Homeಮುಖಪುಟಇರಾನ್‌ನಿಂದ ವೈಮಾನಿಕ ದಾಳಿ: ಶಿಕ್ಷಣ ಸಂಸ್ಥೆಗಳಿಗೆ ಅನಿರ್ದಿಷ್ಠಾವಧಿ ಬಂದ್‌ ಆದೇಶ ಹೊರಡಿಸಿದ ಇಸ್ರೇಲ್‌

ಇರಾನ್‌ನಿಂದ ವೈಮಾನಿಕ ದಾಳಿ: ಶಿಕ್ಷಣ ಸಂಸ್ಥೆಗಳಿಗೆ ಅನಿರ್ದಿಷ್ಠಾವಧಿ ಬಂದ್‌ ಆದೇಶ ಹೊರಡಿಸಿದ ಇಸ್ರೇಲ್‌

- Advertisement -
- Advertisement -

ಇರಾನ್ ದಾಳಿಯ ನಂತರ ಇಸ್ರೇಲ್ ತನ್ನ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಏಪ್ರಿಲ್ 14ರ ಭಾನುವಾರದಿಂದ ಅನಿರ್ದಿಷ್ಟ ಅವಧಿಗೆ ಬಂದ್‌ ಮಾಡಿದೆ. ಇರಾನ್ ನಿನ್ನೆ ಇಸ್ರೇಲ್‌ ಮೇಲೆ ಕೆಲ ಡ್ರೋನ್‌ಗಳು ಮತ್ತು ಕೆಲವು ಕ್ಷಿಪಣಿಗಳ ದಾಳಿ ನಡೆಸಿದೆ.

ಏಪ್ರಿಲ್ 1ರಂದು ಇಸ್ರೇಲ್ ರಕ್ಷಣಾ ಪಡೆಗಳು (IDF) ಸಿರಿಯಾದ ಡಮಾಸ್ಕಸ್‌ನಲ್ಲಿರುವ ಇರಾನ್‌ನ ರಾಯಭಾರಿ ಕಚೇರಿ ಮೇಲೆ ದಾಳಿ ನಡೆಸಿದ ನಂತರ ಇರಾನ್ ಇಸ್ರೇಲ್‌ಗೆ ದಾಳಿಯ ಬೆದರಿಕೆ ಹಾಕುತ್ತಿದೆ. ದಾಳಿಯಲ್ಲಿ ಬ್ರಿಗೇಡ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಸೇರಿದಂತೆ ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC)ನ ಏಳು ಉನ್ನತ ಅಧಿಕಾರಿಗಳು ಸಾವನ್ನಪ್ಪಿದ್ದರು.

ಮುಂದಿನ ಆದೇಶದವರೆಗೆ ದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಸ್ರೇಲ್ ಹೋಮ್ ಫ್ರಂಟ್ ಹೇಳಿದೆ. ಏಪ್ರಿಲ್ 14ರಿಂದ ಯಾವುದೇ ಶಿಕ್ಷಣ ಸಂಸ್ಥೆಗಳು ತೆರೆದಿರುವುದಿಲ್ಲ ಮತ್ತು ಯಾವುದೇ ಶಿಬಿರ, ಕಾರ್ಯಕ್ರಮಗಳು ಅಥವಾ ಪಠ್ಯೇತರ ಚಟುವಟಿಕೆಗಳು ನಡೆಯುವುದಿಲ್ಲ ಎಂದು ಐಡಿಎಫ್ ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಏಪ್ರಿಲ್ 13ರಂದು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

ಡೇನಿಯಲ್ ಹಗರಿ ಅವರು ಇಸ್ರೇಲಿ ನಾಗರಿಕರಿಗೆ ಎಚ್ಚರಿಕೆಯಿಂದಿರುವಂತೆ ಸೂಚಿಸಿದ್ದಾರೆ ಮತ್ತು ಎಚ್ಚರಿಕೆಯ ಸೈರನ್ ಕೇಳುವ 10 ನಿಮಿಷಗಳ ಕಾಲ ಮನೆಗಳಿಂದ, ಆಶ್ರಯ ತಾಣಗಳಿಂದ ಹೊರಬರದಂತೆ ನಾಗರಿಕರಿಗೆ ಸೂಚಿಸಿದೆ. ಇರಾನ್‌ ದಾಳಿಯ ಭೀತಿಯಿಂದ ಇಸ್ರೇಲ್ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದೆ ಎಂದು ಇಸ್ರೇಲ್ ರಕ್ಷಣಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಹಮಾಸ್, ಹೆಜ್ಬುಲ್ಲಾ ಮತ್ತು ಹೌತಿ  ಯೆಮನ್‌ನ ಗುಂಪು ಮೇಲೆ ದಾಳಿ ನಡೆಸಲು ಮುಂದಾಗಿದ್ದಾರೆ. ತಮ್ಮ ದೇಶವು ಯಾವುದೇ  ರೀತಿಯ ಪ್ರತಿಕ್ರಿಯೆಗೆ ಸಿದ್ದವಾಗಿದೆ ಎಂದು ಇಸ್ರೇಲ್‌ ಹೇಳಿಕೊಂಡಿದೆ.

