Homeಅಂತರಾಷ್ಟ್ರೀಯಗಾಝಾ ನಾಗರಿಕರಿಗೆ ಕುಡಿಯಲು ನೀರು ಸಿಗದಂತೆ ಮಾಡುತ್ತಿರುವ ಇಸ್ರೇಲ್!

ಗಾಝಾ ನಾಗರಿಕರಿಗೆ ಕುಡಿಯಲು ನೀರು ಸಿಗದಂತೆ ಮಾಡುತ್ತಿರುವ ಇಸ್ರೇಲ್!

- Advertisement -
- Advertisement -

ಪ್ಯಾಲೆಸ್ತೀನ್‌ನ ಮಘಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ವಾಯು ದಾಳಿಯಲ್ಲಿ ಕನಿಷ್ಠ 70  ನಾಗರಿಕರು ಮೃತಪಟ್ಟಿದ್ದಾರೆ. ಇದರಿಂದ ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಬಲಿಯಾದವರ ಸಂಖ್ಯೆ 24,000 ದಾಟಿದೆ. ಗಾಝಾದಲ್ಲಿ ನಾಗರಿಕರ ನಿರಂತರ ಸಾವಿನ ಹೆಚ್ಚಳದ ಮಧ್ಯೆ ಇಸ್ರೇಲ್ ಉತ್ತರ ಗಾಝಾದಲ್ಲಿ ಬಾವಿಗಳು ಮತ್ತು ನೀರಿನ ಘಟಕಗಳ ಮೇಲೆ ಬಾಂಬ್ ದಾಳಿ ನಡೆಸಿ ಅದನ್ನು ಕಲುಷಿತಗೊಳಿಸುತ್ತಿದೆ ಮತ್ತು ನಾಗರಿಕರಿಗೆ ಕುಡಿಯಲು ಯೋಗ್ಯ ನೀರು ಸಿಗದಂತೆ ಮಾಡುತ್ತಿದೆ.

ಗಾಝಾದಲ್ಲಿ ಸುಮಾರು ಎರಡು ಮಿಲಿಯನ್ ಜನರು ತೀವ್ರ ಆಹಾರ ಮತ್ತು ನೀರಿನ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂದು ಯುಎನ್ ಹೇಳಿದೆ. ಲಭ್ಯವಿರುವ ನೀರಿನ ಪೂರೈಕೆಯಲ್ಲಿ 96 ಪ್ರತಿಶತ ಮಾನವ ಬಳಕೆಗೆ ಅನರ್ಹವಾಗಿದೆ ಎಂದು ಅಂದಾಜಿಸಲಾಗಿದೆ. ಇಸ್ರೇಲ್‌ ಪಡೆಗಳು ಉತ್ತರ ಗಾಝಾದಲ್ಲಿ ಬಾವಿಗಳು ಮತ್ತು ನೀರಿನ ಘಟಕಗಳ ಮೇಲೆ ಬಾಂಬ್ ದಾಳಿ ನಡೆಸಿವೆ. ನೀರಿನ ಮೂಲವನ್ನು ಒಡೆದು ಹಾಕುವ ಜೊತೆಗೆ ನೀರನ್ನು ಕುಡಿಯಲು ಅಯೋಗ್ಯವನ್ನಾಗಿ ಮಾಡುತ್ತಿದೆ.

ಮಘಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ವಾಯು ದಾಳಿ ನಡೆಸಿ 70  ನಾಗರಿಕರನ್ನು ಹತ್ಯೆ ಮಾಡಿರುವುದನ್ನು ಪ್ಯಾಲೆಸ್ತೀನ್‌ನ ಆರೋಗ್ಯ ಸಚಿವಾಲಯದ ವಕ್ತಾರರು ದೃಢಪಡಿಸಿದ್ದು, ಇದನ್ನು ನಿರಾಶ್ರಿತರ ಶಿಬಿರದಲ್ಲಿನ ಹತ್ಯಾಕಾಂಡ ಎಂದು ಹೇಳಿಕೊಂಡಿದ್ದಾರೆ.

