HomeUncategorizedಇಸ್ರೇಲ್ ಸಂಘರ್ಷ: ಪ್ಯಾಲೆಸ್ತೀನಿಯರಿಗೆ ಬೆಂಬಲ ಸೂಚಿಸಿದ ಕಾಂಗ್ರೆಸ್

ಇಸ್ರೇಲ್ ಸಂಘರ್ಷ: ಪ್ಯಾಲೆಸ್ತೀನಿಯರಿಗೆ ಬೆಂಬಲ ಸೂಚಿಸಿದ ಕಾಂಗ್ರೆಸ್

- Advertisement -
- Advertisement -

ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷವು ಇಸ್ರೇಲ್ – ಪ್ಯಾಲೆಸ್ತೀನ್ ಹೋರಾಟದ ನಡುವೆ ತಕ್ಷಣದ ಕದನ ವಿರಾಮಕ್ಕೆ ಕರೆ ನೀಡಿತು ಎಂದು indiatoday.in ವರದಿ ಮಾಡಿದೆ.

ಕಾಂಗ್ರೆಸ್ ಪಕ್ಷವು “ಪ್ಯಾಲೆಸ್ತೀನ್ ಜನರ ಭೂಮಿ, ಸ್ವ-ಸರ್ಕಾರ, ಘನತೆ ಮತ್ತು ಗೌರವದಿಂದ ಬದುಕುವ ಹಕ್ಕುಗಳಿಗಾಗಿ” ತನ್ನ ಬೆಂಬಲವನ್ನು ಸೂಚಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಪಕ್ಷವು ” ಪ್ರಸ್ತುತ ಸಂಘರ್ಷಕ್ಕೆ ಕಾರಣವಾದ ಸಮಸ್ಯೆಗಳು ಸೇರಿದಂತೆ ಎಲ್ಲಾ ಬಾಕಿ ಉಳಿದಿರುವ ವಿಷಯಗಳ ಬಗ್ಗೆ ಮಾತುಕತೆಗಳನ್ನು ಪ್ರಾರಂಭಿಬೇಕು” ಎಂದು ತಿಳಿಸಿದೆ.

ಈ ಕುರಿತು ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ”ಪ್ಯಾಲೆಸ್ತೀನ್ ಜನರ ಕಾನೂನುಬದ್ಧ ಆಕಾಂಕ್ಷೆಗಳನ್ನು ಮಾತುಕತೆಯ ಮೂಲಕ ಪೂರೈಸಬೇಕು ಎಂದು ತಮ್ಮ ಪಕ್ಷವು ಯಾವಾಗಲೂ ನಂಬುತ್ತದೆ. ಇಸ್ರೇಲ್ ಜನರ ಮೇಲಿನ ಕ್ರೂರ ದಾಳಿಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಖಂಡಿಸುತ್ತದೆ” ಎಂದು ಹೇಳಿದರು.

ಇಸ್ರೇಲ್ ಮತ್ತು ಹಮಾಸ್ ಹೋರಾಟಗಾರರ ಗುಂಪಿನ ನಡುವಿನ ಸಂಘರ್ಷ ಸೋಮವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಈ ಬಗ್ಗೆ ಸಭೆಯಲ್ಲಿ ಅಂಗೀಕರಿಸಿದ ನಿರ್ಣಯದಲ್ಲಿ, ಕಳೆದ ಎರಡು ವರ್ಷಗಳಲ್ಲಿ ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಬಗ್ಗೆ CWC ದುಃಖವನ್ನು ವ್ಯಕ್ತಪಡಿಸುತ್ತದೆ ಎಂದು ಕಾಂಗ್ರೆಸ್‌ ಹೇಳಿದೆ.

”ಪ್ಯಾಲೆಸ್ತೀನ್ ಜನರ ಭೂಮಿ, ಸ್ವ-ಸರ್ಕಾರ, ಘನತೆ ಮತ್ತು ಗೌರವದಿಂದ ಬದುಕುವ ಹಕ್ಕುಗಳಿಗಾಗಿ ತನ್ನ ಬೆಂಬಲವನ್ನು ಸೂಚಿಸಿದೆ” ಎಂದು ನಿರ್ಣಯವು ಹೇಳಿದೆ.

”ಯಾವುದೇ ರೀತಿಯ ಹಿಂಸಾಚಾರವು ಎಂದಿಗೂ ಯಾವುದೇ ಪರಿಹಾರವನ್ನು ನೀಡುವುದಿಲ್ಲ ಮತ್ತು ಅದು ನಿಲ್ಲಬೇಕು” ಎಂದು ಹೇಳಿದರು.

ಗಾಜಾ ಪಟ್ಟಿಯಲ್ಲಿ, ಇಸ್ರೇಲ್‌ನ ಪ್ರತಿದಾಳಿಯಲ್ಲಿ ಸುಮಾರು 500 ಸಾವುಗಳು ಮತ್ತು 2,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಇದನ್ನೂ ಓದಿ: ಕದ್ದ ಭೂಮಿಯಲ್ಲಿ ಇಸ್ರೇಲ್ ನಿರ್ಮಾಣ, ಭಾರತವು ಪ್ಯಾಲೆಸ್ತೀನ್ ಪರ ನಿಲ್ಲಬೇಕು- ನಟ ಚೇತನ್ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...