Homeಅಂತರಾಷ್ಟ್ರೀಯಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

ಶಾಂತಿ ಒಪ್ಪಂದದ ಬಳಿಕವೂ ಇಸ್ರೇಲ್‌ನಿಂದ ಗಾಝಾ ಮೇಲೆ ವಾಯುದಾಳಿ-ವರದಿ

- Advertisement -
- Advertisement -

ಬರೋಬ್ಬರಿ 67 ಸಾವಿರಕ್ಕೂ ಹೆಚ್ಚು ಅಮಾಯಕರ ಹತ್ಯೆ ಹಾಗೂ ಸುಂದರ ಗಾಝಾವನ್ನು ನರಕವಾಗಿಸಿದ ಬಳಿಕ ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.

ಇಸ್ರೇಲ್ ಗಾಝಾ ಮೇಲೆ ಆಕ್ರಮಣ ಮಾಡಲು ಪ್ರಾರಂಭಿಸಿ ಅಕ್ಟೋಬರ್ 8, 2025ಕ್ಕೆ ಎರಡು ವರ್ಷ ಪೂರ್ಣಗೊಂಡಿದೆ. ಇದರ ಮರುದಿನ, ಅಂದರೆ ಅಕ್ಟೋಬರ್ 9, 2025ರಂದು ಈಜಿಫ್ಟ್‌ನಲ್ಲಿ ನಡೆದ ಗಾಝಾ ಶಾಂತಿ ಮಾತುಕತೆ ಫಲಪ್ರದವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 20 ಅಂಶಗಳ ಶಾಂತಿ ಯೋಜನೆಗೆ ಉಭಯ ಪಕ್ಷಗಳು ಸಹಿ ಹಾಕಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಈ ಹಿಂದೆ ಅನೇಕ ಬಾರಿ ಕದನ ವಿರಾಮ ಜಾರಿಗೆ ಬಂದು ಬಳಿಕ ಅದು ವಿಫಲಗೊಂಡಿತ್ತು. ಆದರೆ, ಈ ಬಾರಿಯ ಶಾಂತಿ ಒಪ್ಪಂದ ಹಿಂದಿಗಿಂತ ಆಶಾದಾಯಕವಾಗಿದೆ. ಇದು ಕೇವಲ ಇಸ್ರೇಲ್-ಪ್ಯಾಲೆಸ್ತೀನ್ ಮಾತ್ರವಲ್ಲದೆ, ಯೆಮನ್, ಲೆಬನಾನ್ ಸೇರಿದಂತೆ ಎಲ್ಲಾ ದೇಶಗಳ ಮೇಲಿನ ಆಕ್ರಮಣ ಕೊನೆಗೊಳಿಸುವ ಒಪ್ಪಂದವಾಗಿದೆ. ಈ ಮೂಲಕ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಶಮನವಾಗುವ ನಿರೀಕ್ಷೆಯಿದೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ಮತ್ತೊಂದೆಡೆ, ಬುಧವಾರ (ಅ.8) ರಾತ್ರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಕದನ ವಿರಾಮ ಒಪ್ಪಂದವು ಸಾಕಷ್ಟು ವಿವರಗಳನ್ನು ಒಳಗೊಂಡಿಲ್ಲ, ಅಂದರೆ ಅದರಲ್ಲಿ ಸ್ಪಷ್ಟವಾದ ಮಾಹಿತಿ ಅಥವಾ ಯೋಜನೆಯ ಕೊರತೆಯಿದೆ. ಜೊತೆಗೆ, ಇದು ಹಲವು ಪ್ರಶ್ನೆಗಳಿಗೆ ಉತ್ತರಿಸದೆ ಉಳಿಸಿದೆ. ಇವು ಇನ್ನೂ ಪರಿಹಾರವಾಗದಿರುವ ಸಮಸ್ಯೆಗಳಾಗಿವೆ. ಈ ಕಾರಣಗಳಿಂದಾಗಿ, ಈ ಒಪ್ಪಂದವು ಹಿಂದಿನ ಶಾಂತಿ ಪ್ರಯತ್ನಗಳಂತೆ ವಿಫಲಗೊಳ್ಳುವ ಸಾಧ್ಯತೆಯೂ ಇದೆ ಎಂದು ವರದಿ ಅಭಿಪ್ರಾಯಪಟ್ಟಿದೆ.

