Homeಅಂತರಾಷ್ಟ್ರೀಯಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂದ ವಿಶ್ವಸಂಸ್ಥೆಯ ವರದಿ: ಜಾಗತಿಕ ಕ್ರಮಕ್ಕೆ ಕರೆ

ಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂದ ವಿಶ್ವಸಂಸ್ಥೆಯ ವರದಿ: ಜಾಗತಿಕ ಕ್ರಮಕ್ಕೆ ಕರೆ

- Advertisement -
- Advertisement -

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯು ನಿಯೋಜಿಸಿದ ಸ್ವತಂತ್ರ ತಜ್ಞರ ತಂಡವು ಇಸ್ರೇಲ್ ಗಾಝಾದಲ್ಲಿ ನರಮೇಧ ನಡೆಸುತ್ತಿದೆ ಎಂದು ಹೇಳಿದ್ದು, ಮಂಗಳವಾರ (ಸೆ.16) ಈ ಕುರಿತು ವರದಿ ಬಿಡುಗಡೆ ಮಾಡಿದೆ. ಅಂತಾರಾಷ್ಟ್ರೀಯ ಸಮುದಾಯವು ನರಮೇಧವನ್ನು ಕೊನೆಗೊಳಿಸಬೇಕು ಮತ್ತು ಅದಕ್ಕೆ ಕಾರಣರಾದವರನ್ನು ಶಿಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದೆ.

ಗಾಝಾದಲ್ಲಿ ಹಮಾಸ್ ವಿರುದ್ಧ ಇಸ್ರೇಲ್ ತನ್ನ ಯುದ್ಧವನ್ನು ಮುಂದುವರೆಸುತ್ತಿರುವಾಗ, ಹತ್ತಾರು ಸಾವಿರ ಜನರನ್ನು ಕೊಂದಿರುವಾಗ, ಮೂವರು ಸದಸ್ಯರ ತಂಡದಿಂದ ಆಳವಾಗಿ ದಾಖಲಿಸಲ್ಪಟ್ಟ ವಿಷಯಗಳು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸರ್ಕಾರದ ವಿರುದ್ಧ ಕೇಳಿ ಬಂದಿರುವ ಆರೋಪಗಳು ಇತ್ತೀಚಿನ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ.

ನಾಲ್ಕು ವರ್ಷಗಳ ಹಿಂದೆ ರಚಿಸಲಾದ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಮತ್ತು ಇಸ್ರೇಲ್ ಕುರಿತ ತಜ್ಞರ ತಂಡ, ಅಕ್ಟೋಬರ್ 7,2023ರಂದು ಹಮಾಸ್ ನೇತೃತ್ವದಲ್ಲಿ ಇಸ್ರೇಲ್ ಮತ್ತು ಇತರ ಪ್ಯಾಲೆಸ್ತೀನ್‌ ಪ್ರದೇಶಗಳಲ್ಲಿ ನಡೆದ ದಾಳಿಯ ನಂತರ ಗಾಝಾದಲ್ಲಿ ನಡೆದ ಮಾನವ ಹಕ್ಕುಗಳ ಉಲ್ಲಂಘನೆಗಳನ್ನು ಪದೇ ಪದೇ ದಾಖಲಿಸಿದೆ.

ಇಸ್ರೇಲ್‌ ವಿರುದ್ದದ ಆರೋಪಗಳು ಮತ್ತು ಗಾಝಾದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ವಿಷಯಗಳನ್ನು ಆಧರಿಸಿ ತಜ್ಞರ ತಂಡವಾಗಲಿ ಅಥವಾ ವಿಶ್ವಸಂಸ್ಥೆಯ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುವ 47 ಸದಸ್ಯ ರಾಷ್ಟ್ರಗಳ ಮಂಡಳಿಯಾಗಲಿ ಯಾವುದೇ ದೇಶದ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವಾದರೂ, ಈ ಫಲಿತಾಂಶಗಳನ್ನು ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಅಥವಾ ಯುಎನ್‌ನ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಟರ್‌ಗಳು ಬಳಸಬಹುದು ಎಂದು ವರದಿಗಳು ಅಭಿಪ್ರಾಯಪಟ್ಟಿವೆ.

