಲಿಟರಿ ದೇಶದ ರಾಜ್ಯ ಟಿವಿ ಮತ್ತು ಪೊಲೀಸ್ ಪ್ರಧಾನ ಕಚೇರಿ ಮತ್ತು ಮೂರು ದೊಡ್ಡ ಆಸ್ಪತ್ರೆಗಳನ್ನು ಒಳಗೊಂಡಿರುವ ಮಧ್ಯ ಟೆಹ್ರಾನ್‌ನ ಒಂದು ಭಾಗದಲ್ಲಿ ಸುಮಾರು 330,000 ಜನರ ಮೇಲೆ ಪರಿಣಾಮ ಬೀರುವ ಬಗ್ಗೆ ಮೊದಲೇ ಎಚ್ಚರಿಕೆ ನೀಡಿತ್ತು.

ಸಂಘರ್ಷದ ನಾಲ್ಕನೇ ದಿನದಂದು ಇಸ್ರೇಲಿ ಮಿಲಿಟರಿ ಇರಾನಿನ ರಾಜಧಾನಿಯ ಮೇಲೆ ವಾಯು ಪ್ರಾಬಲ್ಯವನ್ನು ಸಾಧಿಸಿದೆ.

ಇರಾನ್ ವಿರುದ್ಧ ಯುದ್ಧ | ಟ್ರಂಪ್ ಅಧಿಕಾರ ತಡೆಯುವ ಮಸೂದೆ ಮಂಡಿಸಿದ ಯುಎಸ್ ಸೆನೆಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...