Homeಅಂತರಾಷ್ಟ್ರೀಯಇಸ್ರೇಲ್‌-ಗಾಝಾ ಯುದ್ಧದ ವೇಳೆ ಅತ್ಯಧಿಕ ಪತ್ರಕರ್ತರ ಹತ್ಯೆ: ಸಿಪಿಜೆ ವರದಿ

ಇಸ್ರೇಲ್‌-ಗಾಝಾ ಯುದ್ಧದ ವೇಳೆ ಅತ್ಯಧಿಕ ಪತ್ರಕರ್ತರ ಹತ್ಯೆ: ಸಿಪಿಜೆ ವರದಿ

- Advertisement -
- Advertisement -

2023ರಲ್ಲಿ ವಿಶ್ವದಾದ್ಯಂತ ಕೊಲ್ಲಲ್ಪಟ್ಟ 99 ಪತ್ರಕರ್ತರು ಮತ್ತು ಮಾದ್ಯಮ ಕಾರ್ಯಕರ್ತರಲ್ಲಿ ಮುಕ್ಕಾಲು ಭಾಗದಷ್ಟು ಜನರು ಇಸ್ರೇಲ್-ಗಾಝಾ ಯುದ್ಧದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪತ್ರಕರ್ತರನ್ನು ರಕ್ಷಿಸುವ ಸಮಿತಿ (ಸಿಪಿಜೆ) ತಿಳಿಸಿದ್ದು, ಇಸ್ರೇಲ್‌ ಗಾಝಾದಲ್ಲಿ ನಡೆಸಿರುವ ಹತ್ಯಾಕಾಂಡದಲ್ಲಿ ಪತ್ರಕರ್ತರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಸಂತ್ರಸ್ತರಾಗಿದ್ದಾರೆ ಎಂಬವುದನ್ನು ವರದಿಯು ಬಹಿರಂಗಪಡಿಸಿದೆ.

ಇದಲ್ಲದೆ 2023ರ ಇಡೀ ವರ್ಷದಲ್ಲಿ ಹತ್ಯೆಗೀಡಾದ ಪತ್ರಕರ್ತರಿಗಿಂತ ಮೂರು ತಿಂಗಳಲ್ಲಿ ಸಂಘರ್ಷವು ಗಾಝಾದಲ್ಲಿ ಹೆಚ್ಚು ಪತ್ರಕರ್ತರನ್ನು ಬಲಿ ತೆಗೆದುಕೊಂಡಿದೆ ಎಂದು CPJ ವರದಿ ಹೇಳಿದೆ. ಗಾಝಾದಲ್ಲಿ ನಾಗರಿಕರಲ್ಲದೆ ಅನೇಕ ಪತ್ರಕರ್ತರನ್ನು ಮತ್ತು ಅವರ ಕುಟುಂಬಸ್ಥರನ್ನು ಕೊಲ್ಲಲಾಯಿತು, ಆದರೆ ಇಸ್ರೇಲ್‌ ಮಿಲಿಟರಿ ಅಧಿಕಾರಿಗಳು ಪತ್ರಕರ್ತರನ್ನು ಗುರಿಯಾಗಿಸಿಕೊಂಡಿರುವುದನ್ನು ನಿರಾಕರಿಸಿದ್ದಾರೆ ಮತ್ತು ಪತ್ರಕರ್ತರ ಹತ್ಯೆಗಳ ಬಗ್ಗೆ ಪ್ರಶ್ನಿಸಿದಾಗ ಅಲ್ಪ ಮಾಹಿತಿಯನ್ನು ಮಾತ್ರ ನೀಡಿದ್ದಾರೆ ಎಂದು ಹೇಳಿದ್ದಾರೆ.

1997ರಿಂದ 2023ರವರೆಗೆ ಪತ್ರಕರ್ತರ ಹತ್ಯೆಗಳು ವರದಿಯಾದ ದೇಶಗಳಲ್ಲಿ ಭಾರತವು ಸೇರಿದೆ. ಪಟ್ಟಿಯಲ್ಲಿರುವ ಇತರ ದೇಶಗಳಲ್ಲಿ ಇರಾಕ್, ಫಿಲಿಪೈನ್ಸ್, ಮೆಕ್ಸಿಕೊ, ಪಾಕಿಸ್ತಾನ ಮತ್ತು ಸೊಮಾಲಿಯಾ ಸೇರಿವೆ ಎಂದು ವರದಿ ಉಲ್ಲೇಖಿಸಿದೆ.

