Homeಅಂತರಾಷ್ಟ್ರೀಯಗಾಝಾ: ಆಹಾರ ಪೂರೈಕೆಗೆ ಇಸ್ರೇಲ್ ಅಡ್ಡಿ: ಹಸಿವಿನಿಂದ ಸಾಯುತ್ತಿರುವ ಜನರು

ಗಾಝಾ: ಆಹಾರ ಪೂರೈಕೆಗೆ ಇಸ್ರೇಲ್ ಅಡ್ಡಿ: ಹಸಿವಿನಿಂದ ಸಾಯುತ್ತಿರುವ ಜನರು

- Advertisement -
- Advertisement -

ಯುದ್ಧ ಪೀಡಿತ ಗಾಝಾದಲ್ಲಿ ಆಹಾರ ವಸ್ತುಗಳು ಸೇರಿದಂತೆ ಅಗತ್ಯ ಸಾಮಗ್ರಿಗಳ ಸರಬರಾಜಿಗೆ ಇಸ್ರೇಲ್ ವಿಧಿಸಿರುವ ನಿರ್ಬಂಧ ಮುಂದುವರಿದಿದೆ. ಪರಿಣಾಮ ಹಸಿವಿನಿಂದ ಜನರು ಸಾಯುತ್ತಿದ್ದಾರೆ.

ಮತ್ತೊಂದೆಡೆ ಮಾನವ ಹಕ್ಕುಗಳ ಸಂಸ್ಥೆಗಳು ವಿತರಿಸುತ್ತಿರುವ ಆಹಾರ ಪಡೆಯಲು ನಿಂತವರನ್ನೇ ಗುರಿಯಾಗಿಸಿ ಇಸ್ರೇಲ್ ಪಡೆಗಳು ದಾಳಿ ಮಾಡುತ್ತಿವೆ.

ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯಲ್ಲಿ 35 ದಿನಗಳ ಮಗು ಆಹಾರ ಸಿಗದೆ, ಅಪೌಷ್ಟಿಕತೆಯಿಂದ ಸಾವನ್ನಪ್ಪಿದೆ ಎಂದು ಆಸ್ಪತ್ರೆಯ ನಿರ್ದೇಶಕ ಮುಹಮ್ಮದ್ ಅಬು ಸಲ್ಮಿಯಾ ಅಲ್ ಜಝೀರಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಶನಿವಾರ ಆಸ್ಪತ್ರೆಯಲ್ಲಿ ಹಸಿವಿನಿಂದ ಸಾವನ್ನಪ್ಪಿದ ಇಬ್ಬರಲ್ಲಿ ಈ ಮಗು ಕೂಡ ಸೇರಿದೆ.

ಹಸಿವಿನಿಂದ ಜೀವನ್ಮರಣ ಹೋರಾಟ ನಡೆಸುತ್ತಿರುವ ಜನರಿಂದ ಆಸ್ಪತ್ರೆಯ ತುರ್ತು ವಾರ್ಡ್‌ಗಳು ತುಂಬಿ ತುಳುಕುತ್ತಿವೆ. ಪ್ರತಿನಿತ್ಯ ಹಲವು ಸಾವುಗಳು ಸಂಭವಿಸುತ್ತಿವೆ. 17,000 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ಹೇಳಿದೆ.

ಈ ನಡುವೆ ಇಸ್ರೇಲಿ ಪಡೆಗಳು ದಾಳಿ ಮುಂದುವರಿಸಿವೆ. ಶನಿವಾರ ಬೆಳಗಿನ ಜಾವದಿಂದ ಸಂಜೆಯವರೆಗೆ ಕನಿಷ್ಠ 116 ಜನರು ಇಸ್ರೇಲ್ ದಾಳಿಗೆ ಸಾವನ್ನಪ್ಪಿದ್ದಾರೆ. ಈ ಪೈಕಿ 38 ಜನರನ್ನು ಅಮೆರಿಕ ಬೆಂಬಲಿತ ಗಾಝಾ ಹ್ಯುಮಾನಿಟೇರಿಯನ್ ಫೌಂಡೇಶನ್‌ನ (ಜಿಹೆಚ್‌ಎಫ್‌) ಸಹಾಯ ಕೇಂದ್ರಗಳಲ್ಲಿ ಆಹಾರ ಪಡೆಯಲು ನಿಂತಿದ್ದಾಗ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ವರದಿಗಳು ಹೇಳಿವೆ.