“ನಮ್ಮ ಶಾಂತಿ ಯೋಜನೆಯ ಮೊದಲ ಹಂತಕ್ಕೆ ಇಸ್ರೇಲ್ ಮತ್ತು ಹಮಾಸ್ ಎರಡೂ ಸಹಿ ಹಾಕಿವೆ ಎಂದು ಘೋಷಿಸಲು ನನಗೆ ತುಂಬಾ ಹೆಮ್ಮೆಯಾಗುತ್ತಿದೆ” ಎಂದು ಟ್ರಂಪ್ ತಮ್ಮ ಟ್ರುಥ್ ಸೋಶಿಯಲ್‌ನಲ್ಲಿ ಬುಧವಾರ ಹೇಳಿದ್ದಾರೆ.

“ಇದರರ್ಥ ಎಲ್ಲಾ ಒತ್ತೆಯಾಳುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಮತ್ತು ಇಸ್ರೇಲ್ ಬಲವಾದ, ಬಾಳಿಕೆ ಬರುವ ಮತ್ತು ಶಾಶ್ವತ ಶಾಂತಿಯತ್ತ ಮೊದಲ ಹೆಜ್ಜೆಯಾಗಿ ತಮ್ಮ ಸೈನಿಕರನ್ನು ನಿರ್ದಿಷ್ಟ ಗಡಿ ರೇಖೆಗೆ ಹಿಂತೆಗೆದುಕೊಳ್ಳುತ್ತದೆ” ಎಂದು ಟ್ರಂಪ್ ತಿಳಿಸಿದ್ದಾರೆ.

ಗುರುವಾರ ತಮ್ಮ ಸರ್ಕಾರದ ಸಭೆ ಕರೆದು ಒಪ್ಪಂದಕ್ಕೆ ಅನುಮೋದನೆ ಪಡೆಯುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

“ಶಾಂತಿ ಯೋಜನೆಯ ಮೊದಲ ಹಂತದ ಅನುಮೋದನೆಯೊಂದಿಗೆ, ನಮ್ಮ ಎಲ್ಲಾ ಒತ್ತೆಯಾಳುಗಳನ್ನು ಮನೆಗೆ ಕರೆತರಲಾಗುವುದು” ಎಂದು ನೆತನ್ಯಾಹು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಇದು ಇಸ್ರೇಲ್‌ನ ರಾಜತಾಂತ್ರಿಕ ಯಶಸ್ಸು ಮತ್ತು ರಾಷ್ಟ್ರೀಯ ಮತ್ತು ನೈತಿಕ ಗೆಲುವು” ಎಂದಿದ್ದಾರೆ.

ಯುದ್ಧವನ್ನು ಕೊನೆಗೊಳಿಸಲು ಒಪ್ಪಂದಕ್ಕೆ ಬಂದಿರುವುದನ್ನು ಹಮಾಸ್ ಕೂಡ ದೃಢಪಡಿಸಿದೆ. ಒಪ್ಪಂದವು ಗಾಝಾ ಪ್ರದೇಶದಿಂದ ಇಸ್ರೇಲಿ ಪಡೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ಒತ್ತೆಯಾಳು-ಕೈದಿಗಳ ವಿನಿಮಯವನ್ನು ಒಳಗೊಂಡಿದೆ ಎಂದಿದೆ.

“ನಮ್ಮ ಜನರ ತ್ಯಾಗಗಳು ವ್ಯರ್ಥವಾಗುವುದಿಲ್ಲ ಎಂದು ನಾವು ದೃಢೀಕರಿಸುತ್ತೇವೆ. ನಮ್ಮ ಜನರ ರಾಷ್ಟ್ರೀಯ ಹಕ್ಕುಗಳನ್ನು ಎಂದಿಗೂ ಕೈಬಿಡದಿರುವ ನಮ್ಮ ಪ್ರತಿಜ್ಞೆಗೆ ನಾವು ನಿಷ್ಠರಾಗಿರುತ್ತೇವೆ, ಸ್ವಾತಂತ್ರ್ಯ, ಸ್ವತಂತ್ರತೆ ಮತ್ತು ಸ್ವಯಂ-ನಿರ್ಧಾರದ ಹಕ್ಕು ಸಾಧಿಸುವವರೆಗೆ” ಎಂದು ಹಮಾಸ್ ಹೇಳಿದೆ.

