Homeಅಂತರಾಷ್ಟ್ರೀಯದಕ್ಷಿಣ ಗಾಝಾದ ಅತಿದೊಡ್ಡ ನಾಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್: ಹಮಾಸ್ ನಾಯಕನ ಹತ್ಯೆ

ದಕ್ಷಿಣ ಗಾಝಾದ ಅತಿದೊಡ್ಡ ನಾಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್: ಹಮಾಸ್ ನಾಯಕನ ಹತ್ಯೆ

- Advertisement -
- Advertisement -

ಇಸ್ರೇಲ್ ಸಶಸ್ತ್ರ ಪಡೆಗಳು ಭಾನುವಾರ (ಮಾ.23) ರಾತ್ರಿ ದಕ್ಷಿಣ ಗಾಝಾದ ಅತಿದೊಡ್ಡ ವೈದ್ಯಕೀಯ ಸೌಲಭ್ಯವಾದ ನಾಸರ್ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ನಡೆಸಿದೆ.

ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗವನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಹಮಾಸ್‌ನ ಉನ್ನತ ಅಧಿಕಾರಿ ಇಸ್ಮಾಯಿಲ್ ಬರ್ಹೌಮ್ ಸೇರಿದಂತೆ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದಾಳಿಯಿಂದ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಗಳು ಹೇಳಿವೆ.

ಇಸ್ರೇಲ್ ಸೇನೆಯು ಆಸ್ಪತ್ರೆ ಮೇಲೆ ದಾಳಿ ನಡೆಸಿರುವುದನ್ನು ದೃಢಪಡಿಸಿದ್ದು, ಅಲ್ಲಿದ್ದ ಹಮಾಸ್ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ ಎಂದು ತಿಳಿಸಿದೆ. ಜನನಿಬಿಡ ಪ್ರದೇಶಗಳಲ್ಲಿ ಹಮಾಸ್ ಇರುವಿಕೆಯೇ ನಾಗರಿಕರ ಸಾವುನೋವುಗಳಿಗೆ ಕಾರಣ ಎಂದು ಹೇಳಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್‌) “ಗಾಝಾದ ನಾಸರ್ ಆಸ್ಪತ್ರೆಯ ಆವರಣದೊಳಗಿಂದ ಕಾರ್ಯಾಚರಣೆ ನಡೆಸುತ್ತಿದ್ದ ಪ್ರಮುಖ ಹಮಾಸ್ ಭಯೋತ್ಪಾದಕನ ಮೇಲೆ ದಾಳಿ ನಡೆಸಲಾಗಿದೆ. ಹಮಾಸ್ ನಾಗರಿಕ ಮೂಲಸೌಕರ್ಯವನ್ನು ಬಳಸಿಕೊಳ್ಳುತ್ತಿದೆ ಮತ್ತು ಗಾಝಾದ ಜನಸಂಖ್ಯೆಯನ್ನು ದೊಡ್ಡ ಅಪಾಯಕ್ಕೆ ಸಿಲುಕಿಸಿದೆ. ಆಸ್ಪತ್ರೆಯನ್ನು ಆಶ್ರಯ ತಾಣವಾಗಿ ಬಳಸಿಕೊಂಡು ಅಂತಾರಾಷ್ಟ್ರೀಯ ಕಾನೂನಿನ ನೇರ ಉಲ್ಲಂಘನೆ ಮೂಲಕ ಭಯೋತ್ಪಾದಕ ದಾಳಿಗಳನ್ನು ಹಮಾಸ್ ಯೋಜಿಸುತ್ತಿದೆ” ಎಂದು ಆರೋಪಿಸಿದೆ.

ಗಾಝಾದಾ ಇತರ ವೈದ್ಯಕೀಯ ಸೌಲಭ್ಯಗಳಂತೆಯೇ ನಾಸರ್ ಆಸ್ಪತ್ರೆಯೂ ಕೂಡ ಒಂದೂವರೆ ವರ್ಷದ ಇಸ್ರೇಲ್‌ ಸೇನೆಯ ನಿರಂತರ ಆಕ್ರಮಣದಿಂದ ಹಾನಿಗೊಳಗಾಗಿದೆ.

ಇಸ್ರೇಲಿ ಪಡೆಗಳು ಗಾಝಾದ ಅಲ್-ಮವಾಸಿಯಲ್ಲಿರುವ ಟೆಂಟ್ ಮೇಲೆ ಬಾಂಬ್ ದಾಳಿ ನಡೆಸಿ ಹಮಾಸ್‌ನ ರಾಜಕೀಯ ಬ್ಯೂರೋದ ಎರಡನೇ ಸದಸ್ಯ ಸಲಾಹ್ ಅಲ್-ಬರ್ದಾವಿಲ್ ಅವರನ್ನು ಕೊಂದ ಕೆಲವೇ ಗಂಟೆಗಳ ನಂತರ ಇಸ್ಮಾಯಿಲ್ ಬರ್ಹೌಮ್ ಹತ್ಯೆ ನಡೆದಿದೆ.

ಆಕ್ರಮಣದ ನಡುವೆ, ಇಸ್ರೇಲ್ ಸೇನೆ ರಫಾದಲ್ಲಿ ಧ್ವಂಸಗೊಂಡ ಟೆಲ್ ಅಲ್-ಸುಲ್ತಾನ್ ಪ್ರದೇಶದಿಂದ ಹೊರ ಹೋಗುವಂತೆ ಸಾವಿರಾರು ಪ್ಯಾಲೆಸ್ತೀನಿಯರಿಗೆ ಆದೇಶಿಸಿದೆ. ಇಲ್ಲಿಂದ ಸ್ಥಳಾಂತರಗೊಂಡ ಕುಟುಂಬಗಳು ಮುವಾಸಿಗೆ ಓಡಿ ಹೋಗಿದ್ದಾರೆ. ಮುವಾಸಿ ಕಿಕ್ಕಿರಿದ ಟೆಂಟ್ ಶಿಬಿರಗಳಿಂದ ತುಂಬಿದ ತಾತ್ಕಾಲಿಕ ಪ್ರದೇಶವಾಗಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್‌ ಸೇನೆ ನಿರಂತರವಾಗಿ ಗಾಝಾದ ಮೇಲೆ ನಡೆಸುತ್ತಿರುವ ದಾಳಿಯಿಂದ ಇದುವರೆಗೆ 50,021 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 113,274 ಮಂದಿ ಗಾಯಗೊಂಡಿದ್ದಾರೆ ಎಂದು ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾದ ಸರ್ಕಾರಿ ಮಾಧ್ಯಮಗಳು ಸಾವಿನ ಸಂಖ್ಯೆ 61,700ಕ್ಕೂ ಹೆಚ್ಚು ಎಂದಿವೆ. ಇಸ್ರೇಲ್ ಸೇನೆ ಹೊಡೆದುರುಳಿಸಿದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಬಾಕಿಯಾಗಿರುವ ಸಾವಿರಾರು ಮಂದಿ ಪ್ಯಾಲೆಸ್ತೀನಿಯರು ಸತ್ತಿದ್ದಾರೆಂದು ಭಾವಿಸಿ ಈ ಲೆಕ್ಕ ಹಾಕಲಾಗಿದೆ.

ನಾಲ್ಕು ದೇಶಗಳ 5.32 ಲಕ್ಷ ನಾಗರಿಕರ ಗಡಿಪಾರಿಗೆ ಮುಂದಾದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....