ಈ ವರದಿಯು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ ಮುಖ್ಯಸ್ಥೆ ನವಿ ಪಿಳ್ಳೆ ನೇತೃತ್ವದ ತಂಡದ ಅಂತಿಮ ಸಂದೇಶವಾಗಿದೆ. ಅದರ, ಮೂವರು ಸದಸ್ಯರು ಜುಲೈನಲ್ಲಿ ವೈಯಕ್ತಿಕ ಕಾರಣಗಳು ಮತ್ತು ಬದಲಾವಣೆಯ ಅಗತ್ಯವನ್ನು ಉಲ್ಲೇಖಿಸಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಈ ತಂಡವನ್ನು ವಿಶ್ವಸಂಸ್ಥೆಯ ಉನ್ನತ ಮಾನವ ಹಕ್ಕುಗಳ ಸಂಸ್ಥೆಯಾದ ಮಾನವ ಹಕ್ಕುಗಳ ಮಂಡಳಿಯು ನಿಯೋಜಿಸಿತ್ತು. ಆದರೆ, ಅದು ವಿಶ್ವಸಂಸ್ಥೆಯ ಪರವಾಗಿ ಮಾತನಾಡಲು ಅಲ್ಲ.

ಇಸ್ರೇಲ್ ಈ ತಂಡದೊಂದಿಗೆ ಸಹಕರಿಸಲು ನಿರಾಕರಿಸಿದೆ ಮತ್ತು ವಿಶ್ವಸಂಸ್ಥೆಯ ಮಾನವ ಮಂಡಳಿ ಸಮಿತಿ ಇಸ್ರೇಲ್ ವಿರೋಧಿ ಪಕ್ಷಪಾತವನ್ನು ಹೊಂದಿದೆ ಎಂದು ಆರೋಪಿಸಿದೆ. ಈ ವರ್ಷದ ಆರಂಭದಲ್ಲಿ, ಇಸ್ರೇಲ್‌ನ ಪ್ರಮುಖ ಮಿತ್ರ ರಾಷ್ಟ್ರವಾದ ಅಮೆರಿಕ ಮಾನವ ಹಕ್ಕುಗಳ ಮಂಡಳಿಯಿಂದ ಹೊರನಡೆದಿತ್ತು.

ಎರಡನೇ ಮಹಾಯುದ್ಧ ಮತ್ತು ಹತ್ಯಾಕಾಂಡ ಅಂತ್ಯಗೊಂಡ ಮೂರು ವರ್ಷಗಳ ನಂತರ, ಅಂದರೆ, 1948 ರಲ್ಲಿ ನಡೆದ, ಆಡುಮಾತಿನಲ್ಲಿ ‘ಜನಾಂಗೀಯ ಹತ್ಯೆ ಸಮಾವೇಶ’ ಎಂದು ಕರೆಯಲ್ಪಡುವ ಅಂತಾರಾಷ್ಟ್ರೀಯ ಸಮಾವೇಶದಡಿಯಲ್ಲಿ ವ್ಯಾಖ್ಯಾನಿಸಲಾದ ಐದು ‘ಜನಾಂಗೀಯ ಹತ್ಯೆ ಕೃತ್ಯಗಳಲ್ಲಿ’ ನಾಲ್ಕನ್ನು ಇಸ್ರೇಲ್ ಮಾಡಿದೆ ಎಂದು ತಜ್ಞರ ತಂಡ ಹೇಳಿದೆ.

“ಗಾಝಾದಲ್ಲಿ ನಡೆದ ನರಮೇಧಕ್ಕೆ ಇಸ್ರೇಲ್ ಕಾರಣ ಎಂದು ತಂಡವು ಕಂಡುಕೊಂಡಿದೆ” ಎಂದು ತಂಡದ ಅಧ್ಯಕ್ಷೆ ಪಿಳ್ಳೈ ತಿಳಿಸಿದ್ದಾರೆ. ‘ಜನಾಂಗೀಯ ಹತ್ಯೆ ಸಮಾವೇಶ’ದಲ್ಲಿ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸುವ ಕೃತ್ಯಗಳ ಮೂಲಕ ಗಾಝಾದಲ್ಲಿರುವ ಪ್ಯಾಲೆಸ್ತೀನಿಯರನ್ನು ನಾಶಮಾಡುವ ಉದ್ದೇಶ ಇಸ್ರೇಲ್‌ಗೆ ಇದೆ ಎಂಬುದು ಸ್ಪಷ್ಟವಾಗಿದೆ ಎಂದಿದ್ದಾರೆ.

ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...