Homeಮುಖಪುಟಇಸ್ರೇಲ್‌ ರಾಯಭಾರಿ ಕಚೇರಿ ಬಳಿ ಸ್ಪೋಟ ಪ್ರಕರಣ: ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಇಸ್ರೇಲ್‌ ರಾಯಭಾರಿ ಕಚೇರಿ ಬಳಿ ಸ್ಪೋಟ ಪ್ರಕರಣ: ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

- Advertisement -
- Advertisement -

ದೆಹಲಿಯಲ್ಲಿನ ಇಸ್ರೇಲ್‌ ರಾಯಭಾರಿ ಕಚೇರಿ ಬಳಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಸ್ಫೋಟಕ ವಸ್ತುಗಳ ಕಾಯ್ದೆಯ ಸೆಕ್ಷನ್ 3ರ (ಜೀವ ಅಥವಾ ಆಸ್ತಿಗೆ ಹಾನಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಡಿ.26ರ ಸಂಜೆ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು 10 ಮಂದಿ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ಸ್ಫೋಟ ಸಂಭವಿಸುವ ಕೆಲಹೊತ್ತಿಗೂ ಮುನ್ನ ಘಟನಾ ಸ್ಥಳದಲ್ಲಿ ಓಡಾಡುತ್ತಿದ್ದ ವ್ಯಕ್ತಿಗಳ ಪಟ್ಟಿಯನ್ನು ಮೊಬೈಲ್‌ ನೆಟ್‌ವರ್ಕ್‌ ಆಧಾರದಲ್ಲಿ ಪೊಲೀಸರು ಸಿದ್ದಪಡಿಸಿದ್ದಾರೆ ಮತ್ತು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಘಟನಾ ಸ್ಥಳದ ಸಮೀಪ ಸಕ್ರಿಯವಾಗಿದ್ದ ಮೊಬೈಲ್‌ ಫೋನ್‌ಗಳು ಹಾಗೂ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಕೆಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ಮತ್ತು ದೆಹಲಿ ಪೊಲೀಸ್‌ ಇಲಾಖೆಯ ವಿಧಿವಿಜ್ಞಾನ ತಜ್ಞರು ಸ್ಫೋಟದ ಸ್ಥಳದಲ್ಲಿ ದೊರೆತ ಕೆಲ ವಸ್ತುಗಳು ಮತ್ತು ಮಣ್ಣಿನ ಮಾದರಿ ಸಂಗ್ರಹಿಸಿದ್ದಾರೆ. ಪರೀಕ್ಷೆಯ ವರದಿ ಇನ್ನಷ್ಟೇ ಬರಬೇಕಿದೆ. ಅದಾದ ನಂತರ ಸ್ಫೋಟಕಗಳ ಬಗ್ಗೆ ಖಚಿತ ಮಾಹಿತಿ ಸಿಗಲಿದೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.

ದೆಹಲಿಯಲ್ಲಿನ ಇಸ್ರೇಲ್‌ ರಾಯಭಾರ ಕಚೇರಿ ಬಳಿ  ಡಿ.26ರ ಸಂಜೆ 5:48 ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಪೋಟವನ್ನು ಇಸ್ರೇಲ್‌ ರಾಯಭಾರ ಕಚೇರಿಯ ವಕ್ತಾರ ಗೈ ನಿರ್ ದೃಢಪಡಿಸಿದ್ದರು.

ಘಟನೆ ಸಂಬಂಧ ಪೊಲೀಸರಿಗೆ ಹೇಳಿಕೆ ನೀಡಿರುವ  ಭದ್ರತಾ ಸಿಬ್ಬಂದಿ ತೇಜು ಛಿತ್ರಿ, ಸ್ಥಳದಲ್ಲಿ ಭಾರಿ ಶಬ್ದ ಕೇಳಿಸಿತು. ಆರಂಭದಲ್ಲಿ ಟಯರ್ ಒಡೆದಿರಬಹುದೆಂದು ಭಾವಿಸಿದ್ದೆ. ಹೊರಗಡೆ ಬಂದು ನೋಡಿದಾಗ ಮರದ ತುದಿಯಿಂದ ಹೊಗೆ ಕಾಣಿಸಿತು ಎಂದು ಹೇಳಿದ್ದರು.

ಇಸ್ರೇಲ್‌ ರಾಯಭಾರ ಕಚೇರಿಯ ಉಪ ಮುಖ್ಯಸ್ಥ ಓಹಾದ್ ನಕಾಶ್ ಕಯ್ನಾರ್ ಘಟನೆ ಬಗ್ಗೆ ಪ್ರತಿಕ್ರಿಯಿಸಿ, ನಮ್ಮ ಎಲ್ಲಾ ರಾಜತಾಂತ್ರಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಈ ಘಟನೆ ಬಗ್ಗೆ ಮತ್ತಷ್ಟು ತನಿಖೆಗೆ ದೆಹಲಿ ಭದ್ರತಾ ಅಧಿಕಾರಿಗಳೊಂದಿಗೆ ನಮ್ಮ ಭದ್ರತಾ ತಂಡಗಳು ಸಂಪೂರ್ಣ ಸಹಕಾರ ನೀಡುತ್ತಿವೆ ಎಂದು ಹೇಳಿದ್ದರು.

ಸ್ಫೋಟದ ಸ್ಥಳದಲ್ಲಿ ಇಸ್ರೇಲ್‌ ರಾಯಭಾರಿಯನ್ನು ಉದ್ದೇಶಿಸಿ “ನಿಂದನೀಯ” ಒಂದು ಪುಟದ ಇಂಗ್ಲಿಷ್‌ನಲ್ಲಿ ಬರೆದ ಪತ್ರ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದವು. ಇದು ಯಾವುದೋ ಸಂಘಟನೆಗೆ ಸಂಬಂಧಿಸಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು ಎಂದು ದಿ ವೈರ್‌ ವರದಿ ಮಾಡಿತ್ತು.

 

ಇದನ್ನು ಓದಿ: ಗೋಧ್ರೋತ್ತರ ಗಲಭೆ: 131 ಸಾಕ್ಷಿಗಳ ಭದ್ರತೆ ವಾಪಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...