ಇಸ್ರೇಲ್‌-ಗಾಝಾ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿ ಉಂಟಾಗಿದೆ. ಇಸ್ರೇಲ್‌, ಇರಾನ್‌ ರಾಯಭಾರಿ ಕಚೇರಿ ಮೇಲೆ ನಡೆಸಿದ ದಾಳಿಯು ಈ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಗಾಝಾದ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಯುದ್ಧ ಪ್ರಾರಂಭವಾದಾಗಿನಿಂದ ಗಾಝಾದಲ್ಲಿ 33,175 ಮಂದಿ ಸಾವನ್ನಪ್ಪಿದ್ದಾರೆ. ಮೃತರದಲ್ಲಿ ಮೂರನೇ ಎರಡರಷ್ಟು ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ. ಇಸ್ರೇಲ್‌ ಗಾಝಾದಲ್ಲಿ ಹತ್ಯಾಕಾಂಡ ನಡೆಸುತ್ತಿರುವ ಮಧ್ಯೆ ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ವೈಮಾನಿಕ ದಾಳಿ ನಡೆಸಿತ್ತು. ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC)ನ ಇಬ್ಬರು ಕಮಾಂಡರ್‌ಗಳು ಸೇರಿದಂತೆ ಏಳು ಜನರು ಮೃತಪಟ್ಟಿದ್ದರು. ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ಐಆರ್‌ಜಿಸಿಯ ಎಲೈಟ್ ಕುಡ್ಸ್ ಫೋರ್ಸ್‌ನ ಹಿರಿಯ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಅವರು ಸಾವನ್ನಪ್ಪಿದ್ದರು. ಇದಕ್ಕೆ ತಕ್ಕ ಪ್ರತಿಕ್ರಿಯೆಯನ್ನು ನೀಡುವುದಾಗಿ ಇರಾನ್‌ ಹೇಳಿತ್ತು. ಇದಲ್ಲದೆ ಇಸ್ರೇಲ್‌- ಲೆಬನಾನ್‌ ಮೇಲೆ ಇತ್ತೀಚೆಗೆ ವೈಮಾನಿಕ ದಾಳಿಯನ್ನು ನಡೆಸಿದೆ. ದಾಳಿಯಲ್ಲಿ ಹೆಜ್ಬೊಲ್ಲಾ ಕಮಾಂಡರ್‌ನ್ನು ಹತ್ಯೆ ಮಾಡಿರುವುದಾಗಿ ಹೇಳಿಕೊಂಡಿದ್ದು, ವಿಶ್ವಸಂಸ್ಥೆಯು ಯುದ್ಧ ವ್ಯಾಪಿಸುತ್ತಿರುವ ಬಗ್ಗೆ ಎಚ್ಚರಿಕೆಯನ್ನು ನೀಡಿತ್ತು.

ಇರಾನ್ ನಿನ್ನೆ ಇಸ್ರೇಲ್ ಮೇಲೆ ವಾಯುದಾಳಿ ಆರಂಭಿಸಿತ್ತು, ಇಸ್ರೇಲ್‌ನತ್ತ ಇರಾನ್ ತನ್ನ ಭೂ ಪ್ರದೇಶದಿಂದ ಯುಎವಿಗಳನ್ನು ಉಡಾಯಿಸಿದೆ ಎಂದು ಇಸ್ರೇಲ್ ಸೇನಾ ವಕ್ತಾರ ಡೇನಿಯಲ್ ಹಗಾರಿ ವಿಡಿಯೊ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನು ಓದಿ: ನಿರಂಕುಶಾಧಿಕಾರ ದೇಶಕ್ಕೆ ಹಾನಿಕರ, ಸಮ್ಮಿಶ್ರ ಸರಕಾರವನ್ನು ಅಧಿಕಾರಕ್ಕೆ ತರಬೇಕು-ಉದ್ಧವ್ ಠಾಕ್ರೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...