Homeಅಂತರಾಷ್ಟ್ರೀಯಗಾಝಾ ನಗರದಲ್ಲಿ ಶಾಲೆ, ನಿರಾಶ್ರಿತರ ಶಿಬಿರ, ಕುಡಿಯುವ ನೀರಿನ ಸೌಲಭ್ಯದ ಮೇಲೆ ಇಸ್ರೇಲ್ ಬಾಂಬ್ ದಾಳಿ:...

ಗಾಝಾ ನಗರದಲ್ಲಿ ಶಾಲೆ, ನಿರಾಶ್ರಿತರ ಶಿಬಿರ, ಕುಡಿಯುವ ನೀರಿನ ಸೌಲಭ್ಯದ ಮೇಲೆ ಇಸ್ರೇಲ್ ಬಾಂಬ್ ದಾಳಿ: ಕನಿಷ್ಠ 16 ಪ್ಯಾಲೆಸ್ತೀನಿಯರು ಸಾವು

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 20 ಅಂಶಗಳ ಕದನ ವಿರಾಮ ಯೋಜನೆ ಮುಂದಿಟ್ಟಿರುವ ನಡುವೆಯೇ ಗಾಝಾದಲ್ಲಿ ಇಸ್ರೇಲ್ ತನ್ನ ಆಕ್ರಮಣವನ್ನು ಮುಂದುವರಿಸಿದೆ. ಬುಧವಾರ (ಅ.1) 16 ಮಂದಿ ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆಗೈದಿದೆ ಎಂದು ವರದಿಯಾಗಿದೆ.

ಗಾಝಾ ನಗರದಲ್ಲಿ ಸ್ಥಳಾಂತರಗೊಂಡ ನಿರಾಶ್ರಿತರು ಆಶ್ರಯ ಪಡೆಯುತ್ತಿದ್ದ ಶಾಲೆಗಳನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸಿದೆ. ನಗರದ ಪೂರ್ವ ಝೈಟೌನ್ ಪ್ರದೇಶದಲ್ಲಿರುವ ಅಲ್-ಫಲಾಹ್ ಶಾಲೆಗೆ ನಿಮಿಷಗಳ ಅಂತರದಲ್ಲಿ ಎರಡು ಬಾರಿ ದಾಳಿ ಮಾಡಲಾಗಿದೆ ಎಂದು ಅಲ್-ಅಹ್ಲಿ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ ಗಾಝಾ ನಗರದ ಪಶ್ಚಿಮ ಭಾಗದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಸುತ್ತಲೂ ನೆರೆದಿದ್ದ ಜನರ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಐವರು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಅಲ್-ಅಹ್ಲಿ ಆಸ್ಪತ್ರೆ ಮಾಹಿತಿ ನೀಡಿದೆ.

ಇನ್ನು ಗಾಝಾ ನಗರದ ಪಶ್ಚಿಮದಲ್ಲಿರುವ ಅಪಾರ್ಟ್‌ಮೆಂಟ್ ಮೇಲೆ ನಡೆದ ದಾಳಿಯಲ್ಲಿ ಮೃತಪಟ್ಟ ವ್ಯಕ್ತಿಯ ಶವವನ್ನು ಸ್ವೀಕರಿಸಲಾಗಿದೆ ಎಂದು ಅಲ್ ಶಿಫಾ ಆಸ್ಪತ್ರೆ ಹೇಳಿದೆ.

ಮಧ್ಯ ಗಾಝಾದಲ್ಲಿರುವ ನುಸೇರತ್ ನಿರಾಶ್ರಿತರ ಶಿಬಿರದ ಮೇಲೂ ಇಸ್ರೇಲ್ ದಾಳಿ ನಡೆಸಿದ್ದು, ದಂಪತಿ ಸಾವನ್ನಪ್ಪಿದ್ದಾರೆ ಎಂದು ಅಲ್-ಅವ್ದಾ ಆಸ್ಪತ್ರೆ ತಿಳಿಸಿದೆ. ಬುರೈಜ್ ನಿರಾಶ್ರಿತರ ಶಿಬಿರದ ಮೇಲೆ ನಡೆಸಿದ ಪ್ರತ್ಯೇಕ ದಾಳಿಯಲ್ಲಿ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ.

ಮಂಗಳವಾರ (ಸೆ.30) ಗಾಝಾದಲ್ಲಿ ನಡೆದ ದಾಳಿಯಲ್ಲಿ ಸಾವನ್ನಪ್ಪಿದ ಟರ್ಕಿಶ್ ಪ್ರಸಾರ ಸಂಸ್ಥೆ ಟಿಆರ್‌ಟಿಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತ ಯಾಹ್ಯಾ ಬರ್ಝಾಕ್ ಅವರ ಅಂತ್ಯಕ್ರಿಯೆಯನ್ನು ಯೋಜಿಸಲಾಗಿದೆ ಎಂದು ಟಿಆರ್‌ಟಿ ತಿಳಿಸಿದೆ.

ಹತ್ಯೆಗೀಡಾದ ಪತ್ರಕರ್ತ ಅಥವಾ ಬುಧವಾರದ ದಾಳಿಗಳ ಕುರಿತು ಇಸ್ರೇಲಿ ಸೇನೆಯು ತಕ್ಷಣಕ್ಕೆ ಪ್ರತಿಕ್ರಿಯಿಸಿಲ್ಲ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿಟ್ಟಿರುವ 20 ಅಂಶಗಳ ಕದನ ವಿರಾಮ ಯೋಜನೆಗೆ ಇಸ್ರೇಲ್ ಒಪ್ಪಿಗೆ ಸೂಚಿಸಿದೆ. ಆದರೆ, ಹಮಾಸ್ ಇನ್ನೂ ಪ್ರತಿಕ್ರಿಯಿಸಿಲ್ಲ. ಹಮಾಸ್‌ಗೆ ಪ್ರತಿಕ್ರಿಯಿಸಲು ನಾಲ್ಕು ದಿನಗಳ ಸಮಯವಕಾಶ ಇದೆ ಎಂದು ಟ್ರಂಪ್ ಹೇಳಿದ್ದಾರೆ. ಈ ನಡುವೆ ಗಾಝಾದಲ್ಲಿ ಇಸ್ರೇಲ್ ನರಮೇಧ ಮುಂದುವರಿಸಿದೆ.

ಇಸ್ರೇಲ್ ಬೆದರಿಕೆಗಳ ನಡುವೆಯೂ ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...