ದಕ್ಷಿಣ ಗಾಝಾದಲ್ಲಿರುವ ಖಾನ್ ಯೂನಿಸ್‌ನ ನೈಋತ್ಯಕ್ಕೆ ಮತ್ತು ರಫಾದ ವಾಯುವ್ಯಕ್ಕೆ ಇರುವ ಆಹಾರ ವಿತರಣಾ ಕೇಂದ್ರದ ಬಳಿ ಈ ಸಾವುಗಳು ಸಂಭವಿಸಿವೆ ಎಂದು ನಾಗರಿಕ ರಕ್ಷಣಾ ಸಂಸ್ಥೆಯ ವಕ್ತಾರ ಮಹ್ಮದ್ ಬಸ್ಸಲ್ ಹೇಳಿದ್ದಾರೆ.

ಮೇ ಅಂತ್ಯದಲ್ಲಿ ಜಿಹೆಚ್‌ಎಫ್‌ ತನ್ನ ಕೇಂದ್ರಗಳನ್ನುನ ತೆರೆದು ಆಹಾರ ವಿತರಿಸಲು ಪ್ರಾರಂಭಿಸಿದೆ. ಅಂದಿನಿಂದ ಇಂದಿನವರೆಗೆ ಆಹಾರಕ್ಕೆ ಕಾಯುತ್ತಿದ್ದ ಸುಮಾರು 900 ಜನರನ್ನು ಇಸ್ರೇಲಿ ಪಡೆಗಳು ಮತ್ತು ಖಾಸಗಿ ಮಿಲಿಟರಿ ಗುತ್ತಿಗೆದಾರರು ಹತ್ಯೆ ಮಾಡಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ತಿಳಿಸಿದೆ.

ಶನಿವಾರ ಜಿಹೆಚ್‌ಎಫ್‌ ಕೇಂದ್ರಗಳ ಬಳಿ ದಾಳಿ ನಡೆದಿವೆ ಎಂಬುವುದನ್ನು ಜಿಹೆಚ್‌ಎಫ್‌ ನಿರಾಕರಿಸಿದೆ. ನಮ್ಮ ಕೇಂದ್ರದ ತುಂಬಾ ದೂರದಲ್ಲಿ, ಅದೂ ನಮ್ಮ ಕೇಂದ್ರ ತೆರೆಯುವ ಮೊದಲೇ ದಾಳಿ ನಡೆದಿದೆ ಎಂದು ಹೇಳಿದೆ. ಘಟನೆಯನ್ನು ಪರಿಶೀಲಿಸುತ್ತಿರುವುದಾಗಿ ಇಸ್ರೇಲಿ ಸೇನೆ ತಿಳಿಸಿದೆ.

ಗಾಝಾದಲ್ಲಿರುವ ಪ್ಯಾಲೆಸ್ತೀನಿಯರು ‘ತೀವ್ರ ಕ್ಷಾಮದ ಅಪಾಯವನ್ನು ಎದುರಿಸುತ್ತಿದ್ದಾರೆ’ ಎಂದು ಅಂತಾರಾಷ್ಟ್ರೀಯ ರೆಡ್‌ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಗನ್ ಚಾಪಗೈನ್ ಎಚ್ಚರಿಸಿದ್ದಾರೆ.

“ಮೂಲಭೂತ ಮಾನವೀಯ ನೆರವು ಪಡೆಯಲು ಯಾರೂ ತಮ್ಮ ಪ್ರಾಣವನ್ನೇ ಪಣಕ್ಕಿಡಬೇಕಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಮಾರುಕಟ್ಟೆಗಳಲ್ಲಿ ಅಥವಾ ವಿತರಣಾ ಕೇಂದ್ರಗಳಲ್ಲಿ ಮೂಲಭೂತ ವಸ್ತುಗಳು ಲಭ್ಯವಿಲ್ಲ. ಹಿಟ್ಟಿನಂತಹ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದಾಗಿ 2.3 ಮಿಲಿಯನ್ ಜನರು ತಮ್ಮ ದೈನಂದಿನ ಪೌಷ್ಠಿಕಾಂಶದ ಅಗತ್ಯಗಳನ್ನು ಪೂರೈಸುವುದು ಅಸಾಧ್ಯವಾಗಿದೆ ಎಂದಿದ್ದಾರೆ.

ಸರಣಿ ದಾಳಿಗಳು, 116 ಜನರು ಸಾವು 

ಶನಿವಾರ ಗಾಝಾದಲ್ಲಿ ಇಸ್ರೇಲ್ ತನ್ನ ಕ್ರೂರ ದಾಳಿಯನ್ನು ಮುಂದುವರೆಸಿತ್ತು. ಸ್ಥಳಾಂತರಗೊಂಡವರ ಡೇರೆಗಳು ಮತ್ತು ಆ ಪ್ರದೇಶಾದ್ಯಂತ ಮನೆಗಳ ಮೇಲೆ ಬಾಂಬ್ ದಾಳಿ ಮಾಡಿದೆ. ಇದರಿಂದ ಕನಿಷ್ಠ 116 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ.

