Homeಮುಖಪುಟಲೆಬನಾನ್ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್ : ಮತ್ತೆ 37 ಮಂದಿ ಸಾವು, ಹಲವರಿಗೆ ಗಾಯ

ಲೆಬನಾನ್ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್ : ಮತ್ತೆ 37 ಮಂದಿ ಸಾವು, ಹಲವರಿಗೆ ಗಾಯ

ಕಳೆದ 24 ಗಂಟೆಯಲ್ಲಿ ಬೈರುತ್, ಗಾಝಾ, ಪಶ್ಚಿಮ ದಂಡೆ ಮೇಲೆ ಆಕ್ರಮಣ

- Advertisement -
- Advertisement -

ಲೆಬನಾನ್, ಗಾಝಾ ಮತ್ತು ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲಿ ಪಡೆಗಳ ಆಕ್ರಮಣ ಮುಂದುವರೆದಿದೆ.

ಕಳೆದ 24 ಗಂಟೆಗಳಲ್ಲಿ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳಲ್ಲಿ 37 ಮಂದಿ ಸಾವನ್ನಪ್ಪಿದ್ದು, 151 ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ತಿಳಿಸಿದೆ.

ಲೆಬಾನಾನ್ ರಾಜಧಾನಿ ಬೈರುತ್‌ನ ಜನನಿಬಿಡ ಧೈಯಾ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಇಸ್ರೇಲ್ ಸರಣಿ ಬಾಂಬ್ ದಾಳಿ ನಡೆಸಿದೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಹೆಜ್ಬುಲ್ಲಾ-ಇಸ್ರೇಲ್ ಸಂಘರ್ಷ ಪ್ರಾರಂಭಗೊಂಡ ಬಳಿಕ ನಡೆದ ಅತೀ ದೊಡ್ಡ ದಾಳಿ ಇದು ಎನ್ನಲಾಗಿದೆ.

ಇತ್ತೀಚೆಗೆ ಹತ್ಯೆಗೀಡಾದ ಹೆಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಅವರ ಸೋಧರ ಸಂಬಂಧಿ ಹಾಗೂ ನಸ್ರಲಾ ಅವರ ಉತ್ತರಾಧಿಕಾರಿ ಎಂದು ಹೇಳಲಾಗುತ್ತಿರುವ ಸೈಫುದ್ದೀನ್ ಗುರಿಯಾಗಿಸಿಕೊಂಡು ಬೈರುತ್‌ನ ಭೂಗತ ಬಂಕರ್ ಮೇಲೆ ಇಸ್ರೇಲ್ ದಾಳಿ ನಡೆಸಿದೆ.

ಮತ್ತೊಂದೆಡೆ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ತುಲ್ಕರೆಮ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲಿ ಜೆಟ್ ಫೈಟರ್ ನಡೆಸಿದ ದಾಳಿಯಲ್ಲಿ ಕನಿಷ್ಠ 18 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ.

ಎರಡು ದಿನಗಳಲ್ಲಿ ಗಾಝಾ ಪಟ್ಟಿಯಲ್ಲಿ ಇಸ್ರೇಲಿ ಪಡೆಗಳು ಮೂರು ಯುಎನ್ ನಡೆಸುವ ಶಾಲಾ ಆಶ್ರಯಗಳ ಮೇಲೆ ದಾಳಿ ನಡೆಸಿದ್ದರಿಂದ ಕನಿಷ್ಠ 21 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಪ್ಯಾಲೆಸ್ತೀನ್ ನಿರಾಶ್ರಿತರಿಗಾಗಿ ಕೆಲಸ ಮಾಡುವ ವಿಶ್ವ ಸಂಸ್ಥೆಯ ಏಜೆನ್ಸಿ ಯುಎನ್‌ಆರ್‌ಡಬ್ಲ್ಯೂಎನ ಮುಖ್ಯಸ್ಥರು ತಿಳಿಸಿದ್ದಾರೆ.

ಇರಾನ್ ಪ್ರಾದೇಶಿಕ ಯುದ್ಧವನ್ನು ಬಯಸುವುದಿಲ್ಲ ಎಂದು ಕತಾರ್ ಮೂಲಕ ವಾಷಿಂಗ್ಟನ್‌ಗೆ ಸಂದೇಶವನ್ನು ರವಾನಿಸಿದೆ. ಆದರೆ ‘ಏಕಪಕ್ಷೀಯ ಸ್ವಯಂ ಸಂಯಮದ ಹಂತವು ಕೊನೆಗೊಂಡಿದೆ’ ಎಂದು ತಿಳಿಸಿದೆ ಅಲ್ ಜಝೀರಾ ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್‌ನಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗೆ 41,788 ಜನರು ಸಾವನ್ನಪ್ಪಿದ್ದಾರೆ ಮತ್ತು 96,794 ಜನರು ಗಾಯಗೊಂಡಿದ್ದಾರೆ. ಇದಕ್ಕೂ ಮುನ್ನ ಇಸ್ರೇಲ್‌ ರಾಜಧಾನಿ ಟೆಲ್‌ ಅವೀವ್ ಮೇಲೆ ಹಮಾಸ್ ನಡೆಸಿದ ದಾಳಿಯಲ್ಲಿ 1,139 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರನ್ನು ಹಮಾಸ್ ಒತ್ತೆಯಾಳಾಗಿಟ್ಟುಕೊಂಡಿತ್ತು.

ಇದನ್ನೂ ಓದಿ : ಉತ್ತರ ಪ್ರದೇಶ: ಮಿರ್ಜಾಪುರದಲ್ಲಿ ಟ್ರಕ್-ಟ್ರಾಕ್ಟರ್ ಡಿಕ್ಕಿಯಿಂದ 10 ಮಂದಿ ಕಾರ್ಮಿಕರು ಸಾವು, ಮೂವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...