ಅಕ್ಟೊಬರ್ 8, 2023ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗೆ 67 ಸಾವಿರ ಜನರು ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಿದೆ ಎಂದು ಅಂದಾಜಿಸಲಾಗಿದೆ. ಏಕೆಂದರೆ, ಸಾವಿರಾರು ಜನರ ದೇಹಗಳು ಇಸ್ರೇಲ್ ಧ್ವಂಸಗೊಳಿಸಿದ ಕಟ್ಟಡಗಳ ಅವಶೇಷಗಳಡಿ ಹುದುಗಿ ಹೋಗಿರಬಹುದು ಎಂದು ನಂಬಲಾಗಿದೆ.

ಅಕ್ಟೋಬರ್ 7, 2023ರಂದು ಇಸ್ರೇಲ್‌ನ ಟೆಲ್ ಅವೀವ್ ಮೇಲೆ ಹಮಾಸ್ ನಡೆಸಿದ್ದ ದಾಳಿಯಲ್ಲಿ 1,200 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದಾಳಿಯ ವೇಳೆ ಸುಮಾರು 251 ಜನರನ್ನು ಹಮಾಸ್ ಒತ್ತೆಯಾಳಾಗಿ ಗಾಝಾಗೆ ಕರೆ ತಂದಿತ್ತು. ಈ ಪೈಕಿ ಹಲವರನ್ನು ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 48 ಒತ್ತೆಯಾಳುಗಳು ಹಮಾಸ್ ವಶದಲ್ಲಿದ್ದಾರೆ. ಈ ಪೈಕಿ 20 ಜನರು ಇನ್ನೂ ಜೀವಂತ ಇದ್ದಾರೆ ಎಂದು ಅಂದಾಜಿಸಲಾಗಿದೆ.

ಕದನ ವಿರಾಮ ಒಪ್ಪಂದ ಬಳಿಕವೂ ಗಾಝಾ ಮೇಲೆ ದಾಳಿ

ಅಕ್ಟೋಬರ್ 8, 2025 ಬುಧವಾರ ರಾತ್ರಿ ಹಮಾಸ್-ಇಸ್ರೇಲ್ ನಡುವೆ ಕದನ ವಿರಾಮ ಒಪ್ಪಂದವಾಗಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಇದರಿಂದ ಗಾಝಾ ಮೇಲಿನ ಬಾಂಬ್ ದಾಳಿ ಅಂತ್ಯಗೊಂಡಿದೆ ಎಂದು ಹೇಳಲಾಗಿತ್ತು. ಆದರೆ, ಅಕ್ಟೋಬರ್ 9, 2025 ಗುರುವಾರ ಇಸ್ರೇಲ್ ಗಾಝಾ ಮೇಲೆ ದಾಳಿ ಮಾಡಿದೆ ಎಂದು ವರದಿಯಾಗಿದೆ.

ಹೌದು, ನಿನ್ನೆ ಕದನ ವಿರಾಮ ಒಪ್ಪಂದವಾಗಿದ್ದರೂ, ಇಂದು ಗಾಝಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ ಎಂದು ಗಾಝಾದ ನಾಗರಿಕ ರಕ್ಷಣಾ ಅಧಿಕಾರಿ ಮೊಹಮ್ಮದ್ ಅಲ್-ಮುಘಯ್ಯಿರ್ ಅವರು ಹೇಳಿರುವುದಾಗಿ ಸುದ್ದಿ ಸಂಸ್ಥೆ ಅಲ್-ಜಝೀರಾ ವರದಿ ಮಾಡಿದೆ.

ಕದನ ವಿರಾಮ ಒಪ್ಪಂದದ ಬಳಿಕ ಉತ್ತರ ಗಾಝಾದ ಪ್ರದೇಶಗಳಲ್ಲಿ ಹಲವಾರು ಸ್ಫೋಟಗಳು ವರದಿಯಾಗಿವೆ ಎಂದು ಅಲ್-ಮುಘಯ್ಯಿರ್ ಹೇಳಿದ್ದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...