2023ರ ಜಾಗತಿಕವಾಗಿ ಪತ್ರಕರ್ತರ ಒಟ್ಟು ಸಾವಿನ ಅಂಕಿ-ಅಂಶಗಳು 2015ರಿಂದ ಅತ್ಯಧಿಕವಾಗಿದೆ ಮತ್ತು 2022ರಿಂದ ಸುಮಾರು 44% ಏರಿಕೆಯಾಗಿದೆ. ವರದಿಯ ಪ್ರಕಾರ, ಈ ಸಾವುಗಳು ಪತ್ರಕರ್ತರ ಕರ್ತವ್ಯಕ್ಕೆ ಸಂಬಂಧಿಸಿದೆ, ಪ್ರಸ್ತುತ 8 ಹೆಚ್ಚುವರಿ ಪ್ರಕರಣಗಳು ತನಿಖೆಯಲ್ಲಿವೆ ಎಂದು ವರದಿ ಉಲ್ಲೇಖಿಸಿದೆ.

ಗಾಝಾ, ಇಸ್ರೇಲ್ ಮತ್ತು ಲೆಬನಾನ್‌ನಲ್ಲಿನ ಸಾವುಗಳನ್ನು ಹೊರತುಪಡಿಸಿದರೆ, 2022ಕ್ಕೆ ಹೋಲಿಸಿದರೆ ಪತ್ರಕರ್ತರ ಹತ್ಯೆಗಳು ಗಮನಾರ್ಹವಾಗಿ ಕಡಿಮೆಯಾಗಿದೆ. 2022ರಲ್ಲಿ CPJ ಒಟ್ಟು 69 ಸಾವುಗಳನ್ನು ಪತ್ತೆಹಚ್ಚಿದೆ. ಅದರಲ್ಲಿ 43 ವೃತ್ತಿಗೆ ಸಂಬಂಧಿಸಿದ ಹತ್ಯೆ ನಡೆದಿದೆ ಎಂದು ವರದಿ ಉಲ್ಲೇಖಿಸಿದೆ.

ಆದರೆ, ಇಳಿಮುಖವಾಗುತ್ತಿರುವ ಪತ್ರಕರ್ತರ ಸಾವಿನ ಸಂಖ್ಯೆಯು ಪ್ರಪಂಚದ ಇತರ ಭಾಗಗಳಲ್ಲಿ ಪತ್ರಿಕೋದ್ಯಮವು ಸುರಕ್ಷಿತವಾಗಿದೆ ಎಂಬುವುದರ ಸೂಚನೆಯಲ್ಲ. ವಾಸ್ತವವಾಗಿ ಪತ್ರಕರ್ತರ ವಾರ್ಷಿಕ ಜೈಲು ಜನಗಣತಿ, ಪತ್ರಿಕಾ ಸ್ವಾತಂತ್ರ್ಯದ ಪರಿಸ್ಥಿತಿಗಳ ಬಗೆಗಿನ ಪ್ರಮುಖ ಸೂಚಕ 2022ರ ದಾಖಲೆಯ ಗರಿಷ್ಠ ಮಟ್ಟಕ್ಕೆ ಹತ್ತಿರದಲ್ಲಿದೆ ಎಂದು ವರದಿಯು ತಿಳಿಸಿದೆ.

ಏಷ್ಯಾದಲ್ಲಿ ಅತಿಹೆಚ್ಚು ಸಂಖ್ಯೆಯಲ್ಲಿ ಪತ್ರಕರ್ತರು ಜೈಲಿನಲ್ಲಿದ್ದಾರೆ ಎಂದು ವರದಿಯು ತಿಳಿಸಿದೆ. ಸಿಪಿಜೆ 2023ರ ಜೈಲು ಜನಗಣತಿಯಲ್ಲಿ ಭಾರತದಲ್ಲಿ 7 ಪತ್ರಕರ್ತರನ್ನು ಮೌನಗೊಳಿಸಲು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ (UAPA) ಮತ್ತು ಜಮ್ಮು ಮತ್ತು ಕಾಶ್ಮೀರ ಸಾರ್ವಜನಿಕ ಸುರಕ್ಷತಾ ಕಾಯಿದೆಗಳನ್ನು ಬಳಸಲಾಗಿದೆ ಎಂದು ಸೂಚಿಸುತ್ತದೆ.

ಇದನ್ನು ಓದಿ: ರಾರಾಜಿಸಿದ ಮೋದಿ: ನಿರಾಶೆಗೊಳಿಸಿದ ಬಿಜೆಪಿ ಪ್ರಣಾಳಿಕೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...