ಪ್ಯಾಲೆಸ್ತೀನ್‌ನ ಪತ್ರಕರ್ತರು ಸೆರೆಹಿಡಿದ ಮತ್ತು ಅಲ್ ಜಜೀರಾ ವರದಿ ಮಾಡಿದ ವರದಿಯ ದೃಶ್ಯಾವಳಿಗಳು ಘಟನೆಯಲ್ಲಿ ನವಜಾತ ಶಿಶುಗಳು ಸೇರಿದಂತೆ ಯುದ್ಧ ಬಲಿಪಶುಗಳು ಇರುವುದನ್ನು ಸೂಚಿಸುತ್ತದೆ.  ಹತ್ತಾರು ದೇಹಗಳನ್ನು ಗಾಝಾದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕೇಂದ್ರ ಗಾಝಾದ ನಿರಾಶ್ರಿತರ ಶಿಬಿರಗಳ ಬಳಿ ಮುಖ್ಯ ರಸ್ತೆಗಳ ಮೇಲೆ ಇಸ್ರೇಲ್‌ ವಾಯು ದಾಳಿಗಳ ಮೂಲಕ ಆಂಬ್ಯುಲೆನ್ಸ್‌ಗಳು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳಿಗೆ ಗಾಯಗೊಂಡ ಜನರನ್ನು ರಕ್ಷಿಸಲು ಅಡ್ಡಿಪಡಿಸುತ್ತಿದೆ.

ಗಾಝಾದ ದಕ್ಷಿಣ ನಗರವಾದ ಖಾನ್ ಯೂನಿಸ್ ನಗರವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ತಿಂಗಳುಗಳು ತೆಗೆದುಕೊಳ್ಳಬಹುದು ಎಂದು ಇಸ್ರೇಲ್‌ನ ಮಿಲಿಟರಿ ಹೇಳುತ್ತಿದೆ. ಭಾನುವಾರ ಪ್ರಕಟವಾದ ವಾಲ್ ಸ್ಟ್ರೀಟ್ ಜರ್ನಲ್ ವರದಿಯಲ್ಲಿ ಹಿರಿಯ ಇಸ್ರೇಲ್‌ ಮಿಲಿಟರಿ ಅಧಿಕಾರಿಯೊಬ್ಬರು ಇಸ್ರೇಲ್‌ ಪಡೆಗಳು ಉತ್ತರ ಗಾಝಾದಲ್ಲಿ ಮಾಡಿದ ರೀತಿಯಲ್ಲಿಯೇ ನಿಯಂತ್ರಣವನ್ನು ಸಾಧಿಸಲು ತಿಂಗಳುಗಳನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಯುದ್ಧ ಘೋಷಣೆ ಬಳಿಕ ಇಸ್ರೇಲ್‌ ಗಾಝಾ ಮೇಲೆ ನಡೆಸಿದ ದಾಳಿಯಲ್ಲಿ ಕನಿಷ್ಠ 24,424ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 54,036 ಮಂದಿ ಗಾಯಗೊಂಡಿದ್ದಾರೆ ಎಂದು ಇತ್ತೀಚಿನ ಅಂಕಿ-ಅಂಶಗಳು ಬಹಿರಂಗಪಡಿಸುತ್ತಿದೆ. ಮೃತರಲ್ಲಿ 60% ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ಅಂಕಿ-ಅಂಶಗಳು ಬಹಿರಂಗಪಡಿಸಿದೆ.

ವಿಶ್ವವು ನರಮೇಧಕ್ಕೆ ಅವಕಾಶ ನೀಡುತ್ತಿದೆ: ಯುಎನ್ ಕಳವಳ

ಯುಎನ್‌ನ ಫ್ರಾನ್ಸೆಸ್ಕಾ ಅಲ್ಬನೀಸ್ ಇಸ್ರೇಲ್‌ ಗಾಝಾ ಮೇಲೆ ನಡೆಸುತ್ತಿರುವ ಯುದ್ಧ ಅಪರಾಧವನ್ನು ನರಮೇಧ ಎಂದು ಕರೆದ್ದಾರೆ. ಇದು ನರಮೇಧದ ಒಂದು ಪ್ರಕ್ರಿಯೆ, ಏಕ ಕ್ರಿಯೆಯಲ್ಲ ಎಂದು ಹೇಳಿದ್ದು, ನೀವು ಹತ್ತಿರದಿಂದ ನೋಡಿದರೆ ಇದು ನಾಗರಿಕರ ಇತರ ಹತ್ಯಾಕಾಂಡಗಳಿಗಿಂತ ಭಿನ್ನವಾಗಿಲ್ಲ ಎಂದು ಹೇಳಿದ್ದಾರೆ.