ದಕ್ಷಿಣ ಖಾನ್ ಯೂನಿಸ್ ಬಳಿಯ ಬನಿ ಸುಹೇಲಾ ಮೇಲೆ ಇಸ್ರೇಲಿ ದಾಳಿ ನಡೆಸಿದ ಸ್ಥಳದಿಂದ ನಾಲ್ಕು ಶವಗಳನ್ನು ಹೊರ ತೆಗೆಯಲಾಗಿದೆ ಎಂದು ನಾಸರ್ ಆಸ್ಪತ್ರೆಯ ಮೂಲಗಳು ತಿಳಿಸಿದ್ದಾಗಿ ಅಲ್ ಜಝೀರಾ ವರದಿ ಮಾಡಿದೆ.

ಖಾನ್ ಯೂನಿಸ್‌ನಲ್ಲಿ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯರು ಇದ್ದ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಿಂದ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ.

ಮಧ್ಯ ಗಾಝಾದ ಅಜ್-ಜವಾಯ್ದಾ ಪಟ್ಟಣದಲ್ಲಿದ್ದ ಮನೆಯ ಮೇಲೆ ದಾಳಿ ಇಸ್ರೇಲ್ ದಾಳಿ ಮಾಡಿದ್ದು, ನುಸೇರತ್ ಪೊಲೀಸ್ ನಿರ್ದೇಶಕ ಕರ್ನಲ್ ಒಮರ್ ಸಯೀದ್ ಅಕ್ಲ್ ಮತ್ತು ಅವರ 11 ಕುಟುಂಬ ಸದಸ್ಯರನ್ನು ಹತ್ಯೆ ಮಾಡಿವೆ ಎಂದು ಗಾಝಾದ ಆಂತರಿಕ ಸಚಿವಾಲಯ ತಿಳಿಸಿದೆ.

ಗಾಝಾ ನಗರದ ಜೈಟೌನ್ ಸಮೀಪ ಇಸ್ರೇಲಿ ನಡೆಸಿದ ಎರಡು ವೈಮಾನಿಕ ದಾಳಿಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಲ್-ಅಹ್ಲಿ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

ಪ್ಯಾಲೆಸ್ತೀನಿಯನ್ ರೆಡ್ ಕ್ರೆಸೆಂಟ್ ಪ್ರಕಾರ, ಗಾಝಾ ನಗರದ ತಾಲ್ ಅಲ್-ಹವಾ ಸಮೀಪ ಇಸ್ರೇಲಿ ನಡೆಸಿದ ವಾಯುದಾಳಿಯಲ್ಲಿ ಐವರು ಸಾವನ್ನಪ್ಪಿದ್ದಾರೆ.

ಉತ್ತರ ಗಾಝಾದ ಜಬಾಲಿಯಾ ಆನ್-ನಜ್ಲಾ ಸಮೀಪ ಇಸ್ರೇಲ್ ನಡೆಸಿದ ಶೆಲ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಪ್ಯಾಲೆಸ್ತೀನಿಯನ್ ಕೈದಿಗಳ ಮಾಧ್ಯಮ ಕಚೇರಿಯ ಪ್ರಕಾರ, ಇಸ್ರೇಲಿ ಪಡೆಗಳು ಗಾಝಾ ಕರಾವಳಿಯಲ್ಲಿ ಮೂವರು ಪ್ಯಾಲೆಸ್ತೀನಿಯನ್ ಮೀನುಗಾರರ ಮೇಲೆ ಗುಂಡು ಹಾರಿಸಿ ಬಂಧಿಸಿವೆ.

2007ರಲ್ಲಿ ಹಮಾಸ್ ಗಾಝಾವನ್ನು ವಶಪಡಿಸಿಕೊಂಡಾಗಿನಿಂದ ಇಸ್ರೇಲಿ ಸೇನೆಯು ಗಾಝಾದ ಮೇಲೆ ನೌಕಾ ದಿಗ್ಬಂಧನವನ್ನು ಕಾಯ್ದುಕೊಂಡಿದೆ. ಅಕ್ಟೋಬರ್ 2023ರಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಇದು ಬಿಗಿಗೊಂಡಿವೆ.

ನೈಋತ್ಯ ನೈಜರ್‌ನಲ್ಲಿ ಭಯೋತ್ಪಾದಕ ದಾಳಿ; ಇಬ್ಬರು ಭಾರತೀಯರು ಬಲಿ, ಓರ್ವನ ಅಪಹರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...