Homeಮುಖಪುಟಗಾಝಾ ಮೇಲಿನ ಇಸ್ರೇಲ್ ಆಕ್ರಮಣಕ್ಕೆ 6 ತಿಂಗಳು: 33 ಸಾವಿರ ದಾಟಿದ ಸಾವಿನ ಸಂಖ್ಯೆ

ಗಾಝಾ ಮೇಲಿನ ಇಸ್ರೇಲ್ ಆಕ್ರಮಣಕ್ಕೆ 6 ತಿಂಗಳು: 33 ಸಾವಿರ ದಾಟಿದ ಸಾವಿನ ಸಂಖ್ಯೆ

- Advertisement -
- Advertisement -

ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ಪ್ರಾರಂಭಗೊಂಡು ಆರು ತಿಂಗಳು ತುಂಬಿದ್ದು, ಗಾಝಾದಲ್ಲಿ ಸಾವಿನ ಸಂಖ್ಯೆ 33 ಸಾವಿರ ದಾಟಿದೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾ ಮೇಲೆ ಇಸ್ರೇಲ್ ಆಕ್ರಮಣ ನಡೆಸಲು ಪ್ರಾರಂಭಿಸಿ ಅರ್ಧ ವರ್ಷ ಪೂರ್ಣಗೊಂಡರೂ, ಯುದ್ದ ನಿಲ್ಲುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ. ಪ್ರತಿ ದಿನವೂ ಗಾಝಾದಲ್ಲಿ ಕಟ್ಟಡಗಳು ಉರುಳುವುದು ನೂರಾರು ಜನರು ಸಾವನ್ನಪ್ಪುವುದು ಮುಂದುವರೆಯುತ್ತಲೇ ಇದೆ.

ಇಸ್ರೇಲ್ ಸೇನೆ ಹಮಾಸ್ ಹೆಸರೇಳಿಕೊಂಡು ಗಾಝಾದ ಮೇಲೆ ಮನ ಬಂದಂತೆ ಮಿಸೈಲ್ ದಾಳಿ, ಯುದ್ಧ ಟ್ಯಾಂಕರ್‌ಗಳ ಮೂಲಕ ದಾಳಿ, ಕಂಡ ಕಂಡಲ್ಲಿ ಮನುಷ್ಯರನ್ನು ಗುಂಡಿಟ್ಟು ಕೊಲ್ಲುವ ಮೂಲಕ ಅಕ್ಷರಶಃ ನರಕವನ್ನಾಗಿಸಿದೆ.

ಗಾಝಾದ ಲಕ್ಷಾಂತರ ನಾಗರಿಕರು ತಮ್ಮದೆಲ್ಲವನ್ನು ಬಿಟ್ಟು ದೂರದ ಊರುಗಳಿಗೆ ಪಲಾಯಣ ಮಾಡಿದ್ದಾರೆ. ಆದರೆ, ಅಲ್ಲಿಯೂ ಶಿಬಿರಗಳನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸುತ್ತಿದೆ. ಉತ್ತರ ಗಾಝಾದಲ್ಲಿ ಲಕ್ಷಾಂತರ ಜನರು ಹಸಿವಿನಿಂದ ನರಳುತ್ತಿದ್ದಾರೆ. ಒಂದೆಡೆ ಬರಗಾಲ ಮತ್ತೊಂದೆಡೆ ಆಹಾರದ ಕೊರತೆ ಜನರನ್ನು ನರಳುವಂತೆ ಮಾಡಿದೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಗಾಝಾದ ದಕ್ಷಿಣದ ನಗರದಲ್ಲಿ ಮಕ್ಕಳು, ಮಹಿಳೆಯರು, ವೃದ್ದರೂ ಎನ್ನದೆ ಎಲ್ಲಾ ವರ್ಗದ ಜನರು ಆಹಾರಕ್ಕಾಗಿ ಪಾತ್ರೆ ಹಿಡಿದು ನಿಂತಿರುವ ದೃಶ್ಯಗಳು ಕಾಣುತ್ತಿವೆ. ರಫಾ ನಗರದಲ್ಲಿ ಯಾವುದೇ ಸೌಲಭ್ಯಗಳಿಲ್ಲದ ಟೆಂಟ್‌ಗಳು ತುಂಬಿವೆ. ಗಾಝಾದ ಇತರ ಭಾಗಗಳಲ್ಲಿ ಇಸ್ರೇಲ್‌ನ ಆಕ್ರಮಣದಿಂದ ಪಲಾಯನ ಮಾಡಿದ ಲಕ್ಷಾಂತರ ಪ್ಯಾಲೆಸ್ತೀನಿಯರು ತುಂಬಿದ್ದಾರೆ. ರಫಾ ನಗರದಲ್ಲಿ ನಿರಾಶ್ರಿತ ಆಗಮನದಿಂದ ಜನಸಂಖ್ಯೆ ಸುಮಾರು 1.4 ಮಿಲಿಯನ್‌ಗೆ ತಲುಪಿದೆ. ಇದು ಅಲ್ಲಿನ ಸಾಮಾನ್ಯ ಜನಸಂಖ್ಯೆಗಿಂತ ಐದು ಪಟ್ಟು ಹೆಚ್ಚು ಎಂದು ಹೇಳಲಾಗ್ತಿದೆ.

ಆರು ತಿಂಗಳು ಕಳೆದರೂ ಇನ್ನೂ ಇಸ್ರೇಲ್ ಆಕ್ರಮಣ ಯಾವ ದಿಕ್ಕಿದೆ ಮುಂದುವರೆಯಿಲಿದೆ ಎಂದು ಗೊತ್ತಾಗುತ್ತಿಲ್ಲ. ವಿಶ್ವ ಸಂಸ್ಥೆಯ ಭದ್ರತಾ ಸಮಿತಿ, ಮಾನವ ಹಕ್ಕುಗಳ ಸಮಿತಿಯಲ್ಲಿ ಹಲವು ಬಾರಿ ತಕ್ಷಣ ಕದನ ವಿರಾಮಕ್ಕೆ ನಿರ್ಣಯ ಅಂಗೀಕರಿಸಿದರೂ ಯಾವುದೇ ಪರಿಣಾಮ ಬೀರಿಲ್ಲ. ಹಮಾಸ್ ಮತ್ತು ಇಸ್ರೇಲ್ ನಡುವೆ ಯುಎಸ್‌ಎಸ್‌ಎ, ಈಜಿಪ್ಟ್, ಕತಾರ್ ಮಧ್ಯಸ್ಥಿಕೆ ನಡೆಸಿದರೂ, ಅದೂ ಫಲ ಕೊಟ್ಟಿಲ್ಲ. ಇಸ್ರೇಲ್ ತನ್ನ ಆಕ್ರಮಣವನ್ನು ರಫಾಗೆ ವಿಸ್ತರಿಸಲು ನಿರ್ಧರಿಸಿದೆ ಎಂದು ಅಲ್ಲಿನ ರಕ್ಷಣಾ ಸಚಿವ ಹೇಳಿದ್ದಾರೆ. ಹಾಗೇನಾದರು ಆದರೆ, ಸಾವು-ನೋವುಗಳ ಸಂಖ್ಯೆ ಹೆಚ್ಚಾಗಬಹುದು.

ಅಕ್ಟೋಬರ್ 7, 2023ರಂದು ಪ್ರಾರಂಭಗೊಂಡ ಹಮಾಸ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ 6 ತಿಂಗಳ ಕಳೆದರೂ ಮುಂದುವರೆದಿದೆ. ಈ ಯುದ್ಧದಲ್ಲಿ ಇಸ್ರೇಲ್ ಮತ್ತು ಹಮಾಸ್‌ನ ಎಷ್ಟು ಜನರು ಬಲಿಯಾಗಿದ್ದಾರೆ ಗೊತ್ತಿಲ್ಲ. ಆದರೆ, 30 ಸಾವಿರದಷ್ಟು ಅಮಾಯಕ ನಾಗರಿಕರು ಮಾತ್ರ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ : ಇಸ್ರೇಲ್‌ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಸುರಕ್ಷಿತವಾಗಿರಲ್ಲ: ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...