ನರಮೇಧವನ್ನು ತಡೆಯಬೇಕು. ಅದನ್ನು ಸಂಭವಿಸಲು ಬಿಡಬಾರದು ಆದರೆ ಗಾಝಾದಲ್ಲಿ ಅದನ್ನು ಸಂಭವಿಸಲು ಬಿಡಲಾಗುತ್ತದೆ  ಫ್ರಾನ್ಸೆಸ್ಕಾ ಅಲ್ಬನೀಸ್ ಆಘಾತವನ್ನು ವ್ಯಕ್ತಪಡಿಸಿದ್ದಾರೆ.

ಇದಲ್ಲದೆ ಕಳೆದ 10 ವಾರಗಳಿಂದ ನಡೆಯುತ್ತಿರುವ ಯುದ್ಧದಿಂದಾಗಿ ನಿರಂತರ ಬಾಂಬ್ ದಾಳಿಗಳು ವಾತಾವರಣವನ್ನೇ ಕಲುಷಿತಗೊಳಿಸಿದ್ದು, ಜನರು ಉಸಿರಾಟದ ಸಮಸ್ಯೆಯಿಂದ ಬಳಲುವಂತಾಗಿದೆ. ಹಸಿವು, ಅನಾರೋಗ್ಯದಿಂದ ಜನರು ಬಳಲುತ್ತಿದ್ದಾರೆ. ಚಿಕನ್ಪಾಕ್ಸ್, ದದ್ದುಗಳು, ಮೂತ್ರನಾಳದ ಸೋಂಕುಗಳು, ಮೆನಿಂಜೈಟಿಸ್, ಮಂಪ್ಸ್, ಸ್ಕೇಬೀಸ್, ದಡಾರ ಮತ್ತು ಪುಡ್‌ ಪ್ಯಾಯಿಸನಿಂಗ್‌, ಅತಿಸಾರ, ಕಾಮಾಲೆ ಮತ್ತು ಉಸಿರಾಟದ ಸೋಂಕುಗಳು ಗಾಝಾದಲ್ಲಿ ಹೆಚ್ಚುತ್ತಿದೆ ಎಂದು ಗಾಝಾದ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ. ಇದಲ್ಲದೆ ಯುದ್ಧ ಪೀಡಿತ ಭೂಮಿಯಲ್ಲಿ ವಿಶ್ವಸಂಸ್ಥೆಯು ಸಂಭಾವ್ಯ 14 ರೋಗಗಳನ್ನು ಪತ್ತೆಹಚ್ಚಿದೆ.

ಯುದ್ಧದಿಂದಾಗಿ ಗಾಝಾದ ಪ್ರಾಥಮಿಕ ಆರೈಕೆ ಕೇಂದ್ರಗಳಲ್ಲಿ 3ನೇ ಎರಡರಷ್ಟು ಮುಚ್ಚಲಾಗಿದೆ ಎಂದು WHO ಹೇಳಿದೆ. ಗಾಝಾದ 36 ಆಸ್ಪತ್ರೆಗಳಲ್ಲಿ 11 ಭಾಗಶಃ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಸುಮಾರು 1.3 ಮಿಲಿಯನ್ ಜನರು ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ 220 ಜನರಿಗೆ ಸರಾಸರಿ ಒಂದು ಶೌಚಾಲಯ ಮತ್ತು ಪ್ರತಿ 4,500ಗೆ ಒಂದು ಮಾತ್ರ ಶವರ್ ಇದೆ ಎನ್ನುವ ಆಘಾತಕಾರಿ ಸತ್ಯವು ಬಹಿರಂಗವಾಗಿದೆ.

ಇದನ್ನು ಓದಿ: ಗಾಝಾದಲ್ಲಿ ನೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ 136 UN ಸಿಬ್ಬಂದಿಗಳ ಹತ